I consider industry, and also the private sector of India, as a powerful medium to build a Viksit Bharat: PM Modi at CII Conference

July 30th, 03:44 pm

Prime Minister Narendra Modi attended the CII Post-Budget Conference in Delhi, emphasizing the government's commitment to economic reforms and inclusive growth. The PM highlighted various budget provisions aimed at fostering investment, boosting infrastructure, and supporting startups. He underscored the importance of a self-reliant India and the role of industry in achieving this vision, encouraging collaboration between the government and private sector to drive economic progress.

ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಆಯೋಜಿಸಿದ್ದ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮ್ಮೇಳನ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಮಾತನಾಡಿದರು

July 30th, 01:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತೀಯ ಕೈಗಾರಿಕೆಗಳ ಒಕ್ಕೂಟ (CII) ಆಯೋಜಿಸಿದ್ದ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮ್ಮೇಳನ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಅಭಿವೃದ್ಧಿ ಮತ್ತು ಕೈಗಾರಿಕೆಗಳ ಪಾತ್ರದ ಬಗ್ಗೆ ಸರ್ಕಾರದ ರೂಪುರೇಷೆ ರೂಪಿಸುವುದು ಸಮ್ಮೇಳನದ ಉದ್ದೇಶವಾಗಿದೆ .ಕೈಗಾರಿಕೆಗಳು, ಸರ್ಕಾರ, ರಾಜತಾಂತ್ರಿಕ ಸಮುದಾಯ, ಚಿಂತಕರ ಚಾವಡಿ ಮೊದಲಾದ ಸಾವಿರಕ್ಕೂಕ್ಕೂ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ದೇಶ ಮತ್ತು ವಿದೇಶದ ವಿವಿಧ ಸಿಐಐ ಕೇಂದ್ರಗಳಿಂದ ಅನೇಕ ಜನರು ಕೂಡ ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಭಾರತೀಯ ಕೈಗಾರಿಕೆಗಳ ಒಕ್ಕೂಟದ ಬಜೆಟ್ ನಂತರದ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜುಲೈ 30 ರಂದು ಪ್ರಧಾನಮಂತ್ರಿ ಭಾಷಣ

July 29th, 12:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ 2024 ರ ಜುಲೈ 30 ರಂದು ನಡೆಯಲಿರುವ “ವಿಕಸಿತ ಭಾರತದೆಡೆಗೆ ಪಯಣ: ಕೇಂದ್ರ ಬಜೆಟ್ 2024-25 ನಂತರದ ಸಮಾವೇಶ” ದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಕಾಮನ್ ವೆಲ್ತ್ ಕಾನೂನು ಶಿಕ್ಷಣ ಸಂಘ - ಕಾಮನ್ ವೆಲ್ತ್ ಅಟಾರ್ನಿಸ್ ಮತ್ತು ಸಾಲಿಸಿಟರ್ಸ್ ಜನರಲ್ ಕಾನ್ಫರೆನ್ಸ್ 2024 ಅನ್ನು ಫೆಬ್ರವರಿ 3 ರಂದು ಉದ್ಘಾಟಿಸಲಿರುವ ಪ್ರಧಾನಮಂತ್ರಿ

February 02nd, 11:10 am

ಕಾಮನ್ ವೆಲ್ತ್ ಕಾನೂನು ಶಿಕ್ಷಣ ಸಂಘ - ಕಾಮನ್ ವೆಲ್ತ್ ವಕೀಲರು ಮತ್ತು ಸಾಲಿಸಿಟರ್ಸ್ ಜನರಲ್ ಕಾನ್ಫರೆನ್ಸ್ 2024 ಅನ್ನು 3 ನೇ ಫೆಬ್ರವರಿ, 2024 ರಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜ್ಞಾನ ಭವನದಲ್ಲಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಡಿಸೆಂಬರ್ 25ರಂದು “ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿ” ಗಳನ್ನು ಬಿಡುಗಡೆ ಮಾಡಲಿದ್ದಾರೆ ಪ್ರಧಾನಮಂತ್ರಿ

December 24th, 07:47 pm

ಮಹಾಮಾನ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ 162 ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಸಂಗ್ರಹಿತ ಕೃತಿಗಳ' 11 ಸಂಪುಟಗಳ ಮೊದಲ ಸರಣಿಯನ್ನು 2023 ರ ಡಿಸೆಂಬರ್ 25 ರಂದು ಸಂಜೆ 4:30 ಕ್ಕೆ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಸೆಪ್ಟೆಂಬರ್ 23 ರಂದು ನವದೆಹಲಿಯಲ್ಲಿ 'ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಉದ್ಘಾಟಿಸಲಿರುವ ಪ್ರಧಾನಮಂತ್ರಿ

September 22nd, 02:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 23ರಂದು ಬೆಳಗ್ಗೆ 10 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ' ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

PM to inaugurate Diamond Jubilee Celebrations of CBI on 3rd April

April 02nd, 10:43 am

Prime Minister Shri Narendra Modi will inaugurate the Diamond Jubilee Celebrations of Central Bureau of Investigation (CBI) on 3rd April at 12 noon at Vigyan Bhawan, New Delhi.

`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 22nd, 03:34 pm

ಇಂದು ಬಹಳ ವಿಶೇಷ ಮತ್ತು ಪವಿತ್ರ ದಿನ. 'ಹಿಂದೂ ಕ್ಯಾಲೆಂಡರ್' ಹೊಸ ವರ್ಷ ಇಂದಿನಿಂದ ಪ್ರಾರಂಭವಾಗಿದೆ. ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೆ ʻವಿಕ್ರಮ್ ಸಂವತ್ 2080ʼ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ನಮ್ಮ ವಿಶಾಲ ಮತ್ತು ವೈವಿಧ್ಯಮಯ ದೇಶದಲ್ಲಿ ಶತಮಾನಗಳಿಂದ ವಿಭಿನ್ನ ಕ್ಯಾಲೆಂಡರ್‌ಗಳು ಚಾಲ್ತಿಯಲ್ಲಿವೆ. ಕೊಲ್ಲಂ ಅವಧಿಯ ಮಲಯಾಳಂ ಕ್ಯಾಲೆಂಡರ್ ಇದೆ, ತಮಿಳು ಕ್ಯಾಲೆಂಡರ್ ಇದೆ, ಇದು ನೂರಾರು ವರ್ಷಗಳಿಂದ ಭಾರತಕ್ಕೆ ದಿನಾಂಕ ಮತ್ತು ಸಮಯವನ್ನು ತಿಳಿಸುತ್ತಿದೆ. ʻವಿಕ್ರಮ್ ಸಂವತ್ʼ ಕೂಡ 2080 ವರ್ಷಗಳ ಹಿಂದಿನಿಂದ ಇದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಸ್ತುತ 2023 ಅನ್ನು ಸೂಚಿಸುತ್ತದೆ. ಆದರೆ ʻವಿಕ್ರಮ್ ಸಂವತ್ʼ ಅದಕ್ಕಿಂತಲೂ 57 ವರ್ಷಗಳ ಹಿಂದೆ ಪ್ರಾರಂಭವಾಯಿತು. ಈ ಶುಭ ದಿನದಂದು ದೂರಸಂಪರ್ಕ, ʻಐಸಿಟಿʼ ಮತ್ತು ಸಂಬಂಧಿತ ಆವಿಷ್ಕಾರಗಳಲ್ಲಿ ಹೊಸ ಆರಂಭ ಆಗುತ್ತಿರುವುದು ನನಗೆ ಸಂತೋಷ ತಂದಿದೆ. ಇಂದು ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼ(ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಲಾಯಿತು. ಇದಲ್ಲದೆ, ʻ6 ಜಿʼ ಪ್ರಯೋಗ ವೇದಿಕೆ (ಟೆಸ್ಟ್ ಬೆಡ್) ಅನ್ನು ಸಹ ಇಂದು ಪ್ರಾರಂಭಿಸಲಾಗಿದೆ. ಈ ತಂತ್ರಜ್ಞಾನಕ್ಕೆ ಸಂಬಂಧಿಸಿದ ನಮ್ಮ ʻವಿಷನ್ ಡಾಕ್ಯುಮೆಂಟ್ʼ ಅನ್ನು ಸಹ ಅನಾವರಣಗೊಳಿಸಲಾಗಿದೆ. ಇದು ಡಿಜಿಟಲ್ ಇಂಡಿಯಾದಲ್ಲಿ ಹೊಸ ಶಕ್ತಿಯನ್ನು ತರುವುದಲ್ಲದೆ, ದಕ್ಷಿಣ ಏಷ್ಯಾ ಮತ್ತು ಜಗತ್ತಿನ ದಕ್ಷಿದದ ದೇಶಗಳಿಗೆ ಪರಿಹಾರಗಳು ಮತ್ತು ನಾವೀನ್ಯತೆಗಳನ್ನು ಒದಗಿಸುತ್ತದೆ. ಇದು ಅನೇಕ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ವಿಶೇಷವಾಗಿ ನಮ್ಮ ಶಿಕ್ಷಣ ತಜ್ಞರು, ಆವಿಷ್ಕಾರಕರು, ನವೋದ್ಯಮಗಳು ಮತ್ತು ಉದ್ಯಮಕ್ಕೆ ಅವಕಾಶಗಳ ಮಹಾಪೂರವೇ ತೆರೆದುಕೊಳ್ಳಲಿದೆ.

`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ

March 22nd, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ನೂತನ ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼದ (ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಭಾರತ್ 6ಜಿʼ ವಿಷನ್ ಡಾಕ್ಯುಮೆಂಟ್ ಅನ್ನು ಅನಾವರಣಗೊಳಿಸಿದರು ಜೊತೆಗೆ ʻ6ಜಿʼ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಾಯೋಗಿಕ ವೇದಿಕೆಗೆ ಚಾಲನೆ ನೀಡಿದರು. 'ಕಾಲ್ ಬಿಫೋರ್ ಯು ಡಿಗ್' ಆ್ಯಪ್ ಅನ್ನು ಅವರು ಬಿಡುಗಡೆ ಮಾಡಿದರು. ʻಐಟಿಯುʼ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳಿಗಾಗಿ (ಐಸಿಟಿ) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದೆ. ಪ್ರದೇಶಿಕ ಕಚೇರಿ ಸ್ಥಾಪನೆಗಾಗಿ ಭಾರತವು ಮಾರ್ಚ್ 2022 ರಲ್ಲಿ ʻಐಟಿಯುʼನೊಂದಿಗೆ ಆತಿಥೇಯ ರಾಷ್ಟ್ರಗಳ ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಮಾಲ್ಡೀವ್ಸ್, ಅಫ್ಘಾನಿಸ್ತಾನ ಮತ್ತು ಇರಾನ್‌ಗೆ ಸೇವೆ ಸಲ್ಲಿಸಲಿದೆ, ರಾಷ್ಟ್ರಗಳ ನಡುವೆ ಸಮನ್ವಯವನ್ನು ಹೆಚ್ಚಿಸಲಿದೆ ಮತ್ತು ಈ ವಲಯದಲ್ಲಿ ಪರಸ್ಪರ ಲಾಭದಾಯಕ ಆರ್ಥಿಕ ಸಹಕಾರವನ್ನು ಉತ್ತೇಜಿಸುತ್ತದೆ.

​​​​​​​ಮಾರ್ಚ್ 22 ರಂದು ಐಟಿಯು ಪ್ರದೇಶ ಕಚೇರಿ ಮತ್ತು ನಾವೀನ್ಯತೆಯ ಕೇಂದ್ರ ಉದ್ಘಾಟಿಸಲಿರುವ ಪ್ರಧಾನಮಂತ್ರಿ

March 21st, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ವಿಜ್ಞಾನ ಭವನದಲ್ಲಿ 2023 ರ ಮಾರ್ಚ್ 22 ರ ಅಪರಾಹ್ನ 12.30 ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ದೂರ ಸಂಪರ್ಕ ಸಂಘದ [ಐಟಿಯು] ಪ್ರದೇಶ ಕಚೇರಿ ಮತ್ತು ಭಾರತದ ನಾವೀನ್ಯತೆಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು “ಕಾಲ್ ಫಾರ್ ಯು ಡಿಗ್” ಆಪ್ ಲೋಕಾರ್ಪಣೆ ಮಾಡಲಿದ್ದು, ಇದೇ ಸಂದರ್ಭದಲ್ಲಿ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.

ʻವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆ’ಯ 3ನೇ ಅಧಿವೇಶನವನ್ನು ಮಾರ್ಚ್ 10ರಂದು ಉದ್ಘಾಟಿಸಲಿರುವ ಪ್ರಧಾನಿ

March 09th, 04:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಮಾರ್ಚ್ 10ರಂದು ಸಂಜೆ 4.30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ `ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆ’ಯ(ಎನ್‌ಪಿಡಿಆರ್‌ಆರ್) 3ನೇ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ. ಈ ವೇದಿಕೆಯ 3ನೇ ಅಧಿವೇಶನದ ಮುಖ್ಯ ವಿಷಯವೆಂದರೆ ಬದಲಾಗುತ್ತಿರುವ ಹವಾಮಾನದಲ್ಲಿ ಸ್ಥಳೀಯ ಸದೃಢತೆಯ ನಿರ್ಮಾಣ.

ನವದೆಹಲಿಯಲ್ಲಿ ಲಾಸಿತ್ ಬೋರ್ಫುಕನ್ ಅವರ 400 ನೇ ಜನ್ಮ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆಗಳ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಪಠ್ಯ

November 25th, 11:00 am

ಅಸ್ಸಾಂನ ರಾಜ್ಯಪಾಲ ಶ್ರೀ ಜಗದೀಶ್ ಮುಖಿ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ, ಕೇಂದ್ರದ ಮಂತ್ರಿ ಪರಿಷತ್ತಿನ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್, ವಿಧಾನಸಭೆಯ ಸ್ಪೀಕರ್, ಶ್ರೀ ಬಿಸ್ವಜಿತ್, ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ತಪನ್ ಕುಮಾರ್ ಗೊಗೊಯ್, ಅಸ್ಸಾಂ ಸರ್ಕಾರದ ಸಚಿವ ಪಿಜುಶ್ ಹಜಾರಿಕಾ ಸರ್, ಸಂಸತ್ ಸದಸ್ಯರು ಹಾಗೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವವರು ಮತ್ತು ದೇಶ ಮತ್ತು ವಿದೇಶಗಳಲ್ಲಿನ ಅಸ್ಸಾಮಿ ಸಂಸ್ಕೃತಿಯೊಂದಿಗೆ ಸಂಬಂಧ ಹೊಂದಿರುವ ಎಲ್ಲ ಗಣ್ಯರೇ...

ನವದೆಹಲಿಯಲ್ಲಿ ಲಾಸಿತ್ ಬೋರ್ಫುಕನ್ ಅವರ 400 ನೇ ಜಯಂತಿಯ ವಾರ್ಷಿಕೋತ್ಸವದ ವರ್ಷಾವಧಿಯ ಆಚರಣೆಗಳ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಭಾಷಣ ಮಾಡಿದರು

November 25th, 10:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯಲ್ಲಿ ಲಾಸಿತ್ ಬೋರ್ಫುಕನ್ ಅವರ 400 ನೇ ಜಯಂತಿಯ ವಾರ್ಷಿಕೋತ್ಸವದ ಒಂದು ವರ್ಷದ ಆಚರಣೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ‘ಲಾಸಿತ್ ಬೊರ್ಫುಕನ್ - ಅಸ್ಸಾಂನ ಹೀರೋ ವು ಹಾಲ್ಟೆಡ್, ʼದಿ ಮೊಘಲ್ʼ’ ಪುಸ್ತಕವನ್ನು ಬಿಡುಗಡೆ ಮಾಡಿದರು.

ಲಚಿತ್‌ ಬರ್ಫುಕನ್‌ನ 400ನೇ ಜನ್ಮ ದಿನಾಚರಣೆಯ ವಾರ್ಷಿಕೋತ್ಸವ ಸಮಾರೋಪ ಸಮಾರಂಭ ಪ್ರಯುಕ್ತ ನ. 25ಕ್ಕೆ ಪ್ರಧಾನ ಮಂತ್ರಿಗಳ ಭಾಷಣ

November 24th, 11:51 am

ನ. 25ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಲಚಿತ್‌ ಬರ್ಫುಕನ್‌ನ 400ನೇ ಜನ್ಮ ದಿನಾಚರಣೆ ವರ್ಷಾಚರಣೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.

​​​​​​​ನ.3ರಂದು ವಿಚಕ್ಷಣಾ(ವಿಜಿಲೆನ್ಸ್) ಜಾಗೃತಿ ಸಪ್ತಾಹ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 02nd, 04:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ನವೆಂಬರ್ 3ರಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಜಾಗೃತ ಆಯೋಗದ (ಸಿವಿಸಿ) ವಿಚಕ್ಷಣಾ ಜಾಗೃತಿ ಸಪ್ತಾಹ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ದೆಹಲಿಯ ಕಲ್ಕಾಜಿಯಲ್ಲಿ ಕೊಳೆಗೇರಿ ಪುನರ್ವಸತಿ ಯೋಜನೆಯಡಿ ಮೂಲ ಸ್ಥಳದಲ್ಲಿಯೇ ಹೊಸದಾಗಿ ನಿರ್ಮಿಸಲಾದ 3024 ಫ್ಲ್ಯಾಟ್ ಗಳನ್ನು ನವೆಂಬರ್ 2ರಂದು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ.

November 01st, 05:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ನವೆಂಬರ್ 2ರಂದು ಸಂಜೆ 4.30ಕ್ಕೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 'ಮೂಲಸ್ಥಳದಲ್ಲಿಯೇ ಕೊಳೆಗೇರಿ ಪುನರ್ವಸತಿ' ಯೋಜನೆಯಡಿ ಕಲ್ಕಾಜಿಯಲ್ಲಿ ಕೊಳೆಗೇರಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ನಿರ್ಮಿಸಲಾದ 3024 ಇಡಬ್ಲ್ಯೂಎಸ್ ಫ್ಲ್ಯಾಟ್ ಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಭೂಮಿಹೀನ್ ಶಿಬಿರದ ಅರ್ಹ ಫಲಾನುಭವಿಗಳಿಗೆ ಕೀಲಿಕೈಗಳನ್ನು ಹಸ್ತಾಂತರಿಸಲಿದ್ದಾರೆ.