ಕೇರಳದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
February 27th, 12:24 pm
ಕೇರಳದ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಜೀ, ನನ್ನ ಸಹೋದ್ಯೋಗಿ ಮತ್ತು ರಾಜ್ಯ ಸಚಿವ ಶ್ರೀ ವಿ. ಮುರಳೀಧರನ್, ಇಸ್ರೋ ಕುಟುಂಬದ ಎಲ್ಲರೂ ನಮಸ್ಕಾರ!ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಪ್ರಧಾನಿ ಭೇಟಿ
February 27th, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ತಿರುವನಂತಪುರದಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ವಿಎಸ್ ಎಸ್ ಸಿ)ಗೆ ಭೇಟಿ ನೀಡಿದ್ದರು ಮತ್ತು ಸುಮಾರು 1800 ಕೋಟಿ ರೂ. ಮೌಲ್ಯದ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳಲ್ಲಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಎಸ್ ಎಲ್ ವಿ ಇಂಟಿಗ್ರೇಷನ್ ಫೆಸಿಲಿಟಿ (ಪಿಐಎಫ್ ); ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಹೊಸ 'ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಇಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ'; ಮತ್ತು ತಿರುವನಂತಪುರಂನ ವಿಎಸ್ ಎಸ್ ಸಿಯಲ್ಲಿ ‘ಟ್ರೈಸಾನಿಕ್ ವಿಂಡ್ ಟನಲ್’ ಒಳಗೊಂಡಿವೆ. ಶ್ರೀ ನರೇಂದ್ರ ಮೋದಿ ಅವರು ಗಗನಯಾನ ಮಿಷನ್‌ನ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ನಾಲ್ಕು ಗಗನಯಾತ್ರಿಗಳಿಗೆ 'ಗಗನಯಾತ್ರಿ ರೆಕ್ಕೆಗಳನ್ನು' ನೀಡಿದರು. ಆ ಗಗನಯಾತ್ರಿಗಳೆಂದರೆ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 27.08.2023 ರಂದು ಮಾಡಿದ ‘ಮನ್ ಕಿ ಬಾತ್’ – 104 ನೇ ಸಂಚಿಕೆಯ ಕನ್ನಡ ಅವತರಣಿಕೆ
August 27th, 11:30 am
ನನ್ನ ಪ್ರಿಯ ಕುಟುಂಬದ ಸದಸ್ಯರೆ, ನಮಸ್ಕಾರ. ಮನದ ಮಾತಿನ ಆಗಸ್ಟ್ ಸಂಚಿಕೆಗೆ ಮತ್ತೊಮ್ಮೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಶ್ರಾವಣ ಮಾಸದಲ್ಲಿ ಹಿಂದೆಂದೂ ಎರಡು ಬಾರಿ ‘ಮನದ ಮಾತು’ ಕಾರ್ಯಕ್ರಮ ನಡೆದಿದ್ದು ನನಗೆ ನೆನಪಿಲ್ಲ, ಆದರೆ, ಈ ಬಾರಿ ಅದು ಸಾಧ್ಯವಾಗಿದೆ. ಶ್ರಾವಣ ಎಂದರೆ ಮಹಾಶಿವನ ಮಾಸ, ಸಂಭ್ರಮಾಚರಣೆ ಮತ್ತು ಸಂತೋಷದ ತಿಂಗಳಿದು. ಚಂದ್ರಯಾನದ ಯಶಸ್ಸು ಈ ಸಂಭ್ರಮದ ವಾತಾವರಣಕ್ಕೆ ಮತ್ತಷ್ಟು ಕಳೆ ತಂದಿದೆ. ಚಂದ್ರಯಾನ ಚಂದ್ರನನ್ನು ತಲುಪಿ ಮೂರು ದಿನಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಈ ಯಶಸ್ಸು ಎಷ್ಟು ಮಹತ್ತರವಾದದ್ದು ಎಂದರೆ ಅದರ ಬಗ್ಗೆ ಎಷ್ಟು ಚರ್ಚೆ ಮಾಡಿದರೂ ಕಡಿಮೆಯೇ ಅನ್ನಿಸುತ್ತದೆ. ಇಂದು ನಿಮ್ಮೊಂದಿಗೆ ಮಾತನಾಡುವಾಗ ಹಳೆಯ ನನ್ನ ಕವಿತೆಯ ಕೆಲವು ಸಾಲುಗಳು ನೆನಪಿಗೆ ಬರುತ್ತಿವೆ.ವಿಜ್ಞಾನ ಮತ್ತು ತಂತ್ರಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಪ್ರಮುಖ ಸಾಧನೆಗೈದ ಮಹಿಳೆಯರ ಹೆಸರಿನಲ್ಲಿ ಸರಕಾರದಿಂದ 11 ಪೀಠಗಳ ಘೋಷಣೆ
February 29th, 06:10 pm
ರಾಷ್ಟ್ರೀಯ ವಿಜ್ಞಾನ ದಿನವಾದ ಇಂದು ಸರಕಾರವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ 11 ಮಂದಿ ಭಾರತೀಯ ಮಹಿಳಾ ವಿಜ್ಞಾನಿಗಳ ಹೆಸರಿನಲ್ಲಿ 11 ಪೀಠಗಳನ್ನು ಘೋಷಿಸಿದೆ. ವಿವಿಧ ಕ್ಷೇತ್ರಗಳ ಯುವ ಮಹಿಳಾ ಸಂಶೋಧಕರಿಗೆ ಮನ್ನಣೆ ನೀಡಲು ಮತ್ತು ಮಹಿಳೆಯರನ್ನು ಸಶಕ್ತೀಕರಣ ಮಾಡಲು , ಅವರಿಗೆ ಪ್ರೋತ್ಸಾಹ ನೀಡಲು ಮತ್ತು ಉತ್ತೇಜನ ನೀಡಲು ಸರಕಾರ ಈ ಕ್ರಮ ಕೈಗೊಂಡಿದೆ.