ಕೇರಳದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
February 27th, 12:24 pm
ಕೇರಳದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಜೀ, ನನ್ನ ಸಹೋದ್ಯೋಗಿ ಮತ್ತು ರಾಜ್ಯ ಸಚಿವ ಶ್ರೀ ವಿ. ಮುರಳೀಧರನ್, ಇಸ್ರೋ ಕುಟುಂಬದ ಎಲ್ಲರೂ ನಮಸ್ಕಾರ!ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಪ್ರಧಾನಿ ಭೇಟಿ
February 27th, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ವಿಎಸ್ ಎಸ್ ಸಿ)ಗೆ ಭೇಟಿ ನೀಡಿದ್ದರು ಮತ್ತು ಸುಮಾರು 1800 ಕೋಟಿ ರೂ. ಮೌಲ್ಯದ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳಲ್ಲಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಎಸ್ ಎಲ್ ವಿ ಇಂಟಿಗ್ರೇಷನ್ ಫೆಸಿಲಿಟಿ (ಪಿಐಎಫ್ ); ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಹೊಸ 'ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಇಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ'; ಮತ್ತು ತಿರುವನಂತಪುರಂನ ವಿಎಸ್ ಎಸ್ ಸಿಯಲ್ಲಿ ‘ಟ್ರೈಸಾನಿಕ್ ವಿಂಡ್ ಟನಲ್’ ಒಳಗೊಂಡಿವೆ. ಶ್ರೀ ನರೇಂದ್ರ ಮೋದಿ ಅವರು ಗಗನಯಾನ ಮಿಷನ್‌ನ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ನಾಲ್ಕು ಗಗನಯಾತ್ರಿಗಳಿಗೆ 'ಗಗನಯಾತ್ರಿ ರೆಕ್ಕೆಗಳನ್ನು' ನೀಡಿದರು. ಆ ಗಗನಯಾತ್ರಿಗಳೆಂದರೆ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ.