3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮ್ಮೇಳನ-2024 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 04th, 07:45 pm

ಜಗತ್ತಿನ 2 ಪ್ರಮುಖ ಪ್ರದೇಶಗಳು ಯುದ್ಧದ ಸ್ಥಿತಿಯಲ್ಲಿ ಇರುವ ಸಮಯದಲ್ಲೇ ಈ ಸಮ್ಮೇಳನ ಆಯೋಜಿಸಲಾಗಿದೆ. ಈ ಪ್ರದೇಶಗಳು ಜಾಗತಿಕ ಆರ್ಥಿಕತೆಗೆ ನಿರ್ಣಾಯಕವಾಗಿವೆ, ವಿಶೇಷವಾಗಿ ಇಂಧನ ಭದ್ರತೆಯ ವಿಷಯದಲ್ಲಿ. ಇಂತಹ ಮಹತ್ವದ ಜಾಗತಿಕ ಅನಿಶ್ಚಿಯದ ನಡುವೆ, ನಾವು ‘ಭಾರತದ ಯುಗ’ವನ್ನು ಚರ್ಚಿಸಲು ಇಲ್ಲಿ ಸೇರಿದ್ದೇವೆ. ಇಂದು ಭಾರತದಲ್ಲಿರುವ ನಂಬಿಕೆ ಅನನ್ಯವಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಭಾರತದ ಆತ್ಮವಿಶ್ವಾಸವು ಅಸಾಧಾರಣವಾಗಿದೆ ಎಂಬುದನ್ನು ಸಹ ಇದು ತೋರಿಸುತ್ತದೆ.

ನವದೆಹಲಿಯಲ್ಲಿ 3ನೇ ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

October 04th, 07:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಕೌಟಿಲ್ಯ ಅರ್ಥಶಾಸ್ತ್ರ ಸಮಾವೇಶ(ಸಮ್ಮೇಳನ) ಉದ್ದೇಶಿಸಿ ಭಾಷಣ ಮಾಡಿದರು. ಹಣಕಾಸು ಸಚಿವಾಲಯದ ಸಹಭಾಗಿತ್ವದಲ್ಲಿ “ದಿ ಇನ್‌ಸ್ಟಿಟ್ಯೂಟ್ ಆಫ್ ಎಕನಾಮಿಕ್ ಗ್ರೋಥ್” ಆಯೋಜಿಸಿರುವ ಕೌಟಿಲ್ಯ ಆರ್ಥಶಾಸ್ತ್ರ(ಆರ್ಥಿಕ) ಸಮ್ಮೇಳನವು ಹಸಿರು ಪರಿವರ್ತನೆ ಯೋಜನೆಗಳಿಗೆ ಹಣಕಾಸು ಒದಗಿಸುವುದು, ಭೂ-ಆರ್ಥಿಕ ಬೇರ್ಪಡಿಕೆ(ವಿಭಾಗೀಕರಣ) ಮತ್ತು ಬೆಳವಣಿಗೆಯ ಪರಿಣಾಮಗಳು, ಹೊಂದಾಣಿಕೆ ಕಾಪಾಡುವ ನೀತಿ ಕ್ರಮದ ತತ್ವಗಳು ಮತ್ತು ಇತರೆ ವಸ್ತು ವಿಷಯಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.

ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಪಾಲುದಾರಿಕೆ

September 09th, 09:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಗೌರವಾನ್ವಿತ ಶ್ರೀ ಜೋ ಬೈಡನ್ ಅವರು 2023 ರ ಸೆಪ್ಟೆಂಬರ್ 9 ರಂದು ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಹೊರತಾಗಿ ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಕುರಿತ ವಿಶೇಷ ಕಾರ್ಯಕ್ರಮದ ಸಹ ಅಧ್ಯಕ್ಷತೆ ವಹಿಸಿದ್ದರು.

ಜಾಗತಿಕ ಮೂಲಸೌಕರ್ಯ ಹೂಡಿಕೆಯ ಪಾಲುದಾರಿಕೆ (PGII) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಕುರಿತ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಗಳು

September 09th, 09:27 pm

ಈ ವಿಶೇಷ ಕಾರ್ಯಕ್ರಮಕ್ಕಾಗಿ ನಾನು ನಿಮ್ಮೆಲ್ಲರಿಗೂ ಆತ್ಮೀಯ ಮತ್ತು ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. ನನ್ನ ಸ್ನೇಹಿತ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗೆ ಈ ಕಾರ್ಯಕ್ರಮದ ಸಹ-ಅಧ್ಯಕ್ಷರಾಗಲು ನಾನು ಸಂತಸಪಡುತ್ತೇನೆ. ಇಂದು, ನಾವೆಲ್ಲರೂ ಮಹತ್ವದ ಮತ್ತು ಐತಿಹಾಸಿಕ ಒಪ್ಪಂದವನ್ನು ಅಂಗೀಕರಿಸಿರುವುದನ್ನು ನೋಡಿದ್ದೇವೆ. ಮುಂಬರುವ ಸಮಯದಲ್ಲಿ, ಇದು ಭಾರತ, ಪಶ್ಚಿಮ ಏಷ್ಯಾ ಮತ್ತು ಯುರೋಪ್ ನಡುವೆ ಆರ್ಥಿಕ ಏಕೀಕರಣದ ಪರಿಣಾಮಕಾರಿ ಮಾಧ್ಯಮವಾಗಲಿದೆ.

NDA today stands for N-New India, D-Developed Nation and A-Aspiration of people and regions: PM Modi

July 18th, 08:31 pm

PM Modi during his address at the ‘NDA Leaders Meet’ recalled the role of Atal ji, Advani ji and the various other prominent leaders in shaping the NDA Alliance and providing it the necessary direction and guidance. PM Modi also acknowledged and congratulated all on the completion of 25 years since the establishment of NDA in 1998.

ಎನ್‌ಡಿಎ ನಾಯಕರ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

July 18th, 08:30 pm

‘ಎನ್‌ಡಿಎ ನಾಯಕರ ಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಎನ್‌ಡಿಎ ಮೈತ್ರಿಕೂಟವನ್ನು ರೂಪಿಸುವಲ್ಲಿ ಮತ್ತು ಅದಕ್ಕೆ ಅಗತ್ಯವಾದ ನಿರ್ದೇಶನ ಮತ್ತು ಮಾರ್ಗದರ್ಶನ ನೀಡುವಲ್ಲಿ ಅಟಲ್ ಜಿ, ಅಡ್ವಾಣಿ ಜಿ ಮತ್ತು ಇತರ ಪ್ರಮುಖ ನಾಯಕರ ಪಾತ್ರವನ್ನು ಸ್ಮರಿಸಿದರು. 1998ರಲ್ಲಿ ಎನ್‌ಡಿಎ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

May 23rd, 08:54 pm

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೇ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಘನತೆವೆತ್ತ ಸ್ಕಾಟ್ ಮಾರಿಸನ್ ಅವರೇ, ನ್ಯೂ ಸೌತ್ ವೇಲ್ಸ್ ಪ್ರಧಾನಿ ಕ್ರಿಸ್ ಮಿನ್ಸ್ ಅವರೇ, ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರೇ, ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರೇ, ಇಂಧನ ಸಚಿವರಾದ ಕ್ರಿಸ್ ಬೋವೆನ್ ಅವರೇ, ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರೇ, ಸಹಾಯಕ ವಿದೇಶಾಂಗ ಸಚಿವ ಟಿಮ್ ವ್ಯಾಟ್ಸ್ ಅವರೇ, ಇಲ್ಲಿ ಹಾಜರಿರುವ ನ್ಯೂ ಸೌತ್ ವೇಲ್ಸ್ ಸಂಪುಟದ ಗೌರವಾನ್ವಿತ ಸದಸ್ಯರೇ, ಪಾರ್ರಮಟ್ಟದ ಸಂಸತ್ ಸದಸ್ಯ ಡಾ. ಆಂಡ್ರ್ಯೂ ಚಾರ್ಲ್ಟನ್ ಅವರೇ, ಇಲ್ಲಿ ಉಪಸ್ಥಿತರಿರುವ ಆಸ್ಟ್ರೇಲಿಯಾದ ಸಂಸತ್ ಸದಸ್ಯರು, ಮೇಯರ್‌ಗಳು, ಉಪ ಮೇಯರ್‌ಗಳು, ಕೌನ್ಸಿಲರ್‌ಗಳೇ ಮತ್ತು ಇಂದು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಆಸ್ಟ್ರೇಲಿಯಾ ನಿವಾಸಿ ಭಾರತೀಯ ವಲಸಿಗರೇ! ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು!

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿಯವರ ಸಂವಾದ

May 23rd, 01:30 pm

ಸಿಡ್ನಿಯ ಕುಡೋಸ್ ಬ್ಯಾಂಕ್ ಅರೆನಾದಲ್ಲಿ 2023ರ ಮೇ 23ರಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರೊಟ್ಟಿಗೆ ಪ್ರಧಾನಿ ಮೋದಿಯವರು ಭಾರತೀಯ ಸಮುದಾಯದ ಬೃಹತ್ ಸಭಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಮತ್ತು ಸಂವಾದ ನಡೆಸಿದರು.

ಭಾರತವು ವಾಣಿಜ್ಯ ಮತ್ತು ಲಾಜಿಸ್ಟಿಕ್ಸ್ ನ ಕೇಂದ್ರವಾಗುವ ಹಾದಿಯಲ್ಲಿದೆ: ಪ್ರಧಾನಿ

May 01st, 03:43 pm

ವಿಶ್ವಬ್ಯಾಂಕ್ ನ ಎಲ್ಪಿಐ 2023 ವರದಿಯ ಪ್ರಕಾರ, ಭಾರತೀಯ ಬಂದರುಗಳ ದಕ್ಷತೆ ಮತ್ತು ಉತ್ಪಾದಕತೆಯ ಹೆಚ್ಚಳದ ಬಗ್ಗೆ ಬಂದರು ಹಡಗು ಮತ್ತು ಜಲಮಾರ್ಗಗಳ ಸಚಿವಾಲಯವು ಟ್ವೀಟ್ ಮಾಡಿದೆ.

ವಿಶ್ವಬ್ಯಾಂಕ್ ನ ಲಾಜಿಸ್ಟಿಕ್ ಪರ್ಫಾರ್ಮೆನ್ಸ್ ಇಂಡೆಕ್ಸ್ ನಲ್ಲಿ ಭಾರತ 16 ಸ್ಥಾನ ಮೇಲೇರಿದ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ

April 22nd, 07:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವಬ್ಯಾಂಕ್ ನ ಲಾಜಿಸ್ಟಿಕ್ ಪರ್ಫಾರ್ಮೆನ್ಸ್ ಇಂಡೆಕ್ಸ್ ನಲ್ಲಿ ಭಾರತ 16 ಸ್ಥಾನ ಜಿಗಿದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಹವಾಮಾನ ಬದಲಾವಣೆಯನ್ನು ನಿಭಾಯಿಸುವ ಕುರಿತು ವಿಶ್ವಬ್ಯಾಂಕ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ವೀಡಿಯೊ ಸಂದೇಶದ ಪಠ್ಯ

April 15th, 09:45 am

ವಿಶ್ವಬ್ಯಾಂಕ್ ನ ಅಧ್ಯಕ್ಷರು, ಗೌರವಾನ್ವಿತ ಮೊರಾಕೊದ ಇಂಧನ ಪರಿವರ್ತನೆ ಮತ್ತು ಸುಸ್ಥಿರ ಅಭಿವೃದ್ಧಿ ಸಚಿವೆ, ನನ್ನ ಸಂಪುಟ ಸಹೋದ್ಯೋಗಿ ನಿರ್ಮಲಾ ಸೀತಾರಾಮನ್ ಜೀ, ಲಾರ್ಡ್ ನಿಕೋಲಸ್ ಸ್ಟರ್ನ್, ಪ್ರೊಫೆಸರ್ ಸನ್ ಸ್ಟೈನ್ ಮತ್ತು ಇತರ ಗೌರವಾನ್ವಿತ ಅತಿಥಿಗಳೇ.

ವೈಯಕ್ತಿಕವಾಗಿ (ವ್ಯಕ್ತಿಗತವಾಗಿ) ವರ್ತನೆಯ ಬದಲಾವಣೆಯು ಹವಾಮಾನ ಬದಲಾವಣೆಯನ್ನು ಹೇಗೆ ನಿಭಾಯಿಸಬಹುದು ವಿಷಯ ಕುರಿತ ವಿಶ್ವಬ್ಯಾಂಕ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 15th, 09:33 am

‘ಮೇಕಿಂಗ್ ಇಟ್ ಪರ್ಸನಲ್: ಹೌ ಬಿಹೇವಿಯರಲ್ ಚೇಂಜ್ ಕ್ಯಾನ್ ಟ್ಯಾಕಲ್ ಕ್ಲೈಮೇಟ್ ಚೇಂಜ್’ ಶೀರ್ಷಿಕೆಯ ವಿಶ್ವ ಬ್ಯಾಂಕ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ನಲ್ಲಿ ಭಾಷಣ ಮಾಡಿದರು.

ನಾಗರೀಕ ಸೇವೆಗಳ ದಿನದ ಅಂಗವಾಗಿ ಪ್ರಧಾನ ಮಂತ್ರಿಗಳ ಸಾರ್ವಜನಿಕ ಆಡಳಿತ ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

April 21st, 10:56 pm

ನನ್ನ ಸಂಪುಟ ಸಹೋದ್ಯೋಗಿಗಳಾದ ಡಾ. ಜಿತೇಂದ್ರ ಸಿಂಗ್, ಪಿ.ಕೆ ಮಿಶ್ರಾ ಜಿ, ರಾಜೀವ್ ಗೌಬಾ ಜಿ, ಶ್ರೀ ವಿ.ಶ್ರೀನಿವಾಸನ್ ಜಿ ಮತ್ತು ದೇಶಾದ್ಯಂತ ವರ್ಚುವಲ್ ಮಾದರಿಯಲ್ಲಿ ಈ ಕಾರ್ಯಕ್ರಮಕ್ಕೆ ಪಾಲ್ಗೊಂಡಿರುವ ಎಲ್ಲಾ ನಾಗರಿಕ ಸೇವೆಗಳ ಸದಸ್ಯರು ಮತ್ತು ಇಲ್ಲಿ ಉಪಸ್ಥಿತರಿರುವ ಇತರೆ ಸಹೋದ್ಯೋಗಿಗಳು, ಮಹಿಳೆಯರು ಮತ್ತು ಮಹನೀಯರೇ! ಎಲ್ಲಾ ಕರ್ಮಯೋಗಿಗಳಿಗೆ ನಾಗರಿಕ ಸೇವಾ ದಿನದ ಶುಭಾಶಯಗಳು. ಇಂದು ಈ ಪ್ರಶಸ್ತಿಗಳನ್ನು ಪಡೆದ ಗೆಳೆಯರಿಗೆ ಹಾಗೂ ಅವರ ಇಡೀ ತಂಡಕ್ಕೆ ಮತ್ತು ಅವರು ಸೇರಿರುವ ರಾಜ್ಯಗಳಿಗೆ ಅಭಿನಂದನೆಗಳು.

ನಾಗರಿಕ ಸೇವಾ ದಿನದಂದು ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಗಳ ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಿ

April 21st, 10:31 am

ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆ ತೋರಿದವರಿಗೆ ಪ್ರಧಾನಮಂತ್ರಿಗಳ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕೇಂದ್ರ ಸಚಿವ ಶ್ರೀ ಜಿತೇಂದ್ರ ಸಿಂಗ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ಕೆ. ಮಿಶ್ರಾ, ಸಂಪುಟ ಕಾರ್ಯದರ್ಶಿ ಶ್ರೀ ರಾಜೀವ್ ಗೌಬಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಗಾಂಧಿನಗರದಲ್ಲಿರುವ ಶಾಲೆಗಳ ವಿದ್ಯಾ ಸಮೀಕ್ಷಾ ಕೇಂದ್ರಕ್ಕೆ ಪ್ರಧಾನಿ ಭೇಟಿ

April 18th, 08:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿರುವ ಶಾಲೆಗಳ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ವಿದ್ಯಾ ಸಮೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು. ಪ್ರಧಾನ ಮಂತ್ರಿಯವರಿಗೆ ಮೇಲ್ವಿಚಾರಣಾ ಚಟುವಟಿಕೆಗಳನ್ನು ತೋರಿಸಲಾಯಿತು, ವಿಡಿಯೋ ಗೋಡೆಗಳು ಮತ್ತು ಕೇಂದ್ರದ ವಿವಿಧ ಅಂಶಗಳ ನೇರ ಪ್ರದರ್ಶನವನ್ನು ಮಾಡಲಾಯಿತು. ಪ್ರಧಾನಿಯವರಿಗೆ ಧ್ವನಿ-ದೃಶ್ಯ ಪ್ರಸ್ತುತಿ ಮೂಲಕ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಏಪ್ರಿಲ್‌ 18ರಿಂದ 20 ರವರೆಗೆ ಪ್ರಧಾನಮಂತ್ರಿ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ

April 16th, 02:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಏಪ್ರಿಲ್‌ 18 ರಿಂದ 20 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಏಪ್ರಿಲ್‌ 18 ರಂದು ಸುಮಾರು ಸಂಜೆ 6 ಗಂಟೆಗೆ ಪ್ರಧಾನಮಂತ್ರಿ ಅವರು ಗಾಂಧಿನಗರದಲ್ಲಿರುವ ಶಾಲೆಗಳ ಕಮಾಂಡ್‌ ಮತ್ತು ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್‌ 19 ರಂದು, ಬೆಳಗ್ಗೆ 9:40 ರ ಸುಮಾರಿಗೆ, ಅವರು ಬನಸ್ಕಾಂತದ ದಿಯೋದರ್‌ನಲ್ಲಿರುವ ಬನಾಸ್‌ ಡೈರಿ ಸಂಕುಲ್‌ನಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

"ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗವರ್ಧಿಸಲು" 808 ದಶಲಕ್ಷ ಅಮೆರಿಕನ್ ಡಾಲರ್ ಗೆ ಸಂಪುಟದ ಅನುಮೋದನೆ.

March 30th, 02:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 808 ದಶಲಕ್ಷ ಅಮೆರಿಕನ್ ಡಾಲರ್ ಅಥವಾ 6,062.45 ಕೋಟಿ ರೂ.ಗಳ ವಿಶ್ವಬ್ಯಾಂಕ್ ನೆರವಿನ ಎಂಎಸ್ಎಂಇಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ (ರಾಂಪ್) ಕಾರ್ಯಕ್ರಮಕ್ಕೆ ತನ್ನ ಅನುಮೋದನೆ ನೀಡಿದೆ. ರ‍್ಯಾoಪ್ ಒಂದು ಹೊಸ ಯೋಜನೆಯಾಗಿದ್ದು, 2022-23ರ ಹಣಕಾಸು ವರ್ಷದಲ್ಲಿ ಪ್ರಾರಂಭವಾಗಲಿದೆ.

Cabinet approves Rs. 5718 crore World Bank aided project STARS

October 14th, 06:34 pm

Union Cabinet chaired by the PM Modi has approved implementation of the STARS project with a total project cost of Rs 5718 crore with the financial support of World Bank amounting to US $500 million. It also approved setting up and support to the National Assessment Centre, PARAKH.

There has never been a better time to invest in India: PM Modi

July 22nd, 10:33 pm

Prime Minister Narendra Modi delivered the keynote address at the India Ideas Summit hosted by the US-India Business Council. Prime Minister underlined that there are extensive opportunities to invest in a variety of sectors in India. He talked about the historic reforms recently undertaken in sectors like agriculture, healthcare, energy, defence, etc.

PM Modi addresses India Ideas Summit via video conferencing

July 22nd, 09:26 pm

Prime Minister Narendra Modi delivered the keynote address at the India Ideas Summit hosted by the US-India Business Council. Prime Minister underlined that there are extensive opportunities to invest in a variety of sectors in India. He talked about the historic reforms recently undertaken in sectors like agriculture, healthcare, energy, defence, etc.