ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಜನವರಿ 18 ರಂದು ಪ್ರಧಾನಮಂತ್ರಿ ಅವರಿಂದ ಆಸ್ತಿ ಕಾರ್ಡ್‌ ಗಳ ವಿತರಣೆ

January 16th, 08:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 18 ರಂದು ಮಧ್ಯಾಹ್ನ 12:30ರ ಸುಮಾರಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 230ಕ್ಕೂ ಹೆಚ್ಚು ಜಿಲ್ಲೆಗಳ 50000ಕ್ಕೂ ಹೆಚ್ಚು ಹಳ್ಳಿಗಳಲ್ಲಿನ ಆಸ್ತಿ ಮಾಲೀಕರಿಗೆ ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್‌ ಗಳನ್ನು ವಿತರಿಸಲಿದ್ದಾರೆ.

ಜನವರಿ 6 ರಂದು ಬಹು ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

January 05th, 06:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 6 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಸ್ವಾಮಿತ್ವ ಯೋಜನೆಯಡಿ ಆಸ್ತಿ ಮಾಲೀಕರಿಗೆ 50 ಲಕ್ಷಕ್ಕೂ ಹೆಚ್ಚು ಪ್ರಾಪರ್ಟಿ ಕಾರ್ಡ್‌ ವಿತರಿಸಲಿರುವ ಪ್ರಧಾನಮಂತ್ರಿ

December 26th, 04:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 200 ಜಿಲ್ಲೆಗಳ 46,000 ಕ್ಕೂ ಹೆಚ್ಚು ಗ್ರಾಮಗಳ ಆಸ್ತಿ ಮಾಲೀಕರಿಗೆ ಸ್ವಾಮಿತ್ವ (SVAMITVA) ಯೋಜನೆಯಡಿ 50 ಲಕ್ಷ ಪ್ರಾಪರ್ಟಿ ಕಾರ್ಡ್‌ಗಳನ್ನು ಡಿಸೆಂಬರ್ 27 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಲಿದ್ದಾರೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ ಅಡಿಯಲ್ಲಿ 71,000ಕ್ಕೂ ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 23rd, 11:00 am

ನನ್ನ ಸಂಪುಟ ಸಹೋದ್ಯೋಗಿಗಳು, ದೇಶದಾದ್ಯಂತದ ಇತರ ಗಣ್ಯರು ಮತ್ತು ನನ್ನ ಯುವ ಸ್ನೇಹಿತರೇ!

ರೋಜ್‌ ಗಾರ್ ಮೇಳದಡಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಪರೆನ್ಸ್‌ ಮೂಲಕ ರೋಜ್ ಗಾರ್ ಮೇಳವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಹೊಸದಾಗಿ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ನೇಮಕಗೊಂಡಿರುವ ಸುಮಾರು 71 ಸಾವಿರಕ್ಕೂ ಅಧಿಕ ಯುವಜನತೆಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ರೋಜ್‌ಗಾರ್ ಮೇಳ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಇದು ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ಮೂಲಕ ಯುವಕರನ್ನು ಸಶಕ್ತಗೊಳಿಸುತ್ತದೆ.

ಡಿಸೆಂಬರ್ 23 ರಂದು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ನೇಮಕಗೊಂಡಿರುವ 71 ಸಾವಿರಕ್ಕೂ ಅಧಿಕ ಉದ್ಯೋಗಿಗಳಿಗೆ ರೋಜ್‌ ಗಾರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಮಂತ್ರಿ

December 22nd, 09:48 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 23 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕವಾಗಿರುವ ಸುಮಾರು 71 ಸಾವಿರಕ್ಕೂ ಅಧಿಕ ಮಂದಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಸರೆನ್ಸ್‌ ಮೂಲಕ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ

ನವೆಂಬರ್‌ 11ರಂದು ಗುಜರಾತ್‌ನ ವಡ್ತಾಲ್‌ನಲ್ಲಿ ಶ್ರೀ ಸ್ವಾಮಿನಾರಾಯಣ ಮಂದಿರದ 200ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

November 10th, 07:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್‌ 11ರಂದು ಬೆಳಗ್ಗೆ 11:15ಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಗುಜರಾತ್‌ನ ವಡ್ತಾಲ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರದ 200ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

"ಉದ್ಯೋಗ ಮೇಳ (ರೋಜ್‌ಗಾರ್ ಮೇಳ)" ಯೋಜನೆಯಡಿಯಲ್ಲಿ, ಅಕ್ಟೋಬರ್ 29, 2024 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ

October 28th, 01:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 29 ಅಕ್ಟೋಬರ್, 2024 ರಂದು ಬೆಳಿಗ್ಗೆ 10:30 ಕ್ಕೆ ವಿಡಿಯೋ ಸಮಾವೇಶ ಮೂಲಕ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಯುವಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಅಕ್ಟೋಬರ್ 9 ರಂದು ಮಹಾರಾಷ್ಟ್ರದಲ್ಲಿ 7600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ

October 08th, 07:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 9 ರಂದು ಮಧ್ಯಾಹ್ನ 1 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ ಸುಮಾರು 7600 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಮಹಾರಾಷ್ಟ್ರದಲ್ಲಿ ಸೆಪ್ಟೆಂಬರ್ 29 ರಂದು 11,200 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಿರುವ ಮತ್ತು ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಮಂತ್ರಿ

September 28th, 07:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 29 ರಂದು ಅಪರಾಹ್ನ ಸುಮಾರು 12.30 ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 11,200 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಸಮರ್ಪಣೆ, ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಲಿದ್ದಾರೆ.

‘ಜಲ ಸಂಚಯ ಜನ ಭಾಗಿದಾರಿ’ ಉಪಕ್ರಮ ಆರಂಭ ಅಂಗವಾಗಿ ಸೆಪ್ಟಂಬರ್ 6ರಂದು ನಡೆಯಲಿರುವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 05th, 02:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟಂಬರ್ 6ರಂದು ಮಧ್ಯಾಹ್ನ 12.30ಕ್ಕೆ ಗುಜರಾತ್ ನ ಸೂರತ್‌ ನಲ್ಲಿ ‘ಜಲಸಂಚಯ ಜನ ಭಾಗಿದಾರಿ’ ಉಪಕ್ರಮದಡಿ ನಡೆಯಲಿರುವ ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ.

ಆಗಸ್ಟ್ 31ರಂದು ಮೂರು ವಂದೇ ಭಾರತ್ ರೈಲುಗಳಿಗೆ ಪ್ರಧಾನ ಮಂತ್ರಿ ಹಸಿರು ನಿಶಾನೆ ತೋರಲಿದ್ದಾರೆ

August 30th, 04:19 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಆಗಸ್ಟ್ 31ರಂದು ಮಧ್ಯಾಹ್ನ 12.30 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಪ್ರಧಾನ ಮಂತ್ರಿಯವರ ‘ಮೇಕ್ ಇನ್ ಇಂಡಿಯಾ’ ಮತ್ತು ಆತ್ಮನಿರ್ಭರ್ ಭಾರತದ ದೂರದೃಷ್ಟಿಯನ್ನು ಸಾಕಾರಾಗೊಳಿಸುವ ಅತ್ಯಾಧುನಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮೀರತ್ - ಲಕ್ನೋ ; ಮಧುರೈ - ಬೆಂಗಳೂರು ಮತ್ತು ಚೆನ್ನೈ – ನಾಗರಕೋಯಿಲ್ ಮೂರು ಮಾರ್ಗಗಳಲ್ಲಿ ಸಂಪರ್ಕವನ್ನು ಸುಧಾರಿಸುತ್ತದೆ:

ಜಾಗರೂಕತೆಯ ನೈತಿಕ ಹೊಣೆಗಾರಿಕೆಯನ್ನು ನ್ಯಾಯಾಂಗವು ಸತತವಾಗಿ ನಿರ್ವಹಿಸುತ್ತಿದೆ: ಜೋಧಪುರದಲ್ಲಿ ಪ್ರಧಾನಿ ಮೋದಿ

August 25th, 05:00 pm

ಪ್ರಧಾನಿ ನರೇಂದ್ರ ಮೋದಿ ಅವರು ಜೋಧ್‌ಪುರದಲ್ಲಿ ರಾಜಸ್ಥಾನ ಹೈಕೋರ್ಟ್‌ನ ಪ್ಲಾಟಿನಂ ಜುಬಿಲಿ ಆಚರಣೆಯಲ್ಲಿ ಪಾಲ್ಗೊಂಡರು, ಅಲ್ಲಿ ಅವರು ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ನ್ಯಾಯಾಂಗದ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದರು. ಅವರು ಕಳೆದ 75 ವರ್ಷಗಳಲ್ಲಿ ಹೈಕೋರ್ಟ್‌ನ ಕೊಡುಗೆಗಳನ್ನು ಶ್ಲಾಘಿಸಿದರು ಮತ್ತು ಪ್ರವೇಶ ಮತ್ತು ದಕ್ಷತೆಯನ್ನು ಸುಧಾರಿಸಲು ಕಾನೂನು ವ್ಯವಸ್ಥೆಯನ್ನು ಆಧುನೀಕರಿಸುವ ಅಗತ್ಯವನ್ನು ಒತ್ತಿ ಹೇಳಿದರು.

ರಾಜಸ್ಥಾನದ ಜೋಧಪುರದಲ್ಲಿ ರಾಜಸ್ಥಾನ ಹೈಕೋರ್ಟ್ ನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

August 25th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧಪುರದಲ್ಲಿ ರಾಜಸ್ಥಾನ ಹೈಕೋರ್ಟ್ ನ ಪ್ಲಾಟಿನಂ ಜುಬಿಲಿ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಷಣ ಮಾಡಿದರು. ಅವರು ರಾಜಸ್ಥಾನ ಹೈಕೋರ್ಟ್ ವಸ್ತುಸಂಗ್ರಹಾಲಯವನ್ನೂ ಉದ್ಘಾಟಿಸಿದರು.

ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ ಜೀವನ ಮತ್ತು ಪಯಣ ಕುರಿತಾದ ಮೂರು ಪುಸ್ತಕಗಳನ್ನು ಜೂನ್ 30ರಂದು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಲಿದ್ದಾರೆ

June 29th, 11:03 am

ಭಾರತದ ಮಾಜಿ ಉಪರಾಷ್ಟ್ರಪತಿ ಶ್ರೀ ಎಂ.ವೆಂಕಯ್ಯ ನಾಯ್ಡು ಅವರ 75ನೇ ಜನ್ಮದಿನದ ಮುನ್ನಾದಿನವಾದ, ಜೂನ್ 30ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅವರ ಜೀವನ ಮತ್ತು ಪಯಣ ಕುರಿತಾದ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ಹೈದರಾಬಾದ್ ನ ಗಚಿಬೌಲಿಯಲ್ಲಿರುವ ಅನ್ವಯ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪುಸ್ತಕಗಳು ಬಿಡುಗಡೆಯಾಗಲಿವೆ.

ಮಾರ್ಚ್ 13 ರಂದು ' ಇಂಡಿಯಾಸ್ ಟೆಕ್ಕೇಡ್ : ಚಿಪ್ಸ್ ಫಾರ್ ವಿಕಸಿತ ಭಾರತ ' ನಲ್ಲಿ ಭಾಗವಹಿಸಲಿರುವ ಪ್ರಧಾನಿ ಮತ್ತು ಸುಮಾರು 1.25 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂರು ಅರೆವಾಹಕ ಸೌಲಭ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ

March 12th, 03:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಮಾರ್ಚ್ 13ರಂದು ಬೆಳಗ್ಗೆ 10:30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ' ಇಂಡಿಯಾಸ್ ಟೆಕ್ಕೇಡ್: ಚಿಪ್ಸ್ ಫಾರ್ ವಿಕಸಿತ ಭಾರತ ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ಸುಮಾರು 1.25 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮೂರು ಅರೆವಾಹಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ದೇಶಾದ್ಯಂತದ ಯುವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಫೆಬ್ರವರಿ 26 ರಂದು ಸುಮಾರು 41,000 ಕೋಟಿ ರೂಪಾಯಿ ಮೌಲ್ಯದ 2000 ಕ್ಕೂ ಹೆಚ್ಚು ರೈಲ್ವೆ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ

February 25th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 26 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ 41,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಸುಮಾರು 2000 ರೈಲ್ವೆ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಫೆಬ್ರವರಿ 16 ರಂದು ವಿಕಸಿತ ‘ಭಾರತ – ವಿಕಸಿತ ರಾಜಸ್ಥಾನ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ

February 15th, 03:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಫೆಬ್ರವರಿ 16 ರಂದು ಬೆಳಿಗ್ಗೆ 11 ಗಂಟೆಗೆ ‘ವಿಕಸಿತ ಭಾರತ – ವಿಕಸಿತ ರಾಜಸ್ಥಾನ’ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರಾಜಸ್ಥಾನದಲ್ಲಿ 17,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ. ರಸ್ತೆ, ರೈಲ್ವೆ, ಸೌರ ವಿದ್ಯುತ್, ವಿದ್ಯುತ್ ಪ್ರಸರಣ, ಕುಡಿಯುವ ನೀರು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದಂತಹ ಪ್ರಮುಖ ಕ್ಷೇತ್ರಗಳ ಯೋಜನೆಗಳನ್ನು ಇವು ಒಳಗೊಂಡಿವೆ.

ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಯುಪಿಐ ಸೇವೆ ಪ್ರಾರಂಭವನ್ನು ಪ್ರಧಾನಿ ಮೋದಿ, ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್‌ನ ಪ್ರಧಾನಿ ಪ್ರವಿಂದ್ ಜಗನ್ನಾಥ್‌ ಸಾಕ್ಷಿ.

February 11th, 03:13 pm

ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳನ್ನು ಮತ್ತು ಮಾರಿಷಸ್‌ನಲ್ಲಿ ರುಪೇ ಕಾರ್ಡ್ ಸೇವೆ ಆರಂಭಿಸಲಾಗುವುದು ಮತ್ತು ಇದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಶ್ರೀಲಂಕಾದ ಅಧ್ಯಕ್ಷ, ಶ್ರೀ. ರಾನಿಲ್ ವಿಕ್ರಮಸಿಂಘೆ ಮತ್ತು ಮಾರಿಷಸ್ ಪ್ರಧಾನಿ, ಶ್ರೀ ಪ್ರವಿಂದ್ ಜುಗ್ನೌತ್ ಅವರು ಸಾಕ್ಷಿಯಾಗಲಿದ್ದಾರೆ. 12 ಫೆಬ್ರವರಿ 2024 ರಂದು ಮಧ್ಯಾಹ್ನ 1 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮ ಆರಂಭವಾಗಲಿದೆ.

​​​​​​​ಫೆಬ್ರವರಿ 10 ರಂದು “ವಿಕಸಿತ ಭಾರತ ವಿಕಸಿತ ಗುಜರಾತ್”‌ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ

February 09th, 05:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ರ ಫೆಬ್ರವರಿ 10 ರಂದು ಮಧ್ಯಾಹ್ನ 1 ಗಂಟೆಗೆ “ವಿಕಸಿತ ಭಾರತ್‌ ವಿಕಸಿತ ಗುಜರಾತ್‌” ಕಾರ್ಯಕ್ರಮ ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್‌ ಮೂಲಕ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಆವಾಜ್‌ ಯೋಜನೆ [ಪಿಎಂಎವೈ] ಮತ್ತು ಇತರೆ ವಸತಿ ಕಾರ್ಯಕ್ರಮಗಳಲ್ಲಿ ಗುಜರಾತ್‌ ನಲ್ಲಿ 1.3 ಲಕ್ಷ ಮನೆಗಳ ನಿರ್ಮಾಣಕ್ಕೆ ಪ್ರಧಾನಮಂತ್ರಿಯವರು ಭೂಮಿ ಪೂಜೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟನೆ ಮಾಡಲಿದ್ದಾರೆ.