ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ ಭಾರತ 2047 – ಯುವ ಧ್ವನಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 11th, 10:35 am
ವಿಕಸಿತ ಭಾರತ'ದ ನಿರ್ಣಯಗಳಿಗೆ ಸಂಬಂಧಿಸಿದಂತೆ ಇಂದು ಬಹಳ ಮುಖ್ಯವಾದ ದಿನ. 'ವಿಕಸಿತ ಭಾರತ'ಕ್ಕೆ ಸಂಬಂಧಿಸಿದ ಈ ಕಾರ್ಯಾಗಾರವನ್ನು ಆಯೋಜಿಸಿದ್ದಕ್ಕಾಗಿ ನಾನು ಎಲ್ಲ ರಾಜ್ಯಪಾಲರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ದೇಶದ ಯುವಕರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನು ಹೊತ್ತಿರುವ ಎಲ್ಲ ಸಹೋದ್ಯೋಗಿಗಳನ್ನು ನೀವು ಒಂದೇ ವೇದಿಕೆಯಲ್ಲಿ ತಂದಿದ್ದೀರಿ. ಶಿಕ್ಷಣ ಸಂಸ್ಥೆಗಳ ಪಾತ್ರವು ವೈಯಕ್ತಿಕ ಅಭಿವೃದ್ಧಿಗೆ ಕಾರಣವಾಗುತ್ತದೆ, ಮತ್ತು ರಾಷ್ಟ್ರವನ್ನು ವೈಯಕ್ತಿಕ ಅಭಿವೃದ್ಧಿಯ ಮೂಲಕ ನಿರ್ಮಿಸಲಾಗುತ್ತದೆ. ಭಾರತವು ಪ್ರಸ್ತುತ ತನ್ನನ್ನು ತಾನು ಕಂಡುಕೊಳ್ಳುತ್ತಿರುವ ಯುಗದಲ್ಲಿ, ವೈಯಕ್ತಿಕ ಅಭಿವೃದ್ಧಿಯ ಅಭಿಯಾನವು ಅತ್ಯಂತ ನಿರ್ಣಾಯಕವಾಗಿದೆ. ಯುವ ಧ್ವನಿ ಕಾರ್ಯಾಗಾರದ ಯಶಸ್ಸಿಗೆ ನಾನು ನಿಮ್ಮೆಲ್ಲರಿಗೂ ಶುಭ ಕೋರುತ್ತೇನೆ.'ವಿಕಸಿತ ಭಾರತ @2047: ವಾಯ್ಸ್ ಆಫ್ ಯೂತ್'ಗೆ ಚಾಲನೆ ನೀಡಿದ ಪ್ರಧಾನಿ
December 11th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 'ವಿಕಸಿತ ಭಾರತ@2047: ವಾಯ್ಸ್ ಆಫ್ ಯೂತ್'ಗೆ ಚಾಲನೆ ನೀಡಿದರು. ಈ ಉಪಕ್ರಮದ ಆರಂಭದ ಅಂಗವಾಗಿ ದೇಶಾದ್ಯಂತ ರಾಜಭವನಗಳಲ್ಲಿ ಆಯೋಜಿಸಲಾದ ಕಾರ್ಯಾಗಾರಗಳಲ್ಲಿ ಪ್ರಧಾನಿ ಮೋದಿ ಅವರು ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಬೋಧಕವರ್ಗದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.'ವಿಕಸಿತ ಭಾರತ @2047: ಯುವಜನತೆಯ ಧ್ವನಿ' ; ಡಿಸೆಂಬರ್ 11 ರಂದು ಪ್ರಧಾನಿ ಅನಾವರಣ
December 10th, 01:02 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ಡಿಸೆಂಬರ್ 11ರಂದು ಬೆಳಗ್ಗೆ 10.30ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ‘ವಿಕಸಿತ್ ಭಾರತ @2047: ಯುವಜನತೆಯ ಧ್ವನಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ದೇಶಾದ್ಯಂತ ರಾಜಭವನಗಳಲ್ಲಿ ಆಯೋಜಿಸಲಾಗುವ ಈ ಕಾರ್ಯಾಗಾರಗಳಲ್ಲಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮತ್ತು ಅಧ್ಯಾಪಕ ವರ್ಗವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮಾಡಲಿದ್ದಾರೆ, ಇದು ಈ ಉಪಕ್ರಮದ ಆರಂಭವನ್ನು ಸೂಚಿಸುತ್ತದೆ.