ಅಸ್ಸಾಂನ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನಲ್ಲಿ ಪ್ರಧಾನಮಂತ್ರಿ ಭಾಷಣದ ಅನುವಾದ
February 19th, 08:42 pm
ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯ ಕ್ರೀಡಾಕೂಟಕ್ಕೆ ನಿಮ್ಮೆಲ್ಲರನ್ನು ಆಹ್ವಾನಿಸಲು ನನಗೆ ಸಂತೋಷವಾಗಿದೆ. ಆಟಗಳ ಈ ಆವೃತ್ತಿಯು ಈಶಾನ್ಯದ ಏಳು ರಾಜ್ಯಗಳ ವಿವಿಧ ನಗರಗಳಲ್ಲಿ ನಡೆಯುತ್ತಿದೆ. ಈ ಆಟಗಳ ಲಾಂಛನ, ಅಷ್ಟಲಕ್ಷ್ಮಿಯನ್ನು ಚಿಟ್ಟೆಯಂತೆ ಚಿತ್ರಿಸಲಾಗಿದೆ, ಈಶಾನ್ಯ ರಾಜ್ಯಗಳ ರೋಮಾಂಚಕ ಮನೋಭಾವವನ್ನು ಸಂಕೇತಿಸುತ್ತದೆ. ನಾನು ಸಾಮಾನ್ಯವಾಗಿ ಈಶಾನ್ಯವನ್ನು ಭಾರತದ ಅಷ್ಟಲಕ್ಷ್ಮಿ ಎಂದು ಉಲ್ಲೇಖಿಸುತ್ತೇನೆ ಮತ್ತು ಚಿಟ್ಟೆಯನ್ನು ಲಾಂಛನವಾಗಿ ಹೊಂದಿರುವುದು ಪ್ರದೇಶದ ಗಗನಕ್ಕೇರುತ್ತಿರುವ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು. ದೇಶದ ಮೂಲೆ ಮೂಲೆಯಿಂದ ನೆರೆದಿರುವ ಎಲ್ಲಾ ಕ್ರೀಡಾಪಟುಗಳಿಗೆ, ನೀವು ಇಲ್ಲಿ ಗುವಾಹಟಿಯಲ್ಲಿ ಶ್ರೇಷ್ಠ ಭಾರತ, ಭವ್ಯವಾದ ಚಿತ್ರಣಕ್ಕೆ ಸಾಕ್ಷಿಯಾಗಿದ್ದೀರಿ. ಕಷ್ಟಪಟ್ಟು ಆಟವಾಡಿ, ಗೆಲುವಿಗಾಗಿ ಶ್ರಮಿಸಿ ಮತ್ತು ನೆನಪಿಡಿ, ಸೋಲಿನಲ್ಲೂ ಕಲಿಯಬೇಕಾದ ಅಮೂಲ್ಯವಾದ ಪಾಠಗಳಿವೆ.ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯ ಕ್ರೀಡಾಕೂಟವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು
February 19th, 06:53 pm
ಕ್ರೀಡಾಪಟುಗಳಿಗೆ ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, ಗುವಾಹಟಿಯಲ್ಲಿ ‘ಏಕ್ ಭಾರತ್ ಶ್ರೇಷ್ಠ ಭಾರತ’ದ ಭವ್ಯ ಚಿತ್ರವನ್ನು ನಿರ್ಮಿಸಿದ್ದಕ್ಕಾಗಿ ಅಭಿನಂದಿಸಿದರು. ಮನಸ್ಸಿನಿಂದ ಆಟವಾಡಿ, ನಿರ್ಭೀತಿಯಿಂದ ಆಟವಾಡಿ, ನಿಮಗಾಗಿ ಮತ್ತು ನಿಮ್ಮ ತಂಡಕ್ಕಾಗಿ ಆಡಿರಿ ಮತ್ತು ನೀವು ಸೋತರೂ, ಚಿಂತಿಸಬೇಡಿ, ಪ್ರತಿ ಹಿನ್ನಡೆಯು ಕಲಿಯಲು ಒಂದು ಅವಕಾಶ ನೀಡುತ್ತದೆ ಎಂದು ಪ್ರಧಾನಿ ಹೇಳಿದರು.ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ತುಳಿಯುವ ಪ್ರಯತ್ನ ನಡೆದಿದೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ
June 26th, 11:30 am
ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಂಡರು. ದೌರ್ಜನ್ಯಗಳ ಹೊರತಾಗಿಯೂ ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಬಾಹ್ಯಾಕಾಶ ಕ್ಷೇತ್ರ, ಕ್ರೀಡೆ, ಭಾರತದ ಸಂಪ್ರದಾಯಗಳು ಮತ್ತು ಸಂಸ್ಕೃತಿಯಲ್ಲಿ ಹೆಚ್ಚುತ್ತಿರುವ ಸ್ಟಾರ್ಟ್‌ಅಪ್‌ಗಳಂತಹ ಹಲವಾರು ಇತರ ವಿಷಯಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದರು. ಸ್ವಚ್ಛತೆ ಮತ್ತು ನೀರಿನ ಸಂರಕ್ಷಣೆಯತ್ತ ನಾಗರಿಕರ ಪ್ರಯತ್ನವನ್ನು ಅವರು ಶ್ಲಾಘಿಸಿದರು.ಮಣಿಪುರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 04th, 09:45 am
ಕಾರ್ಯಕ್ರಮದಲ್ಲಿ ಹಾಜರಿರುವ ಮಣಿಪುರ ರಾಜ್ಯಪಾಲ ಗಣೇಶನ್ ಜೀ, ಮುಖ್ಯಮಂತ್ರಿ ಶ್ರೀ ಎನ್. ಬಿರೇನ್ ಸಿಂಗ್ ಜೀ, ಉಪ ಮುಖ್ಯಮಂತ್ರಿ ವೈ. ಜೋಯ್ ಕುಮಾರ್ ಸಿಂಗ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಭುಪೇಂದ್ರ ಯಾದವ್ ಜೀ, ಮತ್ತು ರಾಜಕುಮಾರ್ ರಂಜನ್ ಸಿಂಗ್ ಜೀ, ಮಣಿಪುರ ಸರಕಾರದಲ್ಲಿ ಸಚಿವರಾಗಿರುವ ಬಿಶ್ವಜಿತ್ ಸಿಂಗ್ ಜೀ, ಲೋಸೀ ದಿಕೋ ಜೀ, ಲೆಟ್ಪಾವೋ ಹಾವೋಕಿಪ್ ಜೀ, ಅವಾಂಗ್ಬೋ ನೆವ್ಮಾಯಿ ಜೀ, ಎಸ್. ರಾಜೆನ್ ಸಿಂಗ್ ಜೀ, ವುಂಗ್ಜಗೀನ್ ವಾಲ್ಟೇ ಜೀ, ಸತ್ಯಬ್ರತ್ ಸಿಂಗ್ ಜೀ, ಮತ್ತು ಒ.ಲುಕಿಯೋ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಗಳೇ, ಶಾಸಕರೇ, ಜನ ಪ್ರತಿನಿಧಿಗಳೇ, ಮತ್ತು ಮಣಿಪುರದ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ! ಖುರುಂಜರಿಮಣಿಪುರದ ಇಂಫಾಲದಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಿದ ಪ್ರಧಾನಮಂತ್ರಿ
January 04th, 09:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಮಣಿಪುರದ ಇಂಫಾಲದಲ್ಲಿ ಸುಮಾರು 1850 ಕೋಟಿ ರೂ. ಮೌಲ್ಯದ 13 ಹೊಸ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು 2950 ಕೋಟಿ ರೂ. ಮೊತ್ತದ 9 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ರಸ್ತೆ ಮೂಲಸೌಕರ್ಯ, ಕುಡಿಯುವ ನೀರು ಪೂರೈಕೆ, ಆರೋಗ್ಯ, ನಗರಾಭಿವೃದ್ಧಿ, ವಸತಿ, ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ವಲಯಗಳಿಗೆ ಸಂಬಂಧಿಸಿದವುಗಳಾಗಿವೆ.ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಪ್ರಧಾನ ಮಂತ್ರಿ ಅಭಿನಂದನೆ.
April 08th, 11:14 am
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಪ್ರಧಾನ ಮಂತ್ರಿ ಅಭಿನಂದನೆ ಹೇಳಿದ್ದಾರೆ.ಪುರುಷರ 77 ಕಿಲೋಗ್ರಾಂ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಸತೀಶ್ ಕುಮಾರ್ ಶಿವಲಿಂಗಂ ಅವರಿಗೆ ಪ್ರಧಾನ ಮಂತ್ರಿ ಅವರಿಂದ ಅಭಿನಂದನೆ.
April 07th, 04:36 pm
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದುದಕ್ಕಾಗಿ ವೈಟ್ ಲಿಫ್ಟರ್ ಸತೀಶ್ ಕುಮಾರ್ ಶಿವಲಿಂಗಂ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.