ಪ್ರಯಾಗ್ ರಾಜ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 13th, 02:10 pm
ಉತ್ತರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಗೌರವಾನ್ವಿತ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಜೀ ಮತ್ತು ಬ್ರಜೇಶ್ ಪಾಠಕ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮಂತ್ರಿಗಳು, ಸಂಸತ್ತು ಮತ್ತು ವಿಧಾನಸಭೆಯ ಗೌರವಾನ್ವಿತ ಸದಸ್ಯರು, ಪ್ರಯಾಗ್ ರಾಜ್ ನ ಮೇಯರ್ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಹಾಗುಇತರ ಗೌರವಾನ್ವಿತ ಅತಿಥಿಗಳೇ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆಯನ್ನು ಪ್ರಧಾನಿ ನೆರವೇರಿಸಿದರು
December 13th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಮಾರು 5,500 ಕೋಟಿ ರೂಪಾಯಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಚಾಲನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸಂಗಮದ ಪವಿತ್ರ ಭೂಮಿಯಾದ ಪ್ರಯಾಗ್‌ರಾಜ್‌ಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿದರು ಮತ್ತು ಮಹಾಕುಂಭದಲ್ಲಿ ಪಾಲ್ಗೊಂಡ ಸಂತರು ಮತ್ತು ಸಾಧುಗಳಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಮಹಾಕುಂಭವನ್ನು ಯಶಸ್ವಿಗೊಳಿಸಿದ ನೌಕರರು, ಶ್ರಮಿಕರು ಮತ್ತು ಸಫಾಯಿ ಕರ್ಮಚಾರಿಗಳಿಗೆ ಶ್ರೀ ಮೋದಿ ಕೃತಜ್ಞತೆ ಸಲ್ಲಿಸಿದರು. ಮಹಾಕುಂಭದ ಅಗಾಧತೆ ಮತ್ತು ಗಾತ್ರದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇದು ವಿಶ್ವದ ಅತಿದೊಡ್ಡ ಜನಸಂಗಮಗಳಲ್ಲಿ ಒಂದಾಗಿದೆ. 45 ದಿನಗಳ ಕಾಲ ನಡೆಯುವ ʻಮಹಾಯಜ್ಞಕ್ಕಾಗಿʼ ಪ್ರತಿದಿನ ಲಕ್ಷಾಂತರ ಭಕ್ತರನ್ನು ಸ್ವಾಗತಿಸುತ್ತದೆ ಮತ್ತು ಈ ಸಂದರ್ಭಕ್ಕಾಗಿ ಸಂಪೂರ್ಣ ಹೊಸ ನಗರವನ್ನೇ ಸ್ಥಾಪಿಸಲಾಗಿದೆ ಎಂದರು. ಪ್ರಯಾಗ್‌ರಾಜ್ ಭೂಮಿಯಲ್ಲಿ ಹೊಸ ಇತಿಹಾಸ ಬರೆಯಲಾಗುತ್ತಿದೆ, ಎಂದು ಪ್ರಧಾನಿ ಉದ್ಗರಿಸಿದರು. ಮುಂದಿನ ವರ್ಷ ನಡೆಯಲಿರುವ ಮಹಾಕುಂಭ ಮೇಳದ ಕಾರ್ಯಕ್ರಮವು ರಾಷ್ಟ್ರದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಗುರುತನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಇಂತಹ ಏಕತೆಯ 'ಮಹಾಯಜ್ಞ'ದ ಬಗ್ಗೆ ವಿಶ್ವದಾದ್ಯಂತ ಚರ್ಚಿಸಲಾಗುವುದು ಎಂದು ಹೇಳಿದರು. ಮಹಾಕುಂಭ ಮೇಳದ ಯಶಸ್ವಿ ಸಂಘಟನೆಗಾಗಿ ಅವರು ಜನತೆಗೆ ಶುಭ ಕೋರಿದರು.ಜಾಗತಿಕ ಸಹಕಾರಿ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
November 25th, 03:30 pm
ಭೂತಾನ್ ಪ್ರಧಾನಿ ಮತ್ತು ನನ್ನ ಕಿರಿಯ ಸಹೋದರ, ಫಿಜಿಯ ಉಪ ಪ್ರಧಾನಿ, ಭಾರತದ ಸಹಕಾರ ಸಚಿವ ಅಮಿತ್ ಶಾ, ಅಂತರರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರು, ವಿಶ್ವಸಂಸ್ಥೆಯ ಪ್ರತಿನಿಧಿಗಳು, ಪ್ರಪಂಚದಾದ್ಯಂತ ಇಲ್ಲಿಗೆ ಆಗಮಿಸಿರುವ ಸಹಕಾರ ಲೋಕದ ಎಲ್ಲಾ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ,ಐಸಿಎ ಜಾಗತಿಕ ಸಹಕಾರ ಸಮ್ಮೇಳನ 2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 25th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಆಯೋಜಿಸಲಾಗಿದ್ದ ಐಸಿಎ ಜಾಗತಿಕ ಸಹಕಾರಿ ಸಮ್ಮೇಳನ-2024 ಅನ್ನು ಉದ್ಘಾಟಿಸಿದರು. ಶ್ರೀ ಮೋದಿ ಅವರು ಸಮ್ಮೇಳನಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಮಂತ್ರಿ ಗೌರವಾನ್ವಿತ ದಾಶೋ ಶೆರಿಂಗ್ ಟೊಬ್ಗೆ, ಫಿಜಿಯ ಉಪಪ್ರಧಾನ ಮಂತ್ರಿ ಮನೋವಾ ಕಾಮಿಕಾಮಿಕಾ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ, ಭಾರತದಲ್ಲಿ ವಿಶ್ವಸಂಸ್ಥೆಯ ಸ್ಥಾನಿಕ ಸಂಚಾಲಕ ಶ್ರೀ ಶೋಂಬಿ ಶಾರ್ಪ್, ಅಂತಾರಾಷ್ಟ್ರೀಯ ಸಹಕಾರಿ ಮೈತ್ರಿಕೂಟದ ಅಧ್ಯಕ್ಷ ಏರಿಯಲ್ ಗೌರ್ಕೊ ಅಲೈಯನ್ಸ್, ವಿವಿಧ ದೇಶಗಳ ಗಣ್ಯರು, ಮಹಿಳೆಯರು ಮತ್ತು ಮಹನೀಯರನ್ನು ಸ್ವಾಗತಿಸಿದರು.ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 24th, 11:30 am
ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.ಸ್ವಚ್ಛತಾ ಹಿ ಸೇವಾ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ
October 02nd, 10:15 am
ಇಂದು ಪೂಜ್ಯ ಬಾಪೂ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜೀ ಅವರ ಜನ್ಮ ದಿನ. ಬಾಪು ಭಾರತೀಯ ಶ್ರೇಷ್ಠ ಪುತ್ರರಾಗಿದ್ದು, ಅವರಿಗಾಗಿ ಶಿರಬಾಗಿ ನಮಿಸುತ್ತೇನೆ. ಗಾಂಧೀಜಿ ಅವರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಲು ಇದು ಸ್ಫೂರ್ತಿಯ ದಿನ. ದೇಶದ ಈ ಮಹಾನ್ ವ್ಯಕ್ತಿಗಳು ಭಾರತದ ಭವಿಷ್ಯವನ್ನು ಆಗಲೇ ಕಲ್ಪನೆ ಮಾಡಿಕೊಂಡಿದ್ದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ದಿವಸ್ 2024 ರಲ್ಲಿ ಭಾಗವಹಿಸಿದರು
October 02nd, 10:10 am
ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಜನಾಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾಗಿ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಟೋಬರ್ 2 ರಂದು 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛ ಭಾರತ ದಿವಸ್ 2024 ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ. ಅಮೃತ್ ಮತ್ತು ಅಮೃತ್ 2.0, ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್ ಮತ್ತು ಗೋಬರ್ಧನ್ ಯೋಜನೆ ಸೇರಿದಂತೆ 9600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ನೈರ್ಮಲ್ಯ ಮತ್ತು ಸ್ವಚ್ಛತೆ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಅಡಿಪಾಯ ಹಾಕಿದರು. ಸ್ವಚ್ಛತಾ ಹಿ ಸೇವಾ 2024 ರ ಧ್ಯೇಯ 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಆಗಿದೆ.ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
August 25th, 11:30 am
ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.ಆಸ್ಟ್ರಿಯಾದ ಚಾನ್ಸೆಲರ್ ಜೊತೆಗಿನ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾಧ್ಯಮ ಹೇಳಿಕೆಯ ಇಂಗ್ಲೀಷ್ ಅನುವಾದ
July 10th, 02:45 pm
ಮೊದಲನೆಯದಾಗಿ, ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ಚಾನ್ಸೆಲರ್ ನೆಹಮ್ಮರ್ ಅವರಿಗೆ ನನ್ನ ಕೃತಜ್ಞತೆಗಳು. ನನ್ನ ಮೂರನೇ ಅವಧಿಯ ಪ್ರಾರಂಭದಲ್ಲಿಯೇ ಆಸ್ಟ್ರಿಯಾಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ನನಗೆ ಸಂತಸ ತಂದಿದೆ. ನನ್ನ ಈ ಭೇಟಿ ಐತಿಹಾಸಿಕವೂ ವಿಶೇಷವೂ ಆಗಿದೆ. ನಲವತ್ತೊಂದು ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡಿದ್ದಾರೆ. ನಮ್ಮ ದ್ವಿಪಕ್ಷೀಯ ಸಂಬಂಧಗಳು 75 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಈ ಭೇಟಿ ನಡೆಯುತ್ತಿರುವುದು ಸಹ ಸಂತಸದ ಕಾಕತಾಳೀಯವಾಗಿದೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 23rd, 02:45 pm
ವೇದಿಕೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮಹೇಂದ್ರ ನಾಥ್ ಪಾಂಡೆ ಜೀ, ಉಪ ಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜೀ, ಬನಾಸ್ ಡೈರಿ ಅಧ್ಯಕ್ಷ ಶಂಕರ್ ಭಾಯ್ ಚೌಧರಿ, ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ಶ್ರೀ ಭೂಪೇಂದ್ರ ಚೌಧರಿ ಜೀ, ರಾಜ್ಯದ ಇತರ ಸಚಿವರು, ಪ್ರತಿನಿಧಿಗಳು, ಮತ್ತು ಕಾಶಿಯ ನನ್ನ ಸಹೋದರ ಸಹೋದರಿಯರೇ.ವಾರಣಾಸಿಯಲ್ಲಿ 13,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿಗಳು
February 23rd, 02:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯಲ್ಲಿ 13,000 ಕೋಟಿ ರೂಗಳಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ವಾರಣಾಸಿಯ ಕಾರ್ಖಿಯಾನ್‌ನಲ್ಲಿರುವ ʻಯುಪಿಎಸ್‌ಐಡಿಎ ಆಗ್ರೋ ಪಾರ್ಕ್ʼನಲ್ಲಿ ನಿರ್ಮಿಸಲಾಗಿರುವ ʻಬನಸ್ಕಾಂತ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತʼ ಒಡೆತನದ ಹಾಲು ಸಂಸ್ಕರಣಾ ಘಟಕವಾದ ʻಬನಾಸ್ ಕಾಶಿ ಸಂಕುಲ್ʼಗೆ ಭೇಟಿ ನೀಡಿ ಪಶುಸಂಗೋಪನಾ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ʻಪಿಎಂ ಮೋದಿ ಉದ್ಯೋಗ ಪತ್ರʼಗಳು ಮತ್ತು ʻಜಿಐ ಅಧಿಕೃತ ಬಳಕೆದಾರ ಪ್ರಮಾಣಪತ್ರʼಗಳನ್ನು ವಿತರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರಸ್ತೆ, ರೈಲು, ವಾಯುಯಾನ, ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನಗರಾಭಿವೃದ್ಧಿ ಮತ್ತು ನೈರ್ಮಲ್ಯದಂತಹ ಪ್ರಮುಖ ಕ್ಷೇತ್ರಗಳ ಅಗತ್ಯಗಳನ್ನು ಪೂರೈಸುತ್ತವೆ.ವಿಕಸಿತ ಭಾರತ-ವಿಕಸಿತ ಗೋವಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 06th, 02:38 pm
ಗೋವಾ ರಾಜ್ಯಪಾಲರಾದ ಪಿ.ಎಸ್. ಶ್ರೀಧರನ್ ಪಿಳ್ಳೈ ಜಿ, ಯುವ ಮುಖ್ಯಮಂತ್ರಿ, ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಇತರೆ ಗಣ್ಯರೆ ಮತ್ತು ಗೋವಾದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಎಲ್ಲಾ ಗೋವಾ ವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು! ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಯಾವಾಗಲೂ ನನ್ನ ಮೇಲೆ ಇರಲಿ!ಗೋವಾದಲ್ಲಿ ವಿಕಸಿತ ಭಾರತ, ವಿಕಸಿತ ಗೋವಾ 2047 ಕಾರ್ಯಕ್ರಮದಲ್ಲಿ 1330 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
February 06th, 02:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ ವಿಕಸಿತ ಭಾರತ್, ವಿಕಸಿತ ಗೋವಾ 2047 ಕಾರ್ಯಕ್ರಮದಲ್ಲಿ 1330 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ಬಳಿಗೆ ತೆರಳಿ ಅದನ್ನು ಶ್ರೀ ಮೋದಿ ಅವರು ವೀಕ್ಷಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳಲ್ಲಿ ಶಿಕ್ಷಣ, ಕ್ರೀಡೆ, ನೀರು ಸಂಸ್ಕರಣೆ, ತ್ಯಾಜ್ಯ ನಿರ್ವಹಣೆ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಮೂಲಸೌಕರ್ಯಗಳಿಗೆ ಉತ್ತೇಜನ ನೀಡಲಾಗಿದೆ. ಪ್ರಧಾನಮಂತ್ರಿಯವರು ರೋಜ್ ಗಾರ್ ಮೇಳದಡಿ ವಿವಿಧ ಇಲಾಖೆಗಳಲ್ಲಿ 1930 ಹೊಸ ಸರ್ಕಾರಿ ನೇಮಕಾತಿ ಪಡೆದವರಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು ಮತ್ತು ವಿವಿಧ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ಹಸ್ತಾಂತರಿಸಿದರು.ಮಹಾರಾಷ್ಟ್ರದ ಪುಣೆಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
August 01st, 02:00 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ರಮೇಶ್ ಬೈಸ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಅವರೇ ಮತ್ತು ಅಜಿತ್ ಪವಾರ್ ಅವರೇ, ದಿಲೀಪ್ ಅವರೇ, ಇತರ ಸಚಿವರೇ, ಸಂಸದರೇ, ಶಾಸಕರು ಮತ್ತು ಸಹೋದರ -ಸಹೋದರಿಯರೇ!ಮಹಾರಾಷ್ಟ್ರದ ಪುಣೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ.
August 01st, 01:41 pm
ಪುಣೆಯ ಮೆಟ್ರೋದಲ್ಲಿ ಪೂರ್ಣಗೊಂಡ ವಿಭಾಗಗಳಲ್ಲಿ ಮೆಟ್ರೋ ರೈಲಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿದರು. ಪಿಂಪ್ರಿ ಚಿನ್ ಚನ್ ವಾಡ್ ನಗರ ಪಾಲಿಕೆ [ಪಿಸಿಎಂಸಿ] ವ್ಯಾಪ್ತಿಯಡಿ 1280 ಮನೆಗಳನ್ನು ಅವರು ಹಸ್ತಾಂತರಿಸಿದರು ಮತ್ತು ಪುಣೆ ನಗರ ಪಾಲಿಕೆಯಿಂದ ಪಿಎಂಎವೈ ಯೋಜನೆಯಡಿ 2650ಕ್ಕೂ ಹೆಚ್ಚು ಮನೆಗಳನ್ನು ಫಲಾನುಭವಿಗಳಿಗಾಗಿ ನಿರ್ಮಿಸಲಾಗಿದೆ. ಪಿಸಿಎಂಸಿಯಿಂದ ಸುಮಾರು 1190 ಪಿಎಂಎವೈ ಮನೆಗಳ ನಿರ್ಮಾಣಕ್ಕೆ ಅವರು ಶಿಲಾನ್ಯಾಸ ನೆರವೇರಿಸಿದರು. ಪುಣೆ ಮೆಟ್ರೋಪಾಲಿಟಿನ್ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ 6400ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ಪಿಸಿಎಂಸಿ ಅಭಿವೃದ್ಧಿಯಿಂದ 300 ಕೋಟಿ ರೂಪಾಯಿ ವೆಚ್ಚದಲ್ಲಿ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಘಟಕವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.ಪ್ರಧಾನಿ ಆಗಸ್ಟ್ 1ರಂದು ಪುಣೆಗೆ ಭೇಟಿ
July 30th, 01:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 1 ರಂದು ಮಹಾರಾಷ್ಟ್ರದ ಪುಣೆಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ದಗ್ದುಶೇತ್ ಮಂದಿರಕ್ಕೆ ಭೇಟಿ ನೀಡಿ ದರ್ಶನ ಮತ್ತು ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 11:45ಕ್ಕೆ ಪ್ರಧಾನಿ ಅವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಂತರ ಮಧ್ಯಾಹ್ನ 12:45 ಕ್ಕೆ ಪ್ರಧಾನ ಮಂತ್ರಿ ಅವರು ಮೆಟ್ರೋ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ವಿಶ್ವ ಪರಿಸರ ದಿನ 2023ರ ಪ್ರಯುಕ್ತ ಪ್ರಧಾನ ಮಂತ್ರಿಗಳ ವಿಡಿಯೋ ಸಂದೇಶದ ಇಂಗ್ಲಿಷ್ ಭಾಷಣದ ವಿವರ
June 05th, 03:00 pm
ವಿಶ್ವ ಪರಿಸರ ದಿನಾಚರಣೆಯಂದು ನಿಮ್ಮೆಲ್ಲರಿಗೂ, ದೇಶ ಹಾಗೂ ಜಗತ್ತಿನಾದ್ಯಂತ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತೊಡೆದು ಹಾಕುವುದು ಈ ವರ್ಷದ ಪರಿಸರ ದಿನದ ಧ್ಯೇಯವಾಗಿದೆ. ಈ ಜಾಗತಿಕ ಉಪಕ್ರಮಕ್ಕೂ ಮೊದಲೇ ಭಾರತದವು ಕಳೆದ 4-5 ವರ್ಷಗಳಿಂದ ಈ ವಿಚಾರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಹಿಂದೆ ಅಂದರೆ 2018ರ ಆರಂಭದಲ್ಲೇ ಭಾರತವು ಏಕ-ಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಎರಡು ಹಂತದ ಪ್ರಯತ್ನ ಆರಂಭಿಸಿತು. ಒಂದೆಡೆ ಏಕ ಬಳಕೆ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಿದ್ದರೆ ಮತ್ತೊಂದೆಡೆ ಪ್ಲಾಸ್ಟಿಕ್ ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿತು. ಇದರ ಪರಿಣಾಮವಾಗಿ ದೇಶದಲ್ಲಿ ಸುಮಾರು 30 ಲಕ್ಷ ಟನ್‌ನಷ್ಟು ಪ್ಲಾಸ್ಟಿಕ್ ಪ್ಯಾಕೇಜಿಂಗ್ ಉತ್ಪನ್ನಗಳನ್ನು ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ. ಇದು ದೇಶದಲ್ಲಿ ವಾರ್ಷಿಕವಾಗಿ ಉತ್ಪತ್ತಿಯಾಗುವ ಶೇ. 75ರಷ್ಟು ಪ್ಲಾಸ್ಟಿಕ್ ತ್ಯಾಜ್ಯದಷ್ಟಾಗಿದೆ. ಈ ಪ್ಲಾಸ್ಟಿಕ್ ತ್ಯಾಜ್ಯ ಮರುಬಳಕೆ ಪ್ರಕ್ರಿಯೆಯಲ್ಲಿ 10000ಕ್ಕೂ ಹೆಚ್ಚು ಉತ್ಪಾದಕರು, ಆಮದುದಾರರು, ಪ್ರತಿಷ್ಠಿತ ಬ್ರ್ಯಾಂಡ್‌ನ ಮಾಲೀಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ವಿಶ್ವ ಪರಿಸರ ದಿನವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಿ ಭಾಷಣ
June 05th, 02:29 pm
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ವಿಶ್ವ ಪರಿಸರ ದಿನದಂದು ವಿಶ್ವದ ಪ್ರತಿಯೊಂದು ದೇಶಕ್ಕೂ ತಮ್ಮ ಶುಭಾಶಯಗಳನ್ನು ತಿಳಿಸಿದರು. ಈ ವರ್ಷದ ಪರಿಸರ ದಿನದ ಘೋಷ ವಾಕ್ಯ ಏಕ-ಬಳಕೆಯ ಪ್ಲಾಸ್ಟಿಕ್ ತೊಡೆದುಹಾಕಲು ಅಭಿಯಾನದ ಕುರಿತು ಒತ್ತಿ ಹೇಳಿದ ಅವರು, ಭಾರತವು ಕಳೆದ 4-5 ವರ್ಷಗಳಿಂದ ಈ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಭಾರತವು 2018ರಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡಲು ಎರಡು ಹಂತಗಳಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿತು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಒಂದೆಡೆ, ನಾವು ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಿದ್ದೇವೆ, ಮತ್ತೊಂದೆಡೆ, ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದರು. ಆ ಕಾರಣದಿಂದಾಗಿ, ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ವಾರ್ಷಿಕ ಪ್ಲಾಸ್ಟಿಕ್ ತ್ಯಾಜ್ಯದ ಶೇಕಡ 75 ರಷ್ಟಿರುವ ಸುಮಾರು 30 ಲಕ್ಷ ಟನ್ ಪ್ಲಾಸ್ಟಿಕ್ ಪ್ಯಾಕೇಜಿಂಗ್ ಅನ್ನು ಭಾರತದಲ್ಲಿ ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ ಮತ್ತು ಸುಮಾರು 10 ಸಾವಿರ ಉತ್ಪಾದಕರು, ಆಮದುದಾರರು ಮತ್ತು ಬ್ರ್ಯಾಂಡ್‌ಗಳು ಬಂದಿವೆ ಇದರ ವ್ಯಾಪ್ತಿಗೆ ಬಂದಿವೆ ಎಂದು ಪ್ರಧಾನಿ ಹೇಳಿದರು.ಮೇ 12ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
May 11th, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 12ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:30 ಕ್ಕೆ ಗಾಂಧಿನಗರದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಷನ್ ನಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಗಾಂಧಿನಗರದಲ್ಲಿ ಸುಮಾರು 4400 ಕೋಟಿ ರೂ.ಗಳ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪ್ರಧಾನಮಂತ್ರಿಯವರು ಗಿಫ್ಟ್ ಸಿಟಿಗೆ ಭೇಟಿ ನೀಡಲಿದ್ದಾರೆ.‘ನಗರ ಯೋಜನೆ, ಅಭಿವೃದ್ಧಿ ಮತ್ತು ನೈರ್ಮಲ್ಯ’ ಕುರಿತ ಬಜೆಟ್ ನಂತರದ ವೆಬಿನಾರ್‌ನಲ್ಲಿ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 01st, 10:20 am
ನಗರಾಭಿವೃದ್ಧಿ - ಈ ಪ್ರಮುಖ ವಿಷಯದ ಸಮಾಲೋಚನೆ ಕುರಿತ ಬಜೆಟ್ ವೆಬಿನಾರ್‌ಗೆ ನಿಮ್ಮೆಲ್ಲರಿಗೂ ಸ್ವಾಗತ.