ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಸಂಸ್ಕೃತ ದಿನದ ಅಂಗವಾಗಿ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ
August 19th, 02:46 pm
ಇಂದು ವಿಶ್ವ ಸಂಸ್ಕೃತ ದಿನದ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಸಂಸ್ಕೃತ ಭಾಷೆಯ ಪ್ರಚಾರಕ್ಕೆ ಶ್ರಮಿಸುತ್ತಿರುವವರನ್ನು ಅವರು ಅಭಿನಂದಿಸಿದ್ದಾರೆ.ವಿಶ್ವ ಸಂಸ್ಕೃತ ದಿನದ ಶುಭಾಶಯ ಕೋರಿದ ಪ್ರಧಾನಮಂತ್ರಿ
August 31st, 10:06 am
ವಿಶ್ವ ಸಂಸ್ಕೃತ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ಕೋರಿದ್ದಾರೆ. ಸಂಸ್ಕೃತದ ಬಗ್ಗೆ ಒಲವು ಹೊಂದಿರುವ ಎಲ್ಲರನ್ನೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ವಿಶ್ವ ಸಂಸ್ಕೃತ ದಿನವನ್ನು ಆಚರಿಸಲು, ಸಂಸ್ಕೃತದಲ್ಲಿ ಒಂದು ವಾಕ್ಯವನ್ನು ಹಂಚಿಕೊಳ್ಳಲು ಪ್ರಧಾನಮಂತ್ರಿ ಅವರು ಎಲ್ಲರನ್ನೂ ಕೋರಿದ್ದಾರೆ.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 27.08.2023 ರಂದು ಮಾಡಿದ ‘ಮನ್ ಕಿ ಬಾತ್’ – 104 ನೇ ಸಂಚಿಕೆಯ ಕನ್ನಡ ಅವತರಣಿಕೆ
August 27th, 11:30 am
ನನ್ನ ಪ್ರಿಯ ಕುಟುಂಬದ ಸದಸ್ಯರೆ, ನಮಸ್ಕಾರ. ಮನದ ಮಾತಿನ ಆಗಸ್ಟ್ ಸಂಚಿಕೆಗೆ ಮತ್ತೊಮ್ಮೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಶ್ರಾವಣ ಮಾಸದಲ್ಲಿ ಹಿಂದೆಂದೂ ಎರಡು ಬಾರಿ ‘ಮನದ ಮಾತು’ ಕಾರ್ಯಕ್ರಮ ನಡೆದಿದ್ದು ನನಗೆ ನೆನಪಿಲ್ಲ, ಆದರೆ, ಈ ಬಾರಿ ಅದು ಸಾಧ್ಯವಾಗಿದೆ. ಶ್ರಾವಣ ಎಂದರೆ ಮಹಾಶಿವನ ಮಾಸ, ಸಂಭ್ರಮಾಚರಣೆ ಮತ್ತು ಸಂತೋಷದ ತಿಂಗಳಿದು. ಚಂದ್ರಯಾನದ ಯಶಸ್ಸು ಈ ಸಂಭ್ರಮದ ವಾತಾವರಣಕ್ಕೆ ಮತ್ತಷ್ಟು ಕಳೆ ತಂದಿದೆ. ಚಂದ್ರಯಾನ ಚಂದ್ರನನ್ನು ತಲುಪಿ ಮೂರು ದಿನಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಈ ಯಶಸ್ಸು ಎಷ್ಟು ಮಹತ್ತರವಾದದ್ದು ಎಂದರೆ ಅದರ ಬಗ್ಗೆ ಎಷ್ಟು ಚರ್ಚೆ ಮಾಡಿದರೂ ಕಡಿಮೆಯೇ ಅನ್ನಿಸುತ್ತದೆ. ಇಂದು ನಿಮ್ಮೊಂದಿಗೆ ಮಾತನಾಡುವಾಗ ಹಳೆಯ ನನ್ನ ಕವಿತೆಯ ಕೆಲವು ಸಾಲುಗಳು ನೆನಪಿಗೆ ಬರುತ್ತಿವೆ.ವಿಶ್ವ ಸಂಸ್ಕೃತ ದಿನದಂದು ಶುಭಾಶಯ ಕೋರಿದ ಪ್ರಧಾನ ಮಂತ್ರಿ
August 12th, 08:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಸಂಸ್ಕೃತ ದಿನದಂದು ಜನತೆಗೆ ಶುಭಾಶಯ ಕೋರಿದ್ದಾರೆ. ಸಂಸ್ಕೃತವನ್ನು ಜನಪ್ರಿಯಗೊಳಿಸಲು ಶ್ರಮಿಸುತ್ತಿರುವವರ ಪ್ರಯತ್ನಗಳನ್ನು ಅವರು ಕೊಂಡಾಡಿದ್ದಾರೆ. ಸಂಸ್ಕೃತದ ಮಹತ್ವ ಮತ್ತು ಸೌಂದರ್ಯದ ಬಗ್ಗೆ ತಾವು ವಿವರಿಸಿದ ಮನ್ ಕಿ ಬಾತ್ ನ ಎರಡು ಉದಾಹರಣೆಗಳನ್ನು ಅವರು ಹಂಚಿಕೊಂಡಿದ್ದಾರೆ. ಸಂಸ್ಕೃತದ ಬಗ್ಗೆ ಯುವಕರಲ್ಲಿ ಹೆಚ್ಚುತ್ತಿರುವ ಜನಪ್ರಿಯತೆಯನ್ನು ಅವರು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.ವಿಶ್ವ ಸಂಸ್ಕೃತ ದಿನದ ಅಂಗವಾಗಿ ದೇಶಕ್ಕೆ ಶುಭಾಶಯ ಕೋರಿದ ಪ್ರಧಾನಿ
August 22nd, 11:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಸಂಸ್ಕೃತ ದಿನದ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ಜನತೆಯೊಂದಿಗೆ ಸಂಸ್ಕೃತ ಭಾಷೆಯಲ್ಲಿ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ.