ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 09th, 10:15 am

ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.

ಜನವರಿ 4ರಂದು ನವದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಉದ್ಘಾಟಿಸಲಿರುವ ಪ್ರಧಾನಮಂತ್ರಿ

January 03rd, 05:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 4ರಂದು ಬೆಳಗ್ಗೆ 10:30ಕ್ಕೆ ನವದೆಹಲಿಯ ಭಾರತ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಗುಜರಾತಿನ ಕಚ್‌ನಲ್ಲಿ ದೀಪಾವಳಿಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಗೆ ಪ್ರಧಾನಮಂತ್ರಿಯವರ ಭಾಷಣದ ಪಠ್ಯ

October 31st, 07:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಕಚ್‌ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿಎಸ್‌ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು.

"ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ ನ ಕಚ್‌ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು "

October 31st, 07:00 pm

ಗುಜರಾತ್‌ ನ ಕಚ್‌ ನ ಕ್ರೀಕ್ ಏರಿಯಾದಲ್ಲಿರುವ ಲಕ್ಕಿ ನಾಲಾದಲ್ಲಿ ಬಿ.ಎಸ್‌.ಎಫ್, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ವೀರ ಸಿಬ್ಬಂದಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೀಪಾವಳಿಯನ್ನು ಆಚರಿಸಿದರು.

ಮೋದಿ ಬದುಕಿರುವವರೆಗೂ ಎಸ್‌ಟಿ-ಎಸ್‌ಸಿ-ಒಬಿಸಿ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ಬನಸ್ಕಾಂತದಲ್ಲಿ ಪ್ರಧಾನಿ ಮೋದಿ

May 01st, 04:30 pm

ಗುಜರಾತ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್‌ನ ಬನಸ್ಕಾಂತದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್‌ನ ಮಹತ್ವವನ್ನು ಒತ್ತಿ ಹೇಳಿದರು.

ಪ್ರಧಾನಿ ಮೋದಿ ಅವರು ಗುಜರಾತ್‌ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

May 01st, 04:00 pm

ಗುಜರಾತ್‌ನ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುಜರಾತ್‌ನ ಬನಸ್ಕಾಂತ ಮತ್ತು ಸಬರಕಾಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ತಮ್ಮ ಭಾಷಣವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದಲ್ಲಿ ಮೂರನೇ ಅವಧಿಗೆ ಆಶೀರ್ವಾದ ಪಡೆಯುವ ಅವಕಾಶಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣದಲ್ಲಿ ಗುಜರಾತ್‌ನ ಮಹತ್ವವನ್ನು ಒತ್ತಿ ಹೇಳಿದರು.

ನವದೆಹಲಿಯ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ಎನ್‌ಸಿಸಿ ಕೆಡೆಟ್ಸ್ ರಾಲಿ(Rally) ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

January 27th, 05:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಶ್ರೀ ರಾಜನಾಥ್ ಸಿಂಗ್ ಜಿ, ಶ್ರೀ ಅಜಯ್ ಭಟ್ ಜಿ, ಸಶಸ್ತ್ರ ಪಡೆಗಳ ಮುಖ್ಯಸ್ಥ(ಸಿಡಿಎಸ್)ರಾದ ಜನರಲ್ ಅನಿಲ್ ಚೌಹಾಣ್ ಜಿ, ಎಲ್ಲಾ 3 ಸೇನಾಪಡೆಗಳ ಮುಖ್ಯಸ್ಥರೆ, ರಕ್ಷಣಾ ಕಾರ್ಯದರ್ಶಿ, ಎನ್‌ಸಿಸಿ ಮಹಾನಿರ್ದೇಶಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ ಮತ್ತು ಎನ್‌ಸಿಸಿಯ ನನ್ನ ಯುವ ಒಡನಾಡಿಗಳೆ!

ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ʻಎನ್‌ಸಿಸಿ ಪಿಎಂ ರ‍್ಯಾಲಿ’ ಉದ್ದೇಶಿಸಿ ಪ್ರಧಾನಿ ಭಾಷಣ

January 27th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕಾರ್ಯಪ್ಪ ಪೆರೇಡ್ ಮೈದಾನದಲ್ಲಿ ವಾರ್ಷಿಕ ʻಎನ್‌ಸಿಸಿ ಪಿಎಂ ರ‍್ಯಾಲಿʼಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಶ್ರೀ ಮೋದಿ ಅವರು ಸಾಕ್ಷಿಯಾದರು. ಅತ್ಯುತ್ತಮ ಕೆಡೆಟ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಎನ್‌ಸಿಸಿ ಬಾಲಕಿಯರ ಮೆಗಾ ಸೈಕ್ಲೋಥಾನ್ ಮತ್ತು ಝಾನ್ಸಿಯಿಂದ ದೆಹಲಿಗೆ ʻನಾರಿಶಕ್ತಿ ವಂದನೆ ಓಟʼಕ್ಕೂ (ಎನ್ಎಸ್‌ವಿಆರ್‌) ಅವರು ಹಸಿರು ನಿಶಾನೆ ತೋರಿದರು.