ರಾಜಸ್ಥಾನದ ಸಿಕಾರ್ ನಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 27th, 12:00 pm

ಖಾತು ಶ್ಯಾಮ್ ಜಿ ಅವರ ಭೂಮಿ ದೇಶದಾದ್ಯಂತದ ಭಕ್ತರಲ್ಲಿ ವಿಶ್ವಾಸ ಮತ್ತು ಭರವಸೆಯನ್ನು ತುಂಬುತ್ತದೆ. ಯೋಧರ ಭೂಮಿಯಾದ ಶೇಖಾವತಿಯಿಂದ ಇಂದು ರಾಷ್ಟ್ರಕ್ಕಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸುವ ಅವಕಾಶ ನನಗೆ ದೊರೆತಿರುವುದು ನನ್ನ ಅದೃಷ್ಟ. ಇಂದು, ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಭಾಗವಾಗಿ ಸುಮಾರು 18,000 ಕೋಟಿ ರೂಪಾಯಿಗಳನ್ನು ಇಲ್ಲಿಂದ ಲಕ್ಷಾಂತರ ರೈತರ ಬ್ಯಾಂಕ್ ಖಾತೆಗಳಿಗೆ ಕಳುಹಿಸಲಾಗಿದೆ. ಈ ಮೊತ್ತವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ.

ರಾಜಸ್ಥಾನದ ಸಿಕಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳು ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

July 27th, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಸಿಕಾರ್ ನಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು. ರಾಷ್ಟ್ರಕ್ಕೆ ಸಮರ್ಪಿಸಲಾದ ಈ ಯೋಜನೆಗಳಲ್ಲಿ 1.25 ಲಕ್ಷಕ್ಕೂ ಅಧಿಕ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳು(ಪಿಎಂಕೆಎಸ್ ಕೆ)ಗಳ ಲೋಕಾರ್ಪಣೆ, ಸಲ್ಫರ್ ಲೇಪಿತ ಹೊಸ ಬಗೆಯ ಯೂರಿಯಾ – ಯೂರಿಯಾ ಗೋಲ್ಡ್ ಬಿಡುಗಡೆ, 1600ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳನ್ನು ಡಿಜಿಟಲ್ ವ್ಯವಹಾರಕ್ಕೆ ಮುಕ್ತ ಜಾಲ(ಒಎನ್ ಡಿಸಿ) ವೇದಿಕೆಗೆ ತರುವುದು, ಪಿಎಂ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಅಡಿ 8.5 ಕೋಟಿ ಫಲಾನುಭವಿಗಳಿಗೆ 14ನೇ ಕಂತಿನ 17,000 ಕೋಟಿ ರೂ. ಬಿಡುಗಡೆ, ಚಿತ್ತೋರ್ ಗಢ, ಧೋಲಾಪುರ್, ಸಿರೋಹಿ, ಸಿಕಾರ್ ಮತ್ತು ಶ್ರೀಗಂಗಾನಗರಗಳಲ್ಲಿ 5 ಹೊಸ ವೈದ್ಯಕೀಯ ಕಾಲೇಜುಗಳ ಉದ್ಘಾಟನೆ, ಬರಾನ್, ಬುಂಡಿ, ಕರೌಲಿ, ಜುನ್ ಜಹುನು, ಸವಾಯಿ ಮಾಧೋಪುರ್, ಜೈಸಲ್ಮೇರ್, ಟೋಂಕ್ ನಲ್ಲಿ 7 ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ, ಉದಯ್ ಪುರ, ಬನ್ಸವಾರ್, ಪ್ರತಾಪ್ ಗಡ್ ಮತ್ತು ಡುಂಗಾರ್ಪುರ ಜಿಲ್ಲೆಗಳಲ್ಲಿ ಮತ್ತು ಜೋಧ್ ಪುರ್ ನ ಕೇಂದ್ರೀಯ ವಿದ್ಯಾಲಯ ತಿವರಿಯಲ್ಲಿ 6 ಏಕಲವ್ಯ ಮಾದರಿ ವಸತಿ ಶಾಲೆಗಳ ಉದ್ಘಾಟನೆಯೂ ಸೇರಿದೆ.

ಶ್ವೇತಭವನಕ್ಕೆ ಆಗಮನ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿಕೆ

June 22nd, 11:48 pm

ಆರಂಭದಲ್ಲಿ, ಅಧ್ಯಕ್ಷ ಬೈಡೆನ್ ಅವರ ಸ್ವಾಗತಾರ್ಹ ಮತ್ತು ಒಳನೋಟವುಳ್ಳ ಭಾಷಣಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ಅಮೆರಿಕ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಸಂವಾದದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆಯ ಅನುವಾದ

June 22nd, 11:19 pm

ಭಾರತ-ಅಮೆರಿಕ ಸಂಬಂಧಗಳ ಇತಿಹಾಸದಲ್ಲಿ ಈ ದಿನವು ಅತ್ಯಂತ ವಿಶೇಷ ಮಹತ್ವವಾಗಿದೆ. ಇಂದು ನಮ್ಮ ಚರ್ಚೆಗಳು ಮತ್ತು ತೆಗೆದುಕೊಂಡ ಪ್ರಮುಖ ನಿರ್ಧಾರಗಳು ಹೊಸ ಅಧ್ಯಾಯವನ್ನು ತೆರೆದಿವೆ ಮತ್ತು ನಮ್ಮ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ದಿಕ್ಕು ಮತ್ತು ಹೊಸ ಉತ್ಸಾಹವನ್ನು ನೀಡಿದೆ.

ಟೆಕ್ಸಾಸ್‌ನ ಹ್ಯೂಸ್ಟನ್‌ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಅನುವಾದ

September 22nd, 11:59 pm

ಈ ದೃಶ್ಯ, ಈ ವಾತಾವರಣ ಕಲ್ಪನೆಗೆ ನಿಲುಕಲಾರದ್ದು. ಟೆಕ್ಸಾಸ್ ವಿಷಯದಲ್ಲಿ ಎಲ್ಲವೂ ದೊಡ್ಡದಾಗಿರಬೇಕು ಮತ್ತು ಭವ್ಯವಾಗಿರಬೇಕು, ಇದು ಟೆಕ್ಸಾಸ್ ನ ಸ್ವರೂಪದಲ್ಲೇ ಬೇರೂರಿದೆ.

ಹ್ಯೂಸ್ಟನ್‌ನಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ

September 22nd, 11:58 pm

ಟೆಕ್ಸಾಸ್‌ನ ಹ್ಯೂಸ್ಟನ್‌ ಎನ್‌ಆರ್‌ಜಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ’ಹೌಡಿ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 50 ಸಾವಿರಕ್ಕೂ ಹೆಚ್ಚು ಮಂದಿಯನ್ನು ಉದ್ದೇಶಿಸಿ ಭಾಷಣ ಮಾಡಿದರು. ಪ್ರಧಾನ ಮಂತ್ರಿ ಅವರ ಜತೆ ಅಮೆರಿಕ ಜತೆ ಡೊನಾಲ್ಡ್‌ ಜೆ. ಟ್ರಂಪ್‌ ಅವರು ಭಾಗಿಯಾಗಿದ್ದರು.

"ಪ್ರಧಾನಿ ನರೇಂದ್ರ ಮೋದಿ ಅಮೇರಿಕಾದ ಉಪಾಧ್ಯಕ್ಷರನ್ನು ಭೇಟಿಯಾದರು "

June 27th, 12:40 pm

ಪ್ರಧಾನಮಂತ್ರಿ ನರೇಂದ್ರ ಮೋದಿ ವೈಟ್ ಹೌಸ್ ನಲ್ಲಿ ಯುನೈಟೆಡ್ ಸ್ಟೇಟ್ಸ್ ನ ಉಪಾಧ್ಯಕ್ಷರಾದ ಮೈಕ್ ಪೆನ್ಸ್ ಅವರನ್ನು ಭೇಟಿಯಾದರು. ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಯುಎಸ್ ಪಾಲುದಾರಿಕೆಯನ್ನು ಹೆಚ್ಚಿಸಲು ನಾಯಕರು ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.

You have a true friend in the White House: President Trump to PM Modi

June 27th, 03:33 am

While addressing the media today, US President Donald Trump said India has a true friend in the White House. He added that it was great honour to welcome the leader of the world's largest democracy and the meeting would make the ties between both countries stronger. President Trump also appreciated people, culture, heritage and traditions of India. India and USA will always be together in friendship and respect, the US President asserted.

"ನಾವು ಅಮೇರಿಕಾವನ್ನು ಮೌಲ್ಯಯುತ ಪಾಲುದಾರ ಎಂದು ಪರಿಗಣಿಸುತ್ತೇವೆ: ಪ್ರಧಾನಿ ಮೋದಿ "

June 27th, 03:22 am

ನಮ್ಮ ಪ್ರಮುಖ ಕಾರ್ಯಕ್ರಮಗಳಲ್ಲಿ ಅಮೆರಿಕವು ಮೌಲ್ಯಯುತ ಪಾಲುದಾರನನ್ನು ನಾವು ಪರಿಗಣಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಯುಎಸ್ ಅಧ್ಯಕ್ಷರ ಜೊತೆ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಹೇಳಿದರು . ವ್ಯಾಪಾರ, ವಾಣಿಜ್ಯ ಮತ್ತು ಹೂಡಿಕೆ, ತಂತ್ರಜ್ಞಾನ, ನಾವೀನ್ಯತೆ ಮತ್ತು ಜ್ಞಾನದ ಆರ್ಥಿಕತೆಯು ಭಾರತ-ಯುಎಸ್ ಸಹಕಾರದ ಪ್ರಮುಖ ಕ್ಷೇತ್ರಗಳಾಗಿವೆ ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ.

"ಪ್ರಧಾನಿ ಮೋದಿ ಯು.ಎಸ್. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿದ್ದು ವೈಟ್ ಹೌಸ್ ನಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ "

June 27th, 01:23 am

ಪ್ರಧಾನಿ ನರೇಂದ್ರ ಮೋದಿ ಇಂದು ಅಮೆರಿಕ ಅಧ್ಯಕ್ಷ ಡಾ. ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದರು. ಇಬ್ಬರು ನಾಯಕರು ದ್ವಿಪಕ್ಷೀಯ ಮತ್ತು ಅಂತರರಾಷ್ಟ್ರೀಯ ವಿವಾದಾಂಶಗಳನ್ನು ವ್ಯಾಪಕವಾಗಿ ಚರ್ಚಿಸಿದ್ದಾರೆ. ಸವಗಾಟಕ್ಕಾಗಿ ಪ್ರಧಾನಿ ಮೋದಿ ಟ್ರಂಪ್ ಅವರಿಗೆ ಧನ್ಯವಾದ ತಿಳಿಸಿದರು . ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನನ್ನನ್ನುಸ್ವಾಗತಾರ್ಹದಿಂದ ಸ್ವಾಗತಿಸಿದರು, ಸ್ವಾಗತಕ್ಕಾಗಿ ಅವರಿಗೆ ಧನ್ಯವಾದ ಎಂದು ಪ್ರಧಾನಿ ಹೇಳಿದರು.