ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 02:21 pm
ಶ್ರೀ ಕಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ, ಪೂಜ್ಯ ಜಗದ್ಗುರುಗಳಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್; ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್; ಶಂಕರ ನೇತ್ರ ಪ್ರತಿಷ್ಠಾನದ ಆರ್.ವಿ.ರಮಣಿ; ಡಾ.ಎಸ್.ವಿ. ಬಾಲಸುಬ್ರಮಣ್ಯಂ; ಶ್ರೀ ಮುರಳಿ ಕೃಷ್ಣಮೂರ್ತಿ; ರೇಖಾ ಜುಂಜುನ್‌ವಾಲಾ; ಮತ್ತು ಸಂಸ್ಥೆಯ ಎಲ್ಲಾ ಇತರ ಗೌರವಾನ್ವಿತ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 20th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್.ಜೆ.ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು. ಆಸ್ಪತ್ರೆಯು ವಿವಿಧ ಕಣ್ಣಿನ ಪರಿಸ್ಥಿತಿಗಳಿಗೆ ಸಮಗ್ರ ಸಮಾಲೋಚನೆಗಳು ಮತ್ತು ಚಿಕಿತ್ಸೆಗಳನ್ನು ನೀಡುತ್ತದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನೂ ಶ್ರೀ ಮೋದಿ ಅವರು ವೀಕ್ಷಿಸಿದರು.ಫ್ಯಾಕ್ಟ್ ಶೀಟ್: ಇಂಡೋ-ಪೆಸಿಫಿಕ್ ನಲ್ಲಿ ಕ್ಯಾನ್ಸರ್ ಹೊರೆಯನ್ನು ಕಡಿಮೆ ಮಾಡಲು ಕ್ವಾಡ್ ದೇಶಗಳು ಕ್ಯಾನ್ಸರ್ ಮೂನ್ಶಾಟ್ ಉಪಕ್ರಮವನ್ನು ಪ್ರಾರಂಭಿಸಿವೆ
September 22nd, 12:03 pm
ಇಂದು, ಅಮೆರಿಕ, ಆಸ್ಟ್ರೇಲಿಯಾ, ಭಾರತ ಮತ್ತು ಜಪಾನ್ ಇಂಡೋ-ಪೆಸಿಫಿಕ್ ನಲ್ಲಿ ನಮಗೆ ತಿಳಿದಿರುವಂತೆ ಕ್ಯಾನ್ಸರ್ ಅನ್ನು ಕೊನೆಗೊಳಿಸಲು ಸಹಾಯ ಮಾಡುವ ಅದ್ಭುತ ಪ್ರಯತ್ನವನ್ನು ಪ್ರಾರಂಭಿಸುತ್ತಿವೆ, ಗರ್ಭಕಂಠದ ಕ್ಯಾನ್ಸರ್ ನಿಂದ ಪ್ರಾರಂಭಿಸಿ, ಈ ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಬಿಕ್ಕಟ್ಟಾಗಿ ಮುಂದುವರೆದಿರುವ ಹೆಚ್ಚಾಗಿ ತಡೆಗಟ್ಟಬಹುದಾದ ಕಾಯಿಲೆಯಿಂದ ಪ್ರಾರಂಭಿಸಿ ಮತ್ತು ಇತರ ರೀತಿಯ ಕ್ಯಾನ್ಸರ್ ಅನ್ನು ಸಹ ಪರಿಹರಿಸಲು ಅಡಿಪಾಯವನ್ನು ಹಾಕುತ್ತಿವೆ. ಈ ಉಪಕ್ರಮವು ಕ್ವಾಡ್ ನಾಯಕರ ಶೃಂಗಸಭೆಯಲ್ಲಿ Quad Leaders Summit . ಮಾಡಿದ ವ್ಯಾಪಕ ಪ್ರಕಟಣೆಗಳ ಭಾಗವಾಗಿದೆ.ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ
September 22nd, 11:51 am
ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 16th, 11:30 am
ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು
September 16th, 11:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.ಜನ್ ಧನ್ ಯೋಜನೆ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು
August 28th, 12:51 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜನ್ ಧನ್ ಯೋಜನೆಯ 10ನೇ ವಾರ್ಷಿಕೋತ್ಸವ ಆಚರಣೆ ಸಂದರ್ಭದಲ್ಲಿ, ಆರ್ಥಿಕ ಸೇರ್ಪಡೆಯ ಮೇಲೆ ಜನ್ ಧನ್ ಯೋಜನೆಯ ಮಹತ್ವದ ಪ್ರಭಾವದ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರು ಜನ್ ಧನ್ ಯೋಜನೆಯ ಎಲ್ಲಾ ಫಲಾನುಭವಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು ಮತ್ತು ಈ ಯೋಜನೆಯನ್ನು ಯಶಸ್ವಿಗೊಳಿಸಿದವರಿಗೆ ಧನ್ಯವಾದಗಳನ್ನು ತಿಳಿಸಿದರು.ತುರ್ತು ಪರಿಸ್ಥಿತಿಯನ್ನು ವಿರೋಧಿಸಿದವರಿಗೆ ಪ್ರಧಾನಮಂತ್ರಿ ನಮನ ಸಲ್ಲಿಸಿದರು
June 25th, 12:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲ ಪುರುಷರು ಮತ್ತು ಮಹಿಳೆಯರಿಗೆ ನಮನ ಸಲ್ಲಿಸಿದರು.ʻಪ್ರಜಾಪ್ರಭುತ್ವಕ್ಕಾಗಿ ಶೃಂಗಸಭೆʼಯ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿಯವರ ಭಾಷಣದ ಪಠ್ಯಾಂತರ
March 20th, 10:55 pm
ಇನ್ನು ಕೆಲವೇ ವಾರಗಳಲ್ಲಿ ವಿಶ್ವವು ಭಾರತದ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಾಕ್ಷಿಯಾಗಲಿದೆ. ಸುಮಾರು ಒಂದು ಶತಕೋಟಿ ಮತದಾರರು ಮತ ಚಲಾಯಿಸುವ ನಿರೀಕ್ಷೆಯಿದ್ದು, ಇದು ಮಾನವಕುಲದ ಇತಿಹಾಸದಲ್ಲಿ ಅತಿದೊಡ್ಡ ಚುನಾವಣಾ ಪ್ರಕ್ರಿಯೆಯಾಗಿದೆ. ಭಾರತದ ಜನರು ಮತ್ತೊಮ್ಮೆ ಪ್ರಜಾಪ್ರಭುತ್ವದಲ್ಲಿ ತಮ್ಮ ನಂಬಿಕೆಯನ್ನು ದೃಢಪಡಿಸುತ್ತಾರೆ. ಭಾರತವು ಪ್ರಾಚೀನ ಮತ್ತು ಅವಿಚ್ಛಿನ್ನ ಪ್ರಜಾಪ್ರಭುತ್ವದ ಸಂಸ್ಕೃತಿಯನ್ನು ಹೊಂದಿದೆ. ಇದು ಭಾರತೀಯ ನಾಗರಿಕತೆಯ ಜೀವನಾಡಿಯಾಗಿದೆ. ಒಮ್ಮತ ಸೃಷ್ಟಿ, ಮುಕ್ತ ಸಂವಾದ ಮತ್ತು ಮುಕ್ತ ಚರ್ಚೆ ಭಾರತದ ಇತಿಹಾಸದುದ್ದಕ್ಕೂ ಪ್ರತಿಧ್ವನಿಸಿದೆ. ಅದಕ್ಕಾಗಿಯೇ ನನ್ನ ಸಹ ನಾಗರಿಕರು ಭಾರತವನ್ನು ʻಪ್ರಜಾಪ್ರಭುತ್ವದ ತಾಯಿʼ ಎಂದು ಪರಿಗಣಿಸುತ್ತಾರೆ.ʻಪ್ರಜಾಪ್ರಭುತ್ವಕ್ಕಾಗಿ ಶೃಂಗಸಭೆʼ ಉದ್ದೇಶಿಸಿ ಪ್ರಧಾನಿಮಂತ್ರಿಗಳ ಭಾಷಣ
March 20th, 10:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ʻಪ್ರಜಾಪ್ರಭುತ್ವಕ್ಕಾಗಿ ಶೃಂಗಸಭೆʼಯನ್ನು ಉದ್ದೇಶಿಸಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ʻಪ್ರಜಾಪ್ರಭುತ್ವಕ್ಕಾಗಿ ಶೃಂಗಸಭೆʼಯನ್ನು ವಿಶ್ವಾದ್ಯಂತ ಪ್ರಜಾಪ್ರಭುತ್ವಗಳಿಗೆ ತಮ್ಮ ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು ಪರಸ್ಪರ ಕಲಿಯಲು ನಿರ್ಣಾಯಕ ವೇದಿಕೆ ಎಂದು ಬಣ್ಣಿಸಿದ ಪ್ರಧಾನಿ, ಪ್ರಜಾಪ್ರಭುತ್ವಕ್ಕೆ ಭಾರತದ ಆಳವಾದ ಬದ್ಧತೆಯನ್ನು ಪುನರುಚ್ಚರಿಸಿದರು. ಭಾರತವು ಪ್ರಾಚೀನ ಮತ್ತು ಅವಿಚ್ಛಿನ್ನ ಪ್ರಜಾಪ್ರಭುತ್ವದ ಸಂಸ್ಕೃತಿಯನ್ನು ಹೊಂದಿದೆ. ಇದು ಭಾರತೀಯ ನಾಗರಿಕತೆಯ ಜೀವನಾಡಿಯಾಗಿದೆ,ʼʼ ಎಂದು ಹೇಳಿದರು. ಒಮ್ಮತದ ನಿರ್ಮಾಣ, ಮುಕ್ತ ಸಂವಾದ ಮತ್ತು ಮುಕ್ತ ಚರ್ಚೆ ಭಾರತದ ಇತಿಹಾಸದುದ್ದಕ್ಕೂ ಪ್ರತಿಧ್ವನಿಸಿದೆ. ಅದಕ್ಕಾಗಿಯೇ ನನ್ನ ಸಹ ನಾಗರಿಕರು ಭಾರತವನ್ನು ಪ್ರಜಾಪ್ರಭುತ್ವದ ತಾಯಿ ಎಂದು ಪರಿಗಣಿಸುತ್ತಾರೆ,ʼʼ ಎಂದು ಪ್ರಧಾನಿ ಮೋದಿ ವಿವರಿಸಿದರು.ವಿಕಸಿತ್ ಭಾರತ್ ರಾಯಭಾರಿ ಭಾರತ್ ಮಂಟಪಂನ ಸ್ಟಾರ್ಟ್ಅಪ್ ಮಹಾಕುಂಭದಲ್ಲಿ ಭೇಟಿಯಾದರು
March 19th, 07:28 pm
19ನೇ ಮಾರ್ಚ್ 2024 ರಂದು, ವಿಕಸಿತ್ ಭಾರತ್‌ನ ದೃಷ್ಟಿಕೋನವನ್ನು ಹೈಲೈಟ್ ಮಾಡಲು, ನವದೆಹಲಿಯ ಭಾರತ್ ಮಂಟಪದಲ್ಲಿರುವ ಸ್ಟಾರ್ಟ್‌ಅಪ್ ಮಹಾಕುಂಭದಲ್ಲಿ ವಿಕಸಿತ್ ಭಾರತ್ ರಾಯಭಾರಿ ಅಧಿವೇಶನವನ್ನು ನಡೆಸಲಾಯಿತು. ಪ್ರಮುಖ ಯುನಿಕಾರ್ನ್ ಸಂಸ್ಥಾಪಕರು, ಸ್ಟಾರ್ಟಪ್ ಸಂಸ್ಥಾಪಕರು, ಮಹಿಳಾ ನಾಯಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ 400+ ಕ್ಕೂ ಹೆಚ್ಚು ಪಾಲ್ಗೊಳ್ಳುವವರು ಈವೆಂಟ್‌ಗೆ ಹಾಜರಿದ್ದರು. ಇದು ವಿಕಸಿತ್ ಭಾರತ್ ರಾಯಭಾರಿ ಅಥವಾ #VB2024 ರ ಬ್ಯಾನರ್ ಅಡಿಯಲ್ಲಿ 17 ನೇ ಸಭೆಯನ್ನು ಗುರುತಿಸಿದೆ.Human-Centric approach should be the way forward for G20 Nations: PM Modi
November 22nd, 09:39 pm
PM Modi made the concluding remarks at the Virtual G20 Summit. He emphasized on the path-breaking G20 Leaders' Declaration that was accorded a unanimous acceptance. He also reiterated the commitment of 'Zero Tolerance' to terrorism and reinforced the concept of the 'Two State Solution' for the Israel-Palestine conflict.ʻಜಿ 20’ ನಾಯಕರ ವರ್ಚುವಲ್ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿಯವರ ಉದ್ಘಾಟನಾ ಭಾಷಣದ ಕನ್ನಡ ಅನುವಾದ
November 22nd, 06:37 pm
ನನ್ನ ಆಹ್ವಾನವನ್ನು ಸ್ವೀಕರಿಸಿ ಇಂದು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞತೆಯನ್ನು ಅರ್ಪಿಸಲು ಬಯಸುತ್ತೇನೆ. 140 ಕೋಟಿ ಭಾರತೀಯರ ಪರವಾಗಿ ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ.ಮಧ್ಯಪ್ರದೇಶದ ಜಬಲ್ ಪುರದಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 05th, 03:31 pm
ಮಧ್ಯಪ್ರದೇಶದ ರಾಜ್ಯಪಾಲ ಶ್ರೀ ಮಂಗು ಭಾಯ್ ಪಟೇಲ್, ಮುಖ್ಯಮಂತ್ರಿ ಭಾಯಿ ಶಿವರಾಜ್ ಸಿಂಗ್ ಚೌಹಾಣ್, ನನ್ನ ಎಲ್ಲಾ ಸಂಪುಟ ಸಹೋದ್ಯೋಗಿಗಳು, ಮಧ್ಯಪ್ರದೇಶ ಸರ್ಕಾರದ ಸಚಿವರು, ಸಂಸದರು, ಶಾಸಕರು, ವೇದಿಕೆಯಲ್ಲಿ ಉಪಸ್ಥಿತರಿರುವ ಇತರ ಎಲ್ಲಾ ಗಣ್ಯರು ಮತ್ತು ನಮ್ಮನ್ನು ಆಶೀರ್ವದಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದ ಮಹಿಳೆಯರ್ ಮತ್ತು ಮಹನೀಯರೇ!ಮಧ್ಯಪ್ರದೇಶದ ಜಬಲ್‌ಪುರದಲ್ಲಿ 12,600 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಿ
October 05th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಜಬಲ್‌ಪುರದಲ್ಲಿ 12,600 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ರಸ್ತೆ, ರೈಲು, ಅನಿಲ ಕೊಳವೆ ಮಾರ್ಗ, ವಸತಿ ಹಾಗೂ ಶುದ್ಧ ಕುಡಿಯುವ ನೀರಿನಂತಹ ವಿವಿಧ ವಲಯಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಿದರು. ರಾಣಿ ದುರ್ಗಾವತಿ ಅವರ 500ನೇ ಜನ್ಮ ಶತಮಾನೋತ್ಸವದ ಅಂಗವಾಗಿ ಜಬಲ್‌ಪುರದಲ್ಲಿ 'ವೀರಾಂಗನ ರಾಣಿ ದುರ್ಗಾವತಿ ಸ್ಮಾರಕ ಮತ್ತು ಉದ್ಯಾನ'ಕ್ಕೆ ಶ್ರೀ ಮೋದಿ ಭೂಮಿ ಪೂಜೆ ನೆರವೇರಿಸಿದರು. ಇಂದೋರ್‌ನಲ್ಲಿ ʻಲೈಟ್ ಹೌಸ್ʼ ಯೋಜನೆಯಡಿ ನಿರ್ಮಿಸಲಾದ 1000ಕ್ಕೂ ಹೆಚ್ಚು ಮನೆಗಳ ಉದ್ಘಾಟನೆ; ಮಾಂಡ್ಲಾ, ಜಬಲ್‌ಪುರ ಮತ್ತು ದಿಂಡೋರಿ ಜಿಲ್ಲೆಗಳಲ್ಲಿ ಅನೇಕ ʻಜಲ ಜೀವನ್ ಮಿಷನ್ʼ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಸಿಯೋನಿ ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗಳ ಲೋಕಾರ್ಪಣೆ; ಮಧ್ಯಪ್ರದೇಶದಲ್ಲಿ ರಸ್ತೆ ಮೂಲಸೌಕರ್ಯವನ್ನು ಸುಧಾರಿಸಲು 4,800 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ; 1,850 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲು ಯೋಜನೆಗಳ ಸಮರ್ಪಣೆ, ವಿಜೈಪುರ-ಔರೈಯಾನ್-ಫೂಲ್‌ಪುರ ಪೈಪ್‌ಲೈನ್ ಯೋಜನೆ ಮತ್ತು ಜಬಲ್‌ಪುರದಲ್ಲಿ ಹೊಸ ಬಾಟ್ಲಿಂಗ್ ಘಟಕ ಹಾಗೂ ಮುಂಬೈ- ನಾಗ್‌ಪುರ -ಜಾರ್ಸುಗುಡ ಪೈಪ್‌ಲೈನ್ ಯೋಜನೆಯ ನಾಗ್‌ಪುರ ಜಬಲ್‌ಪುರ ವಿಭಾಗಕ್ಕೆ (317 ಕಿ.ಮೀ) ಶಂಕುಸ್ಥಾಪನೆ ಈ ಯೋಜನೆಗಳಲ್ಲಿ ಸೇರಿವೆ.PM Modi addresses the Nari Shakti Vandan Abhinandan Karyakram in Ahmedabad
September 26th, 07:53 pm
Addressing the Nari Shakti Vandan Abhinandan Karyakram in Ahmedabad, Prime Minister Narendra Modi hailed the passage of the Nari Shakti Vandan Adhiniyam, seeking to reserve 33% of seats in Lok Sabha and state Assemblies for women. Speaking to the women in the event, PM Modi said, “Your brother has done one more thing in Delhi to increase the trust with which you had sent me to Delhi. Nari Shakti Vandan Adhiniyam, i.e. guarantee of increasing representation of women from Assembly to Lok Sabha.”2 ಕೋಟಿ ಲಕ್ಷಾಧಿಪತಿ ಮಹಿಳೆಯರನ್ನುಸೃಷ್ಟಿಸುವುದು ನಮ್ಮ ಗುರಿಯಾಗಿದೆ; ಡ್ರೋನ್ ಹಾರಾಟಕ್ಕೆ (ಡ್ರೋನ್ ಕಿ ಉಡಾನ್) ಮಹಿಳಾ ಸ್ವಸಹಾಯ ಗುಂಪುಗಳು ಶಕ್ತಿ ತುಂಬುತ್ತಿವೆ: ಪ್ರಧಾನಮಂತ್ರಿ
August 15th, 01:33 pm
“ಗ್ರಾಮಗಳಲ್ಲಿ ʼ2 ಕೋಟಿ ಲಕ್ಷಾಧಿಪತಿ ಮಹಿಳೆಯರನ್ನು(ಲಖ್ ಪತಿ ದೀದಿಯರನ್ನು)ʼ ಸೃಷ್ಟಿಸುವ ಗುರಿಯೊಂದಿಗೆ ಮಹಿಳಾ ಸ್ವಸಹಾಯ ಗುಂಪುಗಳೊಂದಿಗೆ (ಎಸ್.ಎಸ್.ಜಿ) ಕೇಂದ್ರ ಸರ್ಕಾರವು ಕೆಲಸ ಮಾಡುತ್ತಿದೆ” ಎಂದು 77 ನೇ ಸ್ವಾತಂತ್ರ್ಯ ದಿನದದಂದು ದೆಹಲಿಯ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಗುಜರಾತ್‌ನ ಗಾಂಧಿನಗರದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಸಬಲೀಕರಣ ಕುರಿತ ಜಿ-20 ಸಚಿವರ ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
August 02nd, 10:41 am
ಮಹಾತ್ಮ ಗಾಂಧಿ ಅವರ ಹೆಸರಿನ ನಗರವಾದ ಗಾಂಧಿನಗರಕ್ಕೆ ಅದರ ಸಂಸ್ಥಾಪನೆಯ ದಿನದಂದು ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ. ಅಹಮದಾಬಾದ್‌ನ ಗಾಂಧಿ ಆಶ್ರಮಕ್ಕೆ ಭೇಟಿ ನೀಡುವ ಅವಕಾಶ ನಿಮಗೆ ಸಿಕ್ಕಿರುವುದು ನನಗೆ ಖುಷಿ ತಂದಿದೆ. ಇಂದು ಇಡೀ ಜಗತ್ತು ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಮತ್ತು ಸುಸ್ಥಿರ ಪರಿಹಾರಗಳನ್ನು ಹುಡುಕುವ ತುರ್ತು ಕುರಿತು ಮಾತನಾಡುತ್ತಿದೆ. ಗಾಂಧಿ ಆಶ್ರಮದಲ್ಲಿ, ನೀವು ಗಾಂಧೀಜಿ ಅವರ ಜೀವನ ಶೈಲಿಯ ಸರಳತೆ ಮತ್ತು ಸುಸ್ಥಿರತೆ, ಸ್ವಾವಲಂಬನೆ ಮತ್ತು ಸಮಾನತೆಯ ಅವರ ದಾರ್ಶನಿಕ ಕಲ್ಪನೆಗಳನ್ನು ನೇರವಾಗಿ ನೋಡುತ್ತೀರಿ. ನೀವು ಅದನ್ನು ಸ್ಫೂರ್ತಿದಾಯಕವಾಗಿ ಕಾಣುತ್ತೀರಿ ಎಂದು ನನಗೆ ಖಾತ್ರಿಯಿದೆ. ದಂಡಿ ಕುಟೀರ್ ವಸ್ತುಸಂಗ್ರಹಾಲಯದಲ್ಲಿ ನೀವು ಅದನ್ನು ಅನುಭವಿಸಬಹುದು ಮತ್ತು ನೀವು ಅದನ್ನು ತಪ್ಪಿಸಿಕೊಳ್ಳಬಾರದು. ಗಾಂಧೀಜಿ ಅವರ ಪ್ರಸಿದ್ಧ ಚರಕ, ನೂಲುವ ಚಕ್ರ, ಗಂಗಾಬೆನ್ ಎಂಬ ಮಹಿಳೆಗೆ ಹತ್ತಿರದ ಹಳ್ಳಿಯಲ್ಲಿ ಸಿಕ್ಕಿತು ಎಂದು ಇಲ್ಲಿ ಉಲ್ಲೇಖಿಸುವುದು ನನಗೆ ಯೋಗ್ಯ ವಿಷಯವೇ ಆಗಿದೆ. ನಿಮಗೆ ತಿಳಿದಿರುವಂತೆ, ಅಂದಿನಿಂದ, ಗಾಂಧೀಜಿ ಯಾವಾಗಲೂ ಖಾದಿ ಧರಿಸುತ್ತಿದ್ದರು, ಅದು ಸ್ವಾವಲಂಬನೆ ಮತ್ತು ಸುಸ್ಥಿರತೆಯ ಸಂಕೇತವಾಗಿತ್ತು.ʻಮಹಿಳಾ ಸಬಲೀಕರಣ ಕುರಿತ ಜಿ-20 ಸಚಿವರ ಸಮ್ಮೇಳನ’ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
August 02nd, 10:40 am
ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮಹಾತ್ಮಾ ಗಾಂಧಿಯವರ ಹೆಸರಿನಲ್ಲಿರುವ ಗಾಂಧಿನಗರದ ಸಂಸ್ಥಾಪನಾ ದಿನದಂದು ಗಣ್ಯರನ್ನು ನಗರಕ್ಕೆ ಸ್ವಾಗತಿಸಿದರು. ಅಹಮದಾಬಾದಿನ ಗಾಂಧಿ ಆಶ್ರಮಕ್ಕೆ ಭೇಟಿ ನೀಡಲು ಅವಕಾಶ ಅವರಿಗೆ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯಂತಹ ಸಮಸ್ಯೆಗಳಿಗೆ ತುರ್ತು ಮತ್ತು ಸುಸ್ಥಿರ ಪರಿಹಾರಗಳನ್ನು ಕಂಡುಕೊಳ್ಳುವ ಅಗತ್ಯವನ್ನು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಈ ನಿಟ್ಟಿನಲ್ಲಿ ಗಾಂಧೀಜಿಯವರ ಸರಳ ಜೀವನಶೈಲಿಯನ್ನು ಗಾಂಧಿ ಆಶ್ರಮದಲ್ಲಿ ಪ್ರತ್ಯಕ್ಷವಾಗಿ ನೋಡಬಹುದು. ಜೊತೆಗೆ ಸುಸ್ಥಿರತೆ, ಸ್ವಾವಲಂಬನೆ ಮತ್ತು ಸಮಾನತೆ ಕುರಿತಾಗಿ ಗಾಂಧಿ ಅವರು ಹೊಂದಿದ್ದ ದೂರದೃಷ್ಟಿಯ ಪರಿಕಲ್ಪನೆಗಳಿಗೂ ಆಶ್ರಮದಲ್ಲಿ ನಾವು ಸಾಕ್ಷಿಯಾಬಹುದು ಎಂದು ಪ್ರಧಾನಿ ಹೇಳಿದರು. ಗಣ್ಯರು ಇದರಿಂದ ಪ್ರೇರಣೆ ಪಡೆಯುವರೆಂಬ ವಿಶ್ವಾಸವನ್ನು ಶ್ರೀ ಮೋದಿ ವ್ಯಕ್ತಪಡಿಸಿದರು. ದಂಡಿ ಕುಟೀರ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದ್ದನ್ನು ಉಲ್ಲೇಖಿಸಿದ ಅವರು, ಗಾಂಧೀಜಿಯವರ ಪ್ರಸಿದ್ಧ, ನೂಲುವ ಚಕ್ರ ಅಥವಾ ಚರಕವನ್ನು ಹತ್ತಿರದ ಹಳ್ಳಿಯೊಂದರ ಗಂಗಾಬೆನ್ ಎಂಬ ಮಹಿಳೆ ಕಂಡುಹಿಡಿದಿದ್ದಾರೆ ಎಂದು ಮಾಹಿತಿ ನೀಡಿದರು. ಅಂದಿನಿಂದ ಗಾಂಧೀಜಿಯವರು ಖಾದಿ ಧರಿಸಲು ಪ್ರಾರಂಭಿಸಿದರು, ಇದು ಸ್ವಾವಲಂಬನೆ ಮತ್ತು ಸುಸ್ಥಿರತೆಯ ಸಂಕೇತವಾಯಿತು ಎಂದು ಪ್ರಧಾನಿ ಹೇಳಿದರು.ಎಸ್. ಫಾಂಗ್ನಾನ್ ಕೊನ್ಯಾಕ್ ಅವರು ನಾಗಾಲ್ಯಾಂಡ್ ನ ಮೊದಲ ರಾಜ್ಯಸಭೆ ಸದಸ್ಯೆ ಉಪಾಧ್ಯಕ್ಷ ಸಮಿತಿಗೆ ಸೇರ್ಪಡೆಯಾಗಿರುವುದಕ್ಕೆ ಪ್ರಧಾನ ಮಂತ್ರಿ ಸಂತಸ
July 25th, 08:16 pm
ಕಳೆದ ವಾರ ರಾಜ್ಯಸಭೆ ಸಭಾಪತಿ ಜಗದೀಪ್ ಧಂಖರ್ ಅವರು ಉಪಾಧ್ಯಕ್ಷರ ಸಮಿತಿಗೆ ಎಸ್ ಫಾಂಗ್ನಾನ್ ಕೊನ್ಯಾಕ್ ಅವರನ್ನು ನಾಮನಿರ್ದೇಶನ ಮಾಡಿದರು. ರಾಜ್ಯಸಭೆಗೆ ನಾಮನಿರ್ದೇಶನಗೊಂಡ ನಾಗಾಲ್ಯಾಂಡ್ ಮೂಲದ ಮೊದಲ ಸದಸ್ಯೆ ಎಸ್. ಫಾಂಗ್ನಾನ್ ಕೊನ್ಯಾಕ್ ಅವರಾಗಿದ್ದು ಅವರ ನಾಮನಿರ್ದೇಶನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.