
Today, be it major nations or global platforms, the confidence in India is stronger than ever: PM at ET Summit
February 15th, 08:30 pm
PM Modi, while addressing the ET Now Global Business Summit 2025, highlighted India’s rapid economic growth and reforms. He emphasized India’s rise as a global economic leader, crediting transformative policies like the SVAMITVA Yojana and banking reforms. He stressed the importance of a positive mindset, swift justice, and ease of doing business, reaffirming India's commitment to Viksit Bharat.
ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ-2025ನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣ
February 15th, 08:00 pm
ನವದೆಹಲಿಯಲ್ಲಿ ಇಂದು ನಡೆದ ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2025ರಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಟಿ ನೌ ಶೃಂಗಸಭೆಯ ಕಳೆದ ಆವೃತ್ತಿಯಲ್ಲಿ, ಭಾರತವು ತಮ್ಮ ಮೂರನೇ ಅವಧಿಯಲ್ಲಿ ಹೊಸ ವೇಗದಲ್ಲಿ ಕೆಲಸ ಮಾಡುತ್ತದೆ ಎಂದು ವಿನಮ್ರವಾಗಿ ಹೇಳಿದ್ದನ್ನು ನೆನಪಿಸಿಕೊಂಡರು. ಈ ವೇಗವು ಈಗ ತೀವ್ರವಾಗಿದ್ದು ದೇಶದಿಂದ ಬೆಂಬಲವನ್ನು ಪಡೆಯುತ್ತಿರುವುದಾಗಿ ಅವರು ತೃಪ್ತಿ ವ್ಯಕ್ತಪಡಿಸಿದರು. ವಿಕಸಿತ ಭಾರತದ ಬದ್ಧತೆಗೆ ಅಪಾರ ಬೆಂಬಲ ನೀಡಿದ ಒಡಿಶಾ, ಮಹಾರಾಷ್ಟ್ರ, ಹರಿಯಾಣ ಮತ್ತು ನವದೆಹಲಿಯ ಜನರಿಗೆ ಅವರು ಧನ್ಯವಾದ ಅರ್ಪಿಸಿದರು. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಮುಟ್ಟುವಲ್ಲಿ ದೇಶದ ನಾಗರಿಕರು ಹೇಗೆ ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿ ಕೆಲಸ ಮಾಡುತ್ತಿದ್ದಾರೆ ಎಂಬುದಕ್ಕೆ ದೊರೆತ ಮನ್ನಣೆ ಇದು ಎಂದು ಅವರು ಹೇಳಿದರು.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಉತ್ತರ
February 06th, 04:21 pm
ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ಸನ್ಮಾನ್ಯ ರಾಷ್ಟ್ರಪತಿ ಅವರ ಭಾಷಣವು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿಯಾಗಿತ್ತು, ಭವಿಷ್ಯದ ಕೆಲಸಗಳಿಗಾಗಿ ನಮಗೆಲ್ಲರಿಗೂ ಮಾರ್ಗದರ್ಶನವಾಗಿ ಕಾರ್ಯ ನಿರ್ವಹಿಸಿತು. ಸನ್ಮಾನ್ಯ ರಾಷ್ಟ್ರಪತಿಗಳ ಭಾಷಣಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಇಲ್ಲಿದ್ದೇನೆ!ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 06th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಷ್ಟ್ರಪತಿಯವರ ಭಾಷಣವು ಭಾರತದ ಸಾಧನೆಗಳು, ಭಾರತದಿಂದ ಜಾಗತಿಕ ನಿರೀಕ್ಷೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಶ್ರೀಸಾಮಾನ್ಯನ ನಂಬಿಕೆ ಒಳಗೊಂಡಿದೆ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣ ಸ್ಪೂರ್ತಿದಾಯಕವಾಗಿದೆ, ಪ್ರಭಾವಶಾಲಿಯಾಗಿದೆ ಮತ್ತು ಭವಿಷ್ಯದ ಕೆಲಸಗಳಿಗೆ ಮಾರ್ಗದರ್ಶನ ನೀಡಿದೆ ಎಂದು ಅವರು ಹೇಳಿದರು. ಅವರು ರಾಷ್ಟ್ರಪತಿಯವರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿದರು.We launched the SVAMITVA Yojana to map houses and lands using drones, ensuring property ownership in villages: PM
January 18th, 06:04 pm
PM Modi distributed over 65 lakh property cards under the SVAMITVA Scheme to property owners across more than 50,000 villages in over 230 districts across 10 states and 2 Union Territories. Reflecting on the scheme's inception five years ago, he emphasised its mission to ensure rural residents receive their rightful property documents. He expressed that the government remains committed to realising Gram Swaraj at the grassroots level.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಸ್ವಾಮಿತ್ವ” ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು
January 18th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 230 ಕ್ಕೂ ಹೆಚ್ಚು ಜಿಲ್ಲೆಗಳ ಸುಮಾರು 50000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ “ಸ್ವಾಮಿತ್ವ”(ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ಗ್ರಾಮಗಳ ಸಮೀಕ್ಷೆ ಮತ್ತು ನಕ್ಷೆ ರಚನೆ) ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್‌ಗಳನ್ನು ವಿಡಿಯೊ ಸಮಾವೇಶ ಮೂಲಕ ವಿತರಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ, “ಸ್ವಾಮಿತ್ವ” ಯೋಜನೆಗೆ ಸಂಬಂಧಿಸಿದ ಅನುಭವಗಳನ್ನು ತಿಳಿದುಕೊಳ್ಳಲು ಅವರು ಐದು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಸ್ವಾಮಿತ್ವ ಯೋಜನೆಯಡಿ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 18th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 230 ಕ್ಕೂ ಹೆಚ್ಚು ಜಿಲ್ಲೆಗಳ 50,000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದು ಭಾರತದ ಹಳ್ಳಿಗಳು ಮತ್ತು ಗ್ರಾಮೀಣ ಪ್ರದೇಶಗಳಿಗೆ ಚರಿತ್ರಾರ್ಹ ದಿನವಾಗಿದೆ ಎಂದರಲ್ಲದೆ ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳು ಮತ್ತು ನಾಗರಿಕರಿಗೆ ಶುಭ ಕೋರಿದರು.ಐಎನ್‌ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ
January 15th, 11:08 am
ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 15th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.Politics is about winning people's hearts, says PM Modi in podcast with Nikhil Kamath
January 10th, 02:15 pm
Prime Minister Narendra Modi engages in a deep and insightful conversation with entrepreneur and investor Nikhil Kamath. In this discussion, they explore India's remarkable growth journey, PM Modi's personal life story, the challenges he has faced, his successes and the crucial role of youth in shaping the future of politics.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ನಲ್ಲಿ ಉದ್ಯಮಿ ನಿಖಿಲ್ ಕಾಮತ್ ಅವರೊಂದಿಗೆ ಸಂವಾದ ನಡೆಸಿದರು
January 10th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಮೊದಲ ಪಾಡ್ಕ್ಯಾಸ್ಟ್ನಲ್ಲಿ ಉದ್ಯಮಿ ಮತ್ತು ಹೂಡಿಕೆದಾರ ನಿಖಿಲ್ ಕಾಮತ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಅವರ ಬಾಲ್ಯದ ಬಗ್ಗೆ ಕೇಳಿದಾಗ, ಪ್ರಧಾನಿಯವರು ತಮ್ಮ ಆರಂಭಿಕ ಜೀವನದ ಅನುಭವಗಳನ್ನು ಹಂಚಿಕೊಂಡರು ಮತ್ತು ಉತ್ತರ ಗುಜರಾತ್ ನ ಮೆಹ್ಸಾನಾ ಜಿಲ್ಲೆಯ ಸಣ್ಣ ಪಟ್ಟಣವಾದ ವಡ್ನಗರದಲ್ಲಿನ ತಮ್ಮ ಮೂಲದ ಬಗ್ಗೆ ಮಾತನಾಡಿದರು. ಗಾಯಕ್ವಾಡ್ ಸಾಮ್ರಾಜ್ಯದ ವಡ್ನಗರ ಪಟ್ಟಣವು ಶಿಕ್ಷಣದ ಬಗೆಗಿನ ತನ್ನ ಬದ್ಧತೆಗೆ ಹೆಸರುವಾಸಿಯಾಗಿದ್ದು, ಕೊಳ, ಅಂಚೆ ಕಚೇರಿ ಮತ್ತು ಗ್ರಂಥಾಲಯದಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿದೆ ಎಂದು ಅವರು ಹೇಳಿದರು. ಗಾಯಕ್ವಾಡ್ ರಾಜ್ಯ ಪ್ರಾಥಮಿಕ ಶಾಲೆ ಮತ್ತು ಭಾಗವತಾಚಾರ್ಯ ನಾರಾಯಣಾಚಾರ್ಯ ಪ್ರೌಢಶಾಲೆಯಲ್ಲಿ ಕಳೆದ ತಮ್ಮ ಶಾಲಾ ದಿನಗಳನ್ನು ಪ್ರಧಾನಮಂತ್ರಿಯವರು ನೆನೆದರು. ವಡ್ನಗರದಲ್ಲಿ ಸಾಕಷ್ಟು ಸಮಯ ಕಳೆದಿದ್ದ ಚೀನೀ ತತ್ವಜ್ಞಾನಿ ಕ್ಸುವಾನ್ ಜಾಂಗ್ ಅವರ ಕುರಿತು ನಿರ್ಮಿಸಲಾಗುತ್ತಿರುವ ಚಲನಚಿತ್ರದ ಬಗ್ಗೆ ಅವರು ಒಮ್ಮೆ ಚೀನೀ ರಾಯಭಾರ ಕಚೇರಿಗೆ ಬರೆದಿದ್ದರ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡರು. 2014 ರಲ್ಲಿ ತಾವು ಭಾರತದ ಪ್ರಧಾನಿಯಾದಾಗ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಕ್ಸುವಾನ್ಜಾಂಗ್ ಮತ್ತು ತಮ್ಮ ಊರುಗಳ ನಡುವಿನ ಐತಿಹಾಸಿಕ ಸಂಬಂಧವನ್ನು ಉಲ್ಲೇಖಿಸಿ ಗುಜರಾತ್ ಮತ್ತು ವಡ್ನಗರಕ್ಕೆ ಭೇಟಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದನ್ನು ಪ್ರಧಾನಮಂತ್ರಿಯವರು ನೆನಪಿಸಿಕೊಂಡರು. ಈ ಸಂಪರ್ಕವು ಎರಡೂ ದೇಶಗಳ ನಡುವಿನ ಹಂಚಿಕೆಯ ಪರಂಪರೆ ಮತ್ತು ಬಲವಾದ ಸಂಬಂಧಗಳನ್ನು ಎತ್ತಿ ತೋರಿಸಿದೆ ಎಂದು ಅವರು ಹೇಳಿದರು.ಭಾರತ್ ಗ್ರಾಮೀಣ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 04th, 11:15 am
ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಜೀ, ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಜೀ, ಇಲ್ಲಿ ಉಪಸ್ಥಿತರಿರುವ ನಬಾರ್ಡ್ನ ಹಿರಿಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಬ್ಯಾಂಕುಗಳು, ರೈತ ಉತ್ಪಾದಕ ಸಂಸ್ಥೆ (FPO) ಗಳು ಇತರ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,PM Modi inaugurates the Grameen Bharat Mahotsav 2025
January 04th, 10:59 am
PM Modi inaugurated Grameen Bharat Mahotsav in Delhi. He highlighted the launch of campaigns like the Swamitva Yojana, through which people in villages are receiving property papers. He remarked that over the past 10 years, several policies have been implemented to promote MSMEs and also mentioned the significant contribution of cooperatives in transforming the rural landscape.ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 09th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.ಉತ್ತರಾಖಂಡ ಸ್ಥಾಪನಾ ದಿವಸದಂದು ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
November 09th, 11:00 am
ಇಂದು ಉತ್ತರಾಖಂಡದ ರಜತ ಮಹೋತ್ಸವ ವರ್ಷದ ಆರಂಭವನ್ನು ಸೂಚಿಸುತ್ತದೆ. ಅಂದರೆ, ಉತ್ತರಾಖಂಡವು ತನ್ನ 25ನೇ ವರ್ಷಕ್ಕೆ ಕಾಲಿಡುತ್ತಿದೆ. ನಾವು ಮುಂದೆ ನೋಡುತ್ತಿರುವಾಗ, ಉತ್ತರಾಖಂಡದ ಉಜ್ವಲ ಮತ್ತು ಸಮೃದ್ಧ ಭವಿಷ್ಯವನ್ನು ನಿರ್ಮಿಸಲು ಬದ್ಧರಾಗಿ ಮುಂದಿನ 25 ವರ್ಷಗಳ ಪ್ರಯಾಣವನ್ನು ನಾವು ಪ್ರಾರಂಭಿಸಬೇಕು. ಇದರಲ್ಲಿ ಒಂದು ಸಂತೋಷಕರ ಕಾಕತಾಳೀಯವಿದೆ: ನಮ್ಮ ಪ್ರಗತಿಯು ಭಾರತದ ಅಮೃತ ಕಾಲದೊಂದಿಗೆ ಹೊಂದಿಕೆಯಾಗುತ್ತದೆ, ಇದು ರಾಷ್ಟ್ರೀಯ ಬೆಳವಣಿಗೆಗೆ ಮೀಸಲಾಗಿರುವ ಗಮನಾರ್ಹ 25 ವರ್ಷಗಳ ಅವಧಿಯಾಗಿದೆ. ಈ ಸಂಗಮವು ಅಭಿವೃದ್ಧಿ ಹೊಂದಿದ ಭಾರತದ ಭಾಗವಾಗಿ ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವನ್ನು ಬಿಂಬಿಸುತ್ತದೆ, ಈ ಯುಗದಲ್ಲಿ ನಮ್ಮ ಹಂಚಿಕೆಯ ಆಕಾಂಕ್ಷೆಗಳು ಸಾಕಾರಗೊಳ್ಳುತ್ತಿವೆ. ಉತ್ತರಾಖಂಡದ ಜನರು ಮುಂಬರುವ 25 ವರ್ಷಗಳ ಗುರಿಗಳನ್ನು ಕೇಂದ್ರೀಕರಿಸಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ನನಗೆ ಸಂತೋಷವಾಗಿದೆ. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಆಚರಿಸಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ದೃಷ್ಟಿಕೋನವು ಪ್ರತಿಯೊಬ್ಬ ನಿವಾಸಿಯಲ್ಲೂ ಪ್ರತಿಧ್ವನಿಸುತ್ತದೆ. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ನಿರ್ಣಾಯಕ ನಿರ್ಣಯಕ್ಕಾಗಿ, ನಾನು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಕೇವಲ ಎರಡು ದಿನಗಳ ಹಿಂದೆ, ಪ್ರವಾಸಿ ಉತ್ತರಾಖಂಡ್ ಸಮ್ಮೇಳನವನ್ನು ಸಹ ಯಶಸ್ವಿಯಾಗಿ ನಡೆಸಲಾಯಿತು. ನಮ್ಮ ವಲಸಿಗ ಉತ್ತರಾಖಂಡಿಗಳು ರಾಜ್ಯದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಪಾತ್ರ ವಹಿಸುವುದನ್ನು ಮುಂದುವರಿಸುತ್ತಾರೆ ಎಂಬ ವಿಶ್ವಾಸ ನನಗಿದೆ.ದೇವಭೂಮಿ ಉತ್ತರಾಖಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಉತ್ತರಾಖಂಡದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
November 09th, 10:40 am
ಉತ್ತರಾಖಂಡದ ಸಂಸ್ಥಾಪನಾ ದಿನದಂದು ಅಲ್ಲಿನ ಎಲ್ಲ ಜನತೆಗೆ ಶುಭ ಕೋರಿರುವ ಪ್ರಧಾನಮಂತ್ರಿಯವರು, ಇಂದಿನಿಂದ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ವರ್ಷ ಆರಂಭವಾಗುತ್ತಿರುವುದನ್ನು ಉಲ್ಲೇಖಿಸಿದರು. ಉತ್ತರಾಖಂಡವು ರಾಜ್ಯ ಸ್ಥಾಪನೆಯ 25ನೇ ವರ್ಷಕ್ಕೆ ಪ್ರವೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀ ಮೋದಿ, ರಾಜ್ಯದ ಮುಂಬರುವ 25 ವರ್ಷಗಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುವಂತೆ ಜನರನ್ನು ಆಗ್ರಹಿಸಿದರು. ಉತ್ತರಾಖಂಡದ ಮುಂಬರುವ 25 ವರ್ಷಗಳ ಪ್ರಯಾಣವು ಭಾರತದ ಅಮೃತ್ ಕಾಲ್ ನ 25 ನೇ ವರ್ಷದ ಜೊತೆ ಸರಿಹೊಂದಿಕೆಯಾಗುವಂತಿದೆ. ಇದೊಂದು ಕಾಕತಾಳೀಯ ಎಂದ ಪ್ರಧಾನ ಮಂತ್ರಿ ಅವರು, ಇದು ವಿಕ್ಷಿತ್ ಭಾರತ್ ಗಾಗಿ ವಿಕ್ಷಿತ್ (ಅಭಿವೃದ್ಧಿ ಹೊಂದಿದ) ಉತ್ತರಾಖಂಡವನ್ನು ಸಂಕೇತಿಸುತ್ತದೆ ಎಂದರು. ಈ ಅವಧಿಯಲ್ಲಿ ವಿಕ್ಷಿತ್ ಭಾರತದ ಸಂಕಲ್ಪ ಈಡೇರುವುದಕ್ಕೆ ದೇಶ ಸಾಕ್ಷಿಯಾಗಲಿದೆ ಎಂದು ಶ್ರೀ ಮೋದಿ ಹೇಳಿದರು. ಮುಂಬರುವ 25 ವರ್ಷಗಳಲ್ಲಿ ಸಂಕಲ್ಪಗಳ ಜೊತೆಗೆ ಜನರು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಹರಡಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ಗುರಿ ರಾಜ್ಯದ ಪ್ರತಿಯೊಬ್ಬ ನಿವಾಸಿಯನ್ನು ತಲುಪಲಿದೆ ಎಂದು ಅವರು ಹೇಳಿದರು. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಶ್ರೀ ಮೋದಿ ಅವರು ರಾಜ್ಯದ ಎಲ್ಲ ನಿವಾಸಿಗಳನ್ನು ಅಭಿನಂದಿಸಿದರು. ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾದ 'ಪ್ರವಾಸಿ ಉತ್ತರಾಖಂಡ ಸಮ್ಮೇಳನ'ದ ಬಗ್ಗೆಯೂ ಅವರು ಗಮನಸೆಳೆದರು ಮತ್ತು ಉತ್ತರಾಖಂಡದ ಅಭಿವೃದ್ಧಿಯಲ್ಲಿ ಸಾಗರೋತ್ತರ ಉತ್ತರಾಖಂಡದ ಜನರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.ಕಾಂಗ್ರೆಸ್, ಎನ್‌ಸಿ ಮತ್ತು ಪಿಡಿಪಿಯ ಮೂರು ಕುಟುಂಬಗಳ ಆಡಳಿತದಿಂದ ಜಮ್ಮು ಮತ್ತು ಕಾಶ್ಮೀರದ ಜನರು ಬೇಸತ್ತಿದ್ದಾರೆ: ಪ್ರಧಾನಿ ಮೋದಿ
September 28th, 12:35 pm
ಜಮ್ಮುವಿನಲ್ಲಿ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಶಹೀದ್ ಸರ್ದಾರ್ ಭಗತ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಲಕ್ಷಾಂತರ ಭಾರತೀಯ ಯುವಕರಿಗೆ ಸ್ಫೂರ್ತಿಯ ಮೂಲವಾಗಿ ಅವರನ್ನು ಗೌರವಿಸಿದರು. J&K ವಿಧಾನಸಭಾ ಚುನಾವಣೆಯ ಅಂತಿಮ ರ್ಯಾಲಿಯಲ್ಲಿ, PM ಮೋದಿ ಅವರು ಕಳೆದ ವಾರಗಳಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಮ್ಮ ಭೇಟಿಗಳನ್ನು ಪ್ರತಿಬಿಂಬಿಸಿದರು, ಅವರು ಹೋದಲ್ಲೆಲ್ಲಾ ಬಿಜೆಪಿಯ ಪ್ರಚಂಡ ಉತ್ಸಾಹವನ್ನು ಗಮನಿಸಿದರು.ಜಮ್ಮು ರ್ಯಾಲಿಯಲ್ಲಿ ಸಭಿಕರನ್ನು ಆಕರ್ಷಿಸಿದ ಪ್ರಧಾನಿ ಮೋದಿ
September 28th, 12:15 pm
ಜಮ್ಮುವಿನಲ್ಲಿ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಶಹೀದ್ ಸರ್ದಾರ್ ಭಗತ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಲಕ್ಷಾಂತರ ಭಾರತೀಯ ಯುವಕರಿಗೆ ಸ್ಫೂರ್ತಿಯ ಮೂಲವಾಗಿ ಅವರನ್ನು ಗೌರವಿಸಿದರು. J&K ವಿಧಾನಸಭಾ ಚುನಾವಣೆಯ ಅಂತಿಮ ರ್ಯಾಲಿಯಲ್ಲಿ, PM ಮೋದಿ ಅವರು ಕಳೆದ ವಾರಗಳಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಮ್ಮ ಭೇಟಿಗಳನ್ನು ಪ್ರತಿಬಿಂಬಿಸಿದರು, ಅವರು ಹೋದಲ್ಲೆಲ್ಲಾ ಬಿಜೆಪಿಯ ಪ್ರಚಂಡ ಉತ್ಸಾಹವನ್ನು ಗಮನಿಸಿದರು.ಚುನಾಯಿತರಾದರೆ 5 ವರ್ಷಗಳಲ್ಲಿ ಐವರು ಪ್ರಧಾನಿಗಳನ್ನು ಹೊಂದಲು ಭಾರತ-ಅಗಾಧಿ ಯೋಜನೆ: ಸೋಲಾಪುರದಲ್ಲಿ ಪ್ರಧಾನಿ ಮೋದಿ
April 29th, 08:57 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಸೋಲಾಪುರದಲ್ಲಿ ರೋಮಾಂಚಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹೆಚ್ಚಿನ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಚುನಾವಣೆಯಲ್ಲಿ ಮುಂದಿನ 5 ವರ್ಷಗಳ ಅಭಿವೃದ್ಧಿಯ ಭರವಸೆಯನ್ನು ನೀವು ಆಯ್ಕೆ ಮಾಡುತ್ತೀರಿ. ಮತ್ತೊಂದೆಡೆ, 2014ಕ್ಕಿಂತ ಮೊದಲು ದೇಶವನ್ನು ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ದುರಾಡಳಿತದ ಪ್ರಪಾತಕ್ಕೆ ತಳ್ಳಿದವರೂ ಇದ್ದಾರೆ, ಅವರ ಕಳಂಕಿತ ಇತಿಹಾಸದ ಹೊರತಾಗಿಯೂ, ಕಾಂಗ್ರೆಸ್ ಮತ್ತೊಮ್ಮೆ ದೇಶದಲ್ಲಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿದೆ.