ಭಾರತದ ಮುಂದಿನ ಸಾವಿರ ವರ್ಷಗಳಿಗೆ ನಾವು ಬಲವಾದ ಅಡಿಪಾಯವನ್ನು ಹಾಕುತ್ತಿದ್ದೇವೆ: ಆಸ್ಟ್ರಿಯಾದಲ್ಲಿ ಪ್ರಧಾನಿ ಮೋದಿ
July 10th, 11:00 pm
ವಿಯೆನ್ನಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ದೇಶವು ಸಾಧಿಸಿರುವ ಪರಿವರ್ತಕ ಪ್ರಗತಿಯ ಕುರಿತು ಮಾತನಾಡಿದ ಅವರು, ಭಾರತವು ಮುಂದಿನ ದಿನಗಳಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ, 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿ - ವಿಕಸಿತ್ ಭಾರತ್ - ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಪ್ರಧಾನಮಂತ್ರಿಯವರು ಆಸ್ಟ್ರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ ಮಾಡಿದರು
July 10th, 10:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಯೆನ್ನಾದಲ್ಲಿ ತಮ್ಮ ಗೌರವಾರ್ಥವಾಗಿ ಅನಿವಾಸಿ ಭಾರತೀಯರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರನ್ನು ಭಾರತೀಯರು ವಿಶೇಷ ಪ್ರೀತಿ ಮತ್ತು ಅಕ್ಕರೆಯಿಂದ ಸ್ವಾಗತಿಸಿದರು. ಆಸ್ಟ್ರಿಯನ್ ಫೆಡರಲ್ ನ ಕಾರ್ಮಿಕ ಮತ್ತು ಆರ್ಥಿಕ ಸಚಿವ ಶ್ರೀ ಮಾರ್ಟಿನ್ ಕೋಚರ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಆಸ್ಟ್ರಿಯಾದಾದ್ಯಂತ ನೆಲೆಸಿರುವ ಭಾರತೀಯರು ಭಾಗವಹಿಸುವಿಸಿದ್ದು ವಿಶೇಷವಾಗಿತ್ತು.ವರ್ಧಿತ ಭಾರತ - ಆಸ್ಟ್ರಿಯಾ ಪಾಲುದಾರಿಕೆ ಕುರಿತ ಜಂಟಿ ಹೇಳಿಕೆ
July 10th, 09:15 pm
ಚಾನ್ಸಲರ್ ಶ್ರೀ ಕಾರ್ಲ್ ನೆಹಮ್ಮರ್ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 9-10ರವರೆಗೆ ಆಸ್ಟ್ರಿಯಾಕ್ಕೆ ಅಧಿಕೃತ ಭೇಟಿ ನೀಡಿದ್ದರು. ತಮ್ಮ ಭೇಟಿಯ ವೇಳೆ ಪ್ರಧಾನಮಂತ್ರಿ ಅವರು ಆಸ್ಟ್ರಿಯಾದ ಅಧ್ಯಕ್ಷ ಘನತೆವೆತ್ತ ಅಲೆಕ್ಸಾಂಡರ್ ವಾನ್ ಡೆರ್ ಬೆಲೆನ್ ಅವರನ್ನು ಭೇಟಿ ಮಾಡಿದರು ಮತ್ತು ಚಾನ್ಸಲರ್ ನೆಹಮ್ಮರ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಿದರು. ಇದು ಆಸ್ಟ್ರಿಯಾಕ್ಕೆ ಪ್ರಧಾನಮಂತ್ರಿ ಅವರ ಮೊದಲ ಭೇಟಿಯಾಗಿದೆ ಮತ್ತು 41 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿದ್ದಾರೆ. ಈ ವರ್ಷ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ 75 ನೇ ವರ್ಷವನ್ನು ಸೂಚಿಸುತ್ತದೆ.ಆಸ್ಟ್ರಿಯಾದ ಚಾನ್ಸೆಲರ್ ಜೊತೆಗಿನ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾಧ್ಯಮ ಹೇಳಿಕೆಯ ಇಂಗ್ಲೀಷ್ ಅನುವಾದ
July 10th, 02:45 pm
ಮೊದಲನೆಯದಾಗಿ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ಚಾನ್ಸೆಲರ್ ನೆಹಮ್ಮರ್ ಅವರಿಗೆ ನನ್ನ ಕೃತಜ್ಞತೆಗಳು. ನನ್ನ ಮೂರನೇ ಅವಧಿಯ ಪ್ರಾರಂಭದಲ್ಲಿಯೇ ಆಸ್ಟ್ರಿಯಾಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ನನಗೆ ಸಂತಸ ತಂದಿದೆ. ನನ್ನ ಈ ಭೇಟಿ ಐತಿಹಾಸಿಕವೂ ವಿಶೇಷವೂ ಆಗಿದೆ. ನಲವತ್ತೊಂದು ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡಿದ್ದಾರೆ. ನಮ್ಮ ದ್ವಿಪಕ್ಷೀಯ ಸಂಬಂಧಗಳು 75 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಈ ಭೇಟಿ ನಡೆಯುತ್ತಿರುವುದು ಸಹ ಸಂತಸದ ಕಾಕತಾಳೀಯವಾಗಿದೆ.ಆಸ್ಟ್ರಿಯಾದ ವಿಯೆನ್ನಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
July 09th, 11:45 pm
ತಮ್ಮ ಎರಡು ರಾಷ್ಟ್ರಗಳ ಭೇಟಿಯ ಎರಡನೇ ಕೆ ಆರಂಭವನ್ನು ಗುರುತಿಸಿ, ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರಿಯಾದ ವಿಯೆನ್ನಾಕ್ಕೆ ಆಗಮಿಸಿದರು. ಪ್ರಧಾನಿ ತಮ್ಮ ಭೇಟಿಯ ವೇಳೆ ಅಧ್ಯಕ್ಷ ಅಲೆಕ್ಸಾಂಡರ್ ವ್ಯಾನ್ ಡೆರ್ ಬೆಲ್ಲೆನ್ ಮತ್ತು ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರನ್ನು ಭೇಟಿಯಾಗಲಿದ್ದಾರೆ. 40 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು.ರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 08-10, 2024)
July 04th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8-10ರಂದು ರಷ್ಯಾ ಒಕ್ಕೂಟ ಮತ್ತು ಆಸ್ಟ್ರಿಯಾ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.ವಿಯೆನ್ನಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರಧಾನಿ ನರೇಂದ್ರ ಮೋದಿ ಖಂಡನೆ
November 03rd, 12:13 pm
ವಿಯೆನ್ನಾದಲ್ಲಿ ನಡೆದಿರುವ ಭೀಕರ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಖಂಡಿಸಿದ್ದಾರೆ.