ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ
September 22nd, 12:00 pm
21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.ಸುರಕ್ಷಿತ ಮತ್ತು ಸುಭದ್ರ ಜಾಗತಿಕ ಶುದ್ಧ ಇಂಧನ ಪೂರೈಕೆ ಸರಪಳಿಗಳನ್ನು ನಿರ್ಮಿಸಲು ಯುಎಸ್-ಭಾರತ ಉಪಕ್ರಮದ ಮಾರ್ಗಸೂಚಿ
September 22nd, 11:44 am
ಪರಸ್ಪರ ಹಂಚಿಕೆಯ ರಾಷ್ಟ್ರೀಯ ಮತ್ತು ಆರ್ಥಿಕ ಭದ್ರತೆಯ ವಿಷಯಗಳಲ್ಲಿ ನಮ್ಮ ಸಹಯೋಗವನ್ನು ಬಲಪಡಿಸಲು/ಆಳಗೊಳಿಸಲು ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತ ಶಾಶ್ವತ ಬದ್ಧತೆಯನ್ನು ಹಂಚಿಕೊಂಡಿವೆ. ನಮ್ಮ ಆರ್ಥಿಕ ಬೆಳವಣಿಗೆಯ ಕಾರ್ಯಸೂಚಿಗಳ ಪ್ರಮುಖ ಅಂಶವಾಗಿ, ನಮ್ಮ ಜನಸಂಖ್ಯೆಗೆ ಉತ್ತಮ ಗುಣಮಟ್ಟದ ಉದ್ಯೋಗಗಳನ್ನು ಸೃಷ್ಟಿಸುವುದು, ಜಾಗತಿಕವಾಗಿ ಶುದ್ಧ ಇಂಧನ ನಿಯೋಜನೆಯನ್ನು ತ್ವರಿತಗೊಳಿಸುವುದು ಮತ್ತು ಜಾಗತಿಕ ಹವಾಮಾನ ಗುರಿಗಳ ಈಡೇರಿಕೆ ಸೇರಿದಂತೆ ಶುದ್ಧ ಇಂಧನ ಪರಿವರ್ತನೆಯ ಪ್ರಯೋಜನಗಳನ್ನು ಪಡೆಯಲು ನಾವು ಒಟ್ಟಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ.ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 16th, 11:30 am
ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು
September 16th, 11:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.ಕಡಲಾಚೆಯ ಪವನ ಶಕ್ತಿ ಯೋಜನೆಗಳ ಅನುಷ್ಠಾನಕ್ಕಾಗಿ ಕಾರ್ಯಸಾಧ್ಯತೆ ಗ್ಯಾಪ್ ಫಂಡಿಂಗ್ (ವಿಜಿಎಫ್) ಯೋಜನೆಗೆ ಕ್ಯಾಬಿನೆಟ್ ಅನುಮೋದನೆ
June 19th, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ಕಡಲಾಚೆಯ ಪವನ ಶಕ್ತಿ ಯೋಜನೆಗಳಿಗೆ ಕಾರ್ಯಸಾಧ್ಯತೆ ಗ್ಯಾಪ್ ಫಂಡಿಂಗ್ (ವಿಜಿಎಫ್) ಯೋಜನೆಗೆ ಅನುಮೋದನೆ ನೀಡಿದ್ದು, ಒಟ್ಟು ರೂ.7453 ಕೋಟಿ ವೆಚ್ಚದಲ್ಲಿ, ಸ್ಥಾಪನೆ ಮತ್ತು ಕಾರ್ಯಾರಂಭಕ್ಕೆ ರೂ.6853 ಕೋಟಿ ವೆಚ್ಚವನ್ನು ಒಳಗೊಂಡಿದೆ. 1 GW ಆಫ್‌ಶೋರ್ ಪವನ ಶಕ್ತಿ ಯೋಜನೆಗಳು (ಗುಜರಾತ್ ಮತ್ತು ತಮಿಳುನಾಡು ಕರಾವಳಿಯಲ್ಲಿ ತಲಾ 500 MW), ಮತ್ತು ಕಡಲಾಚೆಯ ಪವನ ಶಕ್ತಿ ಯೋಜನೆಗಳಿಗೆ ಲಾಜಿಸ್ಟಿಕ್ಸ್ ಅವಶ್ಯಕತೆಗಳನ್ನು ಪೂರೈಸಲು ಎರಡು ಬಂದರುಗಳ ಉನ್ನತೀಕರಣಕ್ಕಾಗಿ ರೂ.600 ಕೋಟಿ ಅನುದಾನ.ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
August 25th, 09:30 pm
ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
August 25th, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.ಬ್ರಿಕ್ಸ್ ಉದ್ಯಮ ವ್ಯವಹಾರ ವೇದಿಕೆ ನಾಯಕರ ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 22nd, 10:42 pm
ನಾವು ದಕ್ಷಿಣ ಆಫ್ರಿಕಾ ನೆಲಕ್ಕೆ ಕಾಲಿಟ್ಟ ತಕ್ಷಣ, ನಮ್ಮ ಕಾರ್ಯಕ್ರಮದ ಪ್ರಾರಂಭವನ್ನು ಬ್ರಿಕ್ಸ್ ಉದ್ಯಮ ವ್ಯವಹಾರ ವೇದಿಕೆಯ ಮೂಲಕ ಮಾಡಲಾಗುತ್ತಿದೆ ಎಂಬುದು ನನಗೆ ಸಂತೋಷವಾಗಿದೆ.ಬ್ರಿಕ್ಸ್ ವಾಣಿಜ್ಯ ವೇದಿಕೆ ನಾಯಕರ ಸಂವಾದದಲ್ಲಿ ಪ್ರಧಾನಮಂತ್ರಿಯವರ ಭಾಗವಹಿಸುವಿಕೆ
August 22nd, 07:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 22 ಆಗಸ್ಟ್ 2023 ರಂದು ಜೋಹಾನ್ಸ್ಬರ್ಗ್ನಲ್ಲಿ ಬ್ರಿಕ್ಸ್ ವಾಣಿಜ್ಯ ವೇದಿಕೆಯ ನಾಯಕರ ಸಂವಾದದಲ್ಲಿ ಭಾಗವಹಿಸಿದರು.ಜಿ20 ರಾಷ್ಟ್ರಗಳ ಇಂಧನ ಸಚಿವರ ಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ವಿಡಿಯೊ ಸಂದೇಶದ ಪಠ್ಯ
July 22nd, 10:00 am
ನಮ್ಮಲ್ಲಿನ ವಿಭಿನ್ನ ನೈಜತೆಗಳನ್ನು ಗಮನಿಸಿದರೆ, ಶಕ್ತಿಯ ಪರಿವರ್ತನೆಗೆ ನಮ್ಮ ಮಾರ್ಗಗಳು ವಿಭಿನ್ನವಾಗಿವೆ. ಆದರೆ, ನಮ್ಮೆಲ್ಲರ ಗುರಿಗಳು ಒಂದೇ ಎಂದು ನಾನು ದೃಢವಾಗಿ ನಂಬುತ್ತೇನೆ. ಹಸಿರು ಇಂಧನದ ಬೆಳವಣಿಗೆ ಮತ್ತು ಶಕ್ತಿ ಪರಿವರ್ತನೆಯಲ್ಲಿ ಭಾರತವು ಮಹತ್ತರವಾದ ಪ್ರಯತ್ನಗಳನ್ನು ಮಾಡುತ್ತಿದೆ. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ ಮತ್ತು ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿದೆ. ನಾವು ನಮ್ಮ ಹವಾಮಾನ ಬದ್ಧತೆಗಳ ಮೇಲೆ ಅಚಲವಾಗಿ ಚಲಿಸುತ್ತಿದ್ದೇವೆ. ಹವಾಮಾನ ಕ್ರಮದಲ್ಲಿ ಭಾರತ ನಾಯಕತ್ವವನ್ನು ತೋರಿಸಿದೆ. ನಾವು ನಮ್ಮ ಪಳೆಯುಳಿಕೆ ರಹಿತ ವಿದ್ಯುತ್ ಸಾಮರ್ಥ್ಯದ ಗುರಿಯನ್ನು ಒಂಬತ್ತು ವರ್ಷಗಳ ಮುಂಚಿತವಾಗಿಯೇ ಸಾಧಿಸಿದ್ದೇವೆ. ನಾವು ಈಗ ಹೆಚ್ಚಿನ ಗುರಿಯನ್ನು ಹೊಂದಿದ್ದೇವೆ. ನಾವು 2030 ರ ವೇಳೆಗೆ ಶೇಕಡಾ 50 ರಷ್ಟು ಪಳೆಯುಳಿಕೆ ರಹಿತ ಸ್ಥಾಪಿತ ಸಾಮರ್ಥ್ಯವನ್ನು ಸಾಧಿಸಲು ಯೋಜಿಸಿದ್ದೇವೆ. ಸೌರ ಮತ್ತು ಪವನ ಶಕ್ತಿಯ ಜಾಗತಿಕ ನಾಯಕರಲ್ಲಿ ಭಾರತವೂ ಸಹ ಇದೆ. ಜಿ20 ಕಾರ್ಯತಂಡದ ಪ್ರತಿನಿಧಿಗಳು ಪಾವಗಡ ಸೋಲಾರ್ ಪಾರ್ಕ್ ಮತ್ತು ಮೊಧೇರಾ ಸೋಲಾರ್ ಗ್ರಾಮಕ್ಕೆ ಭೇಟಿ ನೀಡಿರುವುದು ಸಂತಸ ತಂದಿದೆ. ಶುದ್ಧ ಇಂಧನಕ್ಕೆ ಭಾರತದ ಬದ್ಧತೆಯ ಮಟ್ಟ ಮತ್ತು ಪ್ರಮಾಣವನ್ನು ಅವರು ಸನಿಹದಿಂದ ವೀಕ್ಷಿಸಿದ್ದಾರೆ.ಜಿ-20 ಇಂಧನ ಸಚಿವರ ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
July 22nd, 09:48 am
ಪ್ರತಿಯೊಂದು ರಾಷ್ಟ್ರವು ವಿಭಿನ್ನವಾದ ವಾಸ್ತವತೆ ಮತ್ತು ಇಂಧನ ಪರಿವರ್ತನೆಯ ಮಾರ್ಗ ಹೊಂದಿದ್ದರೂ ಸಹ, ಪ್ರತಿಯೊಂದು ದೇಶದ ಗುರಿಗಳು ಒಂದೇ ಆಗಿರುತ್ತವೆ. ಹಸಿರು ಬೆಳವಣಿಗೆ ಮತ್ತು ಇಂಧನ ಸ್ಥಿತ್ಯಂತರದಲ್ಲಿ ಭಾರತದ ಪ್ರಯತ್ನಗಳನ್ನು ಪ್ರಸ್ತಾಪಿಸಿದ ಅವರು, ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ ಮತ್ತು ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿದೆ. ಜತೆಗೆ ಅದು ಹವಾಮಾನ ಬದ್ಧತೆಯ ಕಡೆಗೆ ಬಲವಾಗಿ ಚಲಿಸುತ್ತಿದೆ. ಭಾರತವು ತನ್ನ ಉರವಲು ರಹಿತ ಸ್ಥಾಪಿತ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಗುರಿಯನ್ನು 9 ವರ್ಷಗಳ ಮೊದಲೇ ಸಾಧಿಸಿದೆ, ಇನ್ನೂ ಹೆಚ್ಚಿನ ಗುರಿ ಹೊಂದಿದೆ. 2030ರ ವೇಳೆಗೆ ರಾಷ್ಟ್ರವು 50 ಪ್ರತಿಶತ ಉರವಲುರಹಿತ ಸ್ಥಾಪಿತ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಸಾಧಿಸಲು ಯೋಜಿಸಿದೆ. “ಸೌರ ಮತ್ತು ಪವನ ಶಕ್ತಿ ಉತ್ಪಾದನೆಯ ಜಾಗತಿಕ ನಾಯಕರಲ್ಲಿ ಭಾರತವೂ ಒಂದಾಗಿದೆ”, ಪಾವಗಡ ಸೋಲಾರ್ ಪಾರ್ಕ್ ಮತ್ತು ಮೋದಗೇರಾ ಸೋಲಾರ್ ಪಾರ್ಕ್‌ಗೆ ಭೇಟಿ ನೀಡುವ ಮೂಲಕ ಕಾರ್ಯಕಾರಿ ಗುಂಪಿನ ಪ್ರತಿನಿಧಿಗಳು ಭಾರತದ ಬದ್ಧತೆಯ ಮಟ್ಟ ಮತ್ತು ಪ್ರಮಾಣವನ್ನು ವೀಕ್ಷಿಸುವ ಅವಕಾಶ ಪಡೆದುಕೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು.4800 ಕೋಟಿ ರೂ. ಗಳ ಹಣ ಹಂಚಿಕೆಯೊಂದಿಗೆ 2022-23 ರಿಂದ 2025-26ನೇ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ "ರೋಮಾಂಚಕ ಗ್ರಾಮಗಳ ಕಾರ್ಯಕ್ರಮ"ಕ್ಕೆ ಸಂಪುಟದ ಅನುಮೋದನೆ
February 15th, 03:51 pm
ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 4800 ಕೋಟಿ ರೂ.ಗಳ ಹಣ ಹಂಚಿಕೆಯೊಂದಿಗೆ 2022-23ರಿಂದ 2025-26ರ ಹಣಕಾಸು ವರ್ಷದವರೆಗೆ ಕೇಂದ್ರ ಪ್ರಾಯೋಜಿತ ಯೋಜನೆ ರೋಮಾಂಚಕ ಗ್ರಾಮ ಕಾರ್ಯಕ್ರಮ (ವಿವಿಪಿ)ಕ್ಕೆ ತನ್ನ ಅನುಮೋದನೆ ನೀಡಿದೆ.Development of Kutch is a perfect example of a meaningful change with 'Sabka Prayas': PM
August 28th, 11:54 am
PM Modi inaugurated and laid the foundation stone of projects worth around Rs 4400 crore in Bhuj. Addressing the gathering, the Prime Minister said that Smriti Van Memorial in Bhuj and Veer Bal Smarak at Anjar are the symbols of shared pain of Kutch, Gujarat and the entire country.ಭುಜ್ ನಲ್ಲಿ ಸುಮಾರು 4400 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
August 28th, 11:53 am
PM Modi inaugurated and laid the foundation stone of projects worth around Rs 4400 crore in Bhuj. Addressing the gathering, the Prime Minister said that Smriti Van Memorial in Bhuj and Veer Bal Smarak at Anjar are the symbols of shared pain of Kutch, Gujarat and the entire country.Clear power dues: PM Modi urges states
July 30th, 12:31 pm
PM Modi participated in the Grand Finale marking the culmination of ‘Ujjwal Bharat Ujjwal Bhavishya – Power @2047’. He launched the Revamped Distribution Sector Scheme as well as launched various green energy projects of NTPC. Four different directions were worked together to improve the power system - Generation, Transmission, Distribution and Connection, the PM added.PM launches Power Sector’s Revamped Distribution Sector Scheme
July 30th, 12:30 pm
PM Modi participated in the Grand Finale marking the culmination of ‘Ujjwal Bharat Ujjwal Bhavishya – Power @2047’. He launched the Revamped Distribution Sector Scheme as well as launched various green energy projects of NTPC. Four different directions were worked together to improve the power system - Generation, Transmission, Distribution and Connection, the PM added.ನಾರ್ವೆ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಿ
May 04th, 02:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋಪನ್ ಹೇಗನ್‌ನಲ್ಲಿ 2ನೇ ಭಾರತ-ನಾರ್ಡಿಕ್ ಶೃಂಗಸಭೆಯ ವೇಳೆ ನಾರ್ವೆಯ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಜೋನಾಸ್ ಗಹರ್ ಸ್ಟೋರ್ ಅವರನ್ನು ಭೇಟಿ ಮಾಡಿದ್ದರು. ಪ್ರಧಾನ ಮಂತ್ರಿ ಸ್ಟೋರ್ ಅವರು 2021ರ ಅಕ್ಟೋಬರ್ ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ.One has to keep up with the changing times and embrace global best practices: PM
December 15th, 02:40 pm
PM Modi unveiled various developmental projects in Gujarat. Speaking about the farm laws, PM Modi said, Farmers are being misled about the agriculture reforms. He pointed out that the agriculture reforms that have taken place is exactly what farmer bodies and even opposition parties have been asking over the years.