ಸವಾಲಿನ ಈ ಸಮಯದಲ್ಲಿ ನಾವೆಲ್ಲರೂ ಕೇರಳದ ಜನರೊಂದಿಗೆ ನಿಲ್ಲುವೆವು – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 10th, 10:58 pm

ವಯನಾಡಿನಲ್ಲಿ ಭೂಕುಸಿತದಲ್ಲಿ ಬಾಧಿತರಾದವರಿಗೆ ಎಲ್ಲಾ ಸಾಧ್ಯ ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಎಕ್ಸ್ ನಲ್ಲಿ ಸರಣಿ ಪೋಸ್ಟ್ ಗಳನ್ನು ಮಾಡಿರುವ ಪ್ರಧಾನಮಂತ್ರಿಗಳು, “ವಯನಾಡಿನ ಭೂಕುಸಿತ ದುರಂತದಿಂದ ನಮ್ಮೆಲ್ಲರಿಗೂ ದುಃಖವಾಗಿದೆ. ದುರಂತ ಸಂಭವಿಸಿದಾಗಿನಿಂದ, ನಾನು ಪರಿಸ್ಥಿತಿಯ ಬಗ್ಗೆ ನಿಕಟ ನಿಗಾ ವಹಿಸಿದ್ದೇನೆ. ಬಾಧಿತರಿಗೆ ನೆರವು ನೀಡಲು ಎಲ್ಲಾ ಸಂಪನ್ಮೂಲಗಳನ್ನು ಕೇಂದ್ರ ಸರ್ಕಾರ ಒದಗಿಸಿದೆ. ಇಂದು ನಾನು ಅಲ್ಲಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಿದ್ದೇನೆ. ನಾನು ವೈಮಾನಿಕ ಸಮೀಕ್ಷೆಯನ್ನೂ ಕೈಗೊಂಡೆನು” ಎಂದು ಹೇಳಿದ್ದಾರೆ.

ಕೇರಳದ ವಯನಾಡ್ ನ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ

August 10th, 07:40 pm

ಈ ದುರಂತದ ಬಗ್ಗೆ ನಾನು ಮೊದಲು ತಿಳಿದಾಗಿನಿಂದ, ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಕೇಂದ್ರ ಸರ್ಕಾರದ ಎಲ್ಲಾ ಸಂಬಂಧಿತ ಇಲಾಖೆಗಳನ್ನು ವಿಳಂಬವಿಲ್ಲದೆ ಸಜ್ಜುಗೊಳಿಸುವುದು ಕಡ್ಡಾಯವಾಗಿದೆ ಮತ್ತು ಈ ದುರಂತ ಘಟನೆಯಿಂದ ಬಾಧಿತರಾದವರನ್ನು ಬೆಂಬಲಿಸುವ ನಮ್ಮ ಪ್ರಯತ್ನಗಳಲ್ಲಿ ನಾವು ಒಂದಾಗಿದ್ದೇವೆ.

ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದವರ ಜೊತೆ ನಮ್ಮ ಪ್ರಾರ್ಥನೆ ಇದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ, ಪರಿಹಾರ ಕಾರ್ಯಗಳಲ್ಲಿ ನೆರವು ನೀಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರವು ಭರವಸೆ ನೀಡುತ್ತದೆ

August 10th, 07:36 pm

ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಬಾಧಿತರಾದವರಿಗೆ ನಮ್ಮ ಪ್ರಾರ್ಥನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ ಮತ್ತು ಪರಿಹಾರ ಕಾರ್ಯದಲ್ಲಿ ಕೇಂದ್ರದಿಂದ ಎಲ್ಲ ಸಾಧ್ಯ ಬೆಂಬಲದ ಭರವಸೆ ನೀಡಿದ್ದಾರೆ. ಪರಿಹಾರ ಕಾರ್ಯ ಮತ್ತು ಎಲ್ಲಾ ನೆರವನ್ನು ನೀಡಲು ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಇಂದು ಕೇರಳದ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಭೂಕುಸಿತದಿಂದ ಬಾಧಿತವಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೇರಳದ ವಯನಾಡ್‌ನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

July 30th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇರಳದ ವಯನಾಡ್‌ನ ಕೆಲವು ಭಾಗಗಳಲ್ಲಿ ಸಂಭವಿಸಿದ ಭೂಕುಸಿತದಿಂದ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಅಲ್ಲಿನ ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದ್ದಾರೆ.