140 ಕೋಟಿ ಜನರು ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

November 26th, 11:30 am

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ 'ಮನದ ಮಾತಿ' ಗೆ ನಿಮಗೆ ಸ್ವಾಗತ. ಆದರೆ ನವೆಂಬರ್ 26 ಇಂದಿನ ದಿನವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶದಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದರು. ಆದರೆ ಆ ದಾಳಿಯಿಂದ ಚೇತರಿಸಿಕೊಂಡು ಈಗ ಸಂಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿರುವುದು ಭಾರತದ ಶಕ್ತಿಯಾಗಿದೆ. ಮುಂಬೈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಈ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ನಮ್ಮ ವೀರ ಪುರುಷರನ್ನು ಇಂದು ದೇಶ ಸ್ಮರಿಸಿಕೊಳ್ಳುತ್ತಿದೆ.

ಸರ್ದಾರ್ ಪಟೇಲ್ ಪ್ರಯತ್ನದಿಂದಾಗಿ 'ಏಕ್ ಭಾರತ್, ಶ್ರೇಷ್ಠ ಭಾರತ್' ಕನಸನ್ನು ನಾವು ಅರಿತುಕೊಂಡಿದ್ದೇವೆ : ಪ್ರಧಾನಿ ಮೋದಿ

September 17th, 12:26 pm

ಗುಜರಾತ್ ನ ದಭೋಯಿ ನಲ್ಲಿ ರಾಷ್ಟ್ರೀಯ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಮ್ಯೂಸಿಯಂಗಾಗಿ ಮೋದಿ ಇಂದು ಶಂಕುಸ್ಥಾಪನೆ ಮಾಡಿದರು . ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಸಾಹತುಶಾಹಿಗಳಿಗೆ ವಿರುದ್ಧ ಬಲವಾದ ಹೋರಾಟವನ್ನು ನೀಡಿದ ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಹೋರಾಟಗಾರರನ್ನು ನಾವು ನೆನಪಿಸುತ್ತೇವೆ ಎಂದು ಹೇಳಿದರು.

ಸರ್ದಾರ್ ಸರೋವರ ಜಲಾಶಯವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ; ರಾಷ್ಟ್ರೀಯ ಬುಡಕಟ್ಟು ಸ್ವಾತಂತ್ರ್ಯ ಯೋಧರ ವಸ್ತುಸಂಗ್ರಹಾಲಯದ ಶಂಕುಸ್ಥಾಪನೆ ಮಾಡಿದರು

September 17th, 12:25 pm

ದಬೋಯ್ ನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ, ಪ್ರಧಾನಮಂತ್ರಿಯವರು ರಾಷ್ಟ್ರೀಯ ಬುಡಕಟ್ಟು ಸ್ವಾತಂತ್ರ್ಯ ಯೋಧರ ವಸ್ತುಸಂಗ್ರಹಾಲಯದ ಶಂಕುಸ್ಥಾಪನೆ ಅಂಗವಾಗಿ ಶಿಲಾನ್ಯಾಸ ನೆರವೇರಿಸಿದರು . ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಸಾಹತುಶಾಹಿಗಳಿಗೆ ಬಲವಾದ ಹೋರಾಟವನ್ನು ನೀಡಿದ ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸುತ್ತೇವೆ ಎಂದು ಹೇಳಿದರು.