ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಸಿಂಧಿಯಾ ಶಾಲೆಯ 125ನೇ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

October 21st, 11:04 pm

ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲ ಶ್ರೀ ಮಂಗುಭಾಯ್ ಪಟೇಲ್ ಅವರೇ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಾಗೂ ಸಿಂಧಿಯಾ ಶಾಲಾ ಮಂಡಳಿಯ ನಿರ್ದೇಶಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮತ್ತು ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀ ನರೇಂದ್ರ ಸಿಂಗ್ ತೋಮರ್, ಡಾ. ಜಿತೇಂದ್ರ ಸಿಂಗ್ ಅವರೇ, ಶಾಲಾ ಆಡಳಿತ ಮಂಡಳಿಯ ಸಹೋದ್ಯೋಗಿಗಳೇ, ಎಲ್ಲಾ ಸಿಬ್ಬಂದಿ, ಶಿಕ್ಷಕರು, ಪೋಷಕರು ಮತ್ತು ಆತ್ಮೀಯ ಯುವ ಸ್ನೇಹಿತರೇ!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಿಂಧಿಯಾ ಶಾಲೆಯ 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

October 21st, 05:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 'ದಿ ಸಿಂಧಿಯಾ ಶಾಲೆಯ' 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಭಾಗವಾಗಿ ಪ್ರಧಾನಮಂತ್ರಿಯವರು ಶಾಲೆಯಲ್ಲಿ 'ವಿವಿಧೋದ್ದೇಶ ಕ್ರೀಡಾ ಸಂಕೀರ್ಣ'ಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಪ್ರತಿಭಾವಂತ ಹಳೆಯ ವಿದ್ಯಾರ್ಥಿಗಳು ಮತ್ತು ಉನ್ನತ ಸಾಧಕರಿಗೆ ಶಾಲೆಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಿಂಧಿಯಾ ಶಾಲೆಯನ್ನು 1897ರಲ್ಲಿ ಸ್ಥಾಪಿಸಲಾಯಿತು ಮತ್ತು ಇದು ಐತಿಹಾಸಿಕ ಗ್ವಾಲಿಯರ್ ಕೋಟೆಯ ಮೇಲಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಸ್ಮರಣಾರ್ಥ ಅಂಚೆ ಚೀಟಿಯನ್ನೂ ಬಿಡುಗಡೆ ಮಾಡಿದರು.

​​​​​​​ದೇಶಾದ್ಯಂತ ನನ್ನ ಕುಟುಂಬ ಸದಸ್ಯರೊಂದಿಗೆ ಸಂಪರ್ಕ ಸಾಧಿಸಲು ವಾಟ್ಸಾಪ್ ನನಗೆ ಮತ್ತೊಂದು ಪ್ರಬಲ ಮಾಧ್ಯಮವಾಗಿದೆ: ಪ್ರಧಾನಮಂತ್ರಿ ನರೇಂದ್ರ ಮೋದಿ

October 09th, 06:31 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ದೇಶಾದ್ಯಂತ ಇರುವ ನನ್ನ ಕುಟುಂಬ ಸದಸ್ಯರೊಂದಿಗೆ ಸಂಪರ್ಕ ಸಾಧಿಸಲು ವಾಟ್ಸಾಪ್ ನನಗೆ ಮತ್ತೊಂದು ಪ್ರಬಲ ಮಾಧ್ಯಮವಾಗುತ್ತಿದೆ ಎಂದು ಹೇಳಿದ್ದಾರೆ.