`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 22nd, 03:34 pm

ಇಂದು ಬಹಳ ವಿಶೇಷ ಮತ್ತು ಪವಿತ್ರ ದಿನ. 'ಹಿಂದೂ ಕ್ಯಾಲೆಂಡರ್' ಹೊಸ ವರ್ಷ ಇಂದಿನಿಂದ ಪ್ರಾರಂಭವಾಗಿದೆ. ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೆ ʻವಿಕ್ರಮ್ ಸಂವತ್ 2080ʼ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ನಮ್ಮ ವಿಶಾಲ ಮತ್ತು ವೈವಿಧ್ಯಮಯ ದೇಶದಲ್ಲಿ ಶತಮಾನಗಳಿಂದ ವಿಭಿನ್ನ ಕ್ಯಾಲೆಂಡರ್‌ಗಳು ಚಾಲ್ತಿಯಲ್ಲಿವೆ. ಕೊಲ್ಲಂ ಅವಧಿಯ ಮಲಯಾಳಂ ಕ್ಯಾಲೆಂಡರ್ ಇದೆ, ತಮಿಳು ಕ್ಯಾಲೆಂಡರ್ ಇದೆ, ಇದು ನೂರಾರು ವರ್ಷಗಳಿಂದ ಭಾರತಕ್ಕೆ ದಿನಾಂಕ ಮತ್ತು ಸಮಯವನ್ನು ತಿಳಿಸುತ್ತಿದೆ. ʻವಿಕ್ರಮ್ ಸಂವತ್ʼ ಕೂಡ 2080 ವರ್ಷಗಳ ಹಿಂದಿನಿಂದ ಇದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಸ್ತುತ 2023 ಅನ್ನು ಸೂಚಿಸುತ್ತದೆ. ಆದರೆ ʻವಿಕ್ರಮ್ ಸಂವತ್ʼ ಅದಕ್ಕಿಂತಲೂ 57 ವರ್ಷಗಳ ಹಿಂದೆ ಪ್ರಾರಂಭವಾಯಿತು. ಈ ಶುಭ ದಿನದಂದು ದೂರಸಂಪರ್ಕ, ʻಐಸಿಟಿʼ ಮತ್ತು ಸಂಬಂಧಿತ ಆವಿಷ್ಕಾರಗಳಲ್ಲಿ ಹೊಸ ಆರಂಭ ಆಗುತ್ತಿರುವುದು ನನಗೆ ಸಂತೋಷ ತಂದಿದೆ. ಇಂದು ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼ(ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಲಾಯಿತು. ಇದಲ್ಲದೆ, ʻ6 ಜಿʼ ಪ್ರಯೋಗ ವೇದಿಕೆ (ಟೆಸ್ಟ್ ಬೆಡ್) ಅನ್ನು ಸಹ ಇಂದು ಪ್ರಾರಂಭಿಸಲಾಗಿದೆ. ಈ ತಂತ್ರಜ್ಞಾನಕ್ಕೆ ಸಂಬಂಧಿಸಿದ ನಮ್ಮ ʻವಿಷನ್ ಡಾಕ್ಯುಮೆಂಟ್ʼ ಅನ್ನು ಸಹ ಅನಾವರಣಗೊಳಿಸಲಾಗಿದೆ. ಇದು ಡಿಜಿಟಲ್ ಇಂಡಿಯಾದಲ್ಲಿ ಹೊಸ ಶಕ್ತಿಯನ್ನು ತರುವುದಲ್ಲದೆ, ದಕ್ಷಿಣ ಏಷ್ಯಾ ಮತ್ತು ಜಗತ್ತಿನ ದಕ್ಷಿದದ ದೇಶಗಳಿಗೆ ಪರಿಹಾರಗಳು ಮತ್ತು ನಾವೀನ್ಯತೆಗಳನ್ನು ಒದಗಿಸುತ್ತದೆ. ಇದು ಅನೇಕ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ವಿಶೇಷವಾಗಿ ನಮ್ಮ ಶಿಕ್ಷಣ ತಜ್ಞರು, ಆವಿಷ್ಕಾರಕರು, ನವೋದ್ಯಮಗಳು ಮತ್ತು ಉದ್ಯಮಕ್ಕೆ ಅವಕಾಶಗಳ ಮಹಾಪೂರವೇ ತೆರೆದುಕೊಳ್ಳಲಿದೆ.

`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ

March 22nd, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ನೂತನ ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼದ (ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಭಾರತ್ 6ಜಿʼ ವಿಷನ್ ಡಾಕ್ಯುಮೆಂಟ್ ಅನ್ನು ಅನಾವರಣಗೊಳಿಸಿದರು ಜೊತೆಗೆ ʻ6ಜಿʼ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಾಯೋಗಿಕ ವೇದಿಕೆಗೆ ಚಾಲನೆ ನೀಡಿದರು. 'ಕಾಲ್ ಬಿಫೋರ್ ಯು ಡಿಗ್' ಆ್ಯಪ್ ಅನ್ನು ಅವರು ಬಿಡುಗಡೆ ಮಾಡಿದರು. ʻಐಟಿಯುʼ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳಿಗಾಗಿ (ಐಸಿಟಿ) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದೆ. ಪ್ರದೇಶಿಕ ಕಚೇರಿ ಸ್ಥಾಪನೆಗಾಗಿ ಭಾರತವು ಮಾರ್ಚ್ 2022 ರಲ್ಲಿ ʻಐಟಿಯುʼನೊಂದಿಗೆ ಆತಿಥೇಯ ರಾಷ್ಟ್ರಗಳ ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಮಾಲ್ಡೀವ್ಸ್, ಅಫ್ಘಾನಿಸ್ತಾನ ಮತ್ತು ಇರಾನ್‌ಗೆ ಸೇವೆ ಸಲ್ಲಿಸಲಿದೆ, ರಾಷ್ಟ್ರಗಳ ನಡುವೆ ಸಮನ್ವಯವನ್ನು ಹೆಚ್ಚಿಸಲಿದೆ ಮತ್ತು ಈ ವಲಯದಲ್ಲಿ ಪರಸ್ಪರ ಲಾಭದಾಯಕ ಆರ್ಥಿಕ ಸಹಕಾರವನ್ನು ಉತ್ತೇಜಿಸುತ್ತದೆ.

PM Modi's Mann Ki Baat: Tourism, farmers, under 17 FIFA world cup and more

March 27th, 11:30 am