ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ‌ ಪದಕ ಗೆದ್ದಿರುವ ಅಮನ್ ಸೆಹ್ರಾವತ್ ಅವರಗೆ ಪ್ರಧಾನಮಂತ್ರಿ ಅಭಿನಂದನೆ

August 09th, 11:43 pm

ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪುರುಷರ ಫ್ರೀ ಸ್ಟೈಲ್ 57 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ಕುಸ್ತಿ ಪಟು ಅಮನ್ ಸೆಹ್ರಾವತ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ವಿನೇಶ್, ನೀವು ಚಾಂಪಿಯನ್‌ ಗಳಲ್ಲಿ ಚಾಂಪಿಯನ್ : ಪ್ರಧಾನಮಂತ್ರಿ

August 07th, 01:16 pm

ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಅಂತಿಮ ಹಣಾಹಣಿಗೆ ಮುನ್ನ ಅನರ್ಹತೆಗೊಂಡಿರುವುದರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರದ ದುಃಖವನ್ನು ಅವರಿಗೆ ತಿಳಿಸಿದ್ದಾರೆ.

ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

June 30th, 11:00 am

'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.

​​​​​​​23 ವರ್ಷದೊಳಗಿನವರ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನವನ್ನು ಶ್ಲಾಘಿಸಿದ ಪ್ರಧಾನಿ

November 02nd, 10:49 pm

ಇತ್ತೀಚೆಗೆ ನಡೆದ 23 ವರ್ಷದೊಳಗಿನವರ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ತಂಡವನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹುರಿದುಂಬಿಸಿದರು.

ಮುಂಬೈನಲ್ಲಿ ನಡೆದ 141ನೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

October 14th, 10:34 pm

ಐಒಸಿ ಅಧ್ಯಕ್ಷ ಶ್ರೀ ಥಾಮಸ್ ಬಾಕ್, ಐಒಸಿಯ ಗೌರವಾನ್ವಿತ ಸದಸ್ಯರು, ಎಲ್ಲಾ ಅಂತಾರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಭಾರತದಲ್ಲಿನ ರಾಷ್ಟ್ರೀಯ ಒಕ್ಕೂಟಗಳ ಪ್ರತಿನಿಧಿಗಳು. ಮಹಿಳೆಯರೇ ಮತ್ತು ಮಹನೀಯರೇ! ಈ ವಿಶೇಷ ಸಂದರ್ಭದಲ್ಲಿ ನಾನು ನಿಮ್ಮೆಲ್ಲರಿಗೂ 1.4 ಶತಕೋಟಿ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ. ಭಾರತದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ 141 ನೇ ಅಧಿವೇಶನವು ನಿಜವಾಗಿಯೂ ಮಹತ್ವದ್ದಾಗಿದೆ. 40 ವರ್ಷಗಳ ನಂತರ ಭಾರತದಲ್ಲಿ ಐಒಸಿ ಅಧಿವೇಶನ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ.

ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಅಧಿವೇಶನʼ ಉದ್ಘಾಟಿಸಿದ ಪ್ರಧಾನಿ

October 14th, 06:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನಲ್ಲಿ 141ನೇ ʻಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿʼ(ಐಒಸಿ) ಅಧಿವೇಶನವನ್ನು ಉದ್ಘಾಟಿಸಿದರು. ಕ್ರೀಡೆಗೆ ಸಂಬಂಧಿಸಿದ ವಿವಿಧ ಮಧ್ಯಸ್ಥಗಾರರ ನಡುವೆ ಸಂವಾದ ಮತ್ತು ಜ್ಞಾನ ಹಂಚಿಕೆಗೆ ಅವಕಾಶವನ್ನು ಒದಗಿಸುವುದು ಈ ಅಧಿವೇಶನದ ಉದ್ದೇಶವಾಗಿದೆ.

ಏಷ್ಯನ್ ಗೇಮ್ಸ್ ನ ಪುರುಷರ ಕುಸ್ತಿ 86 ಕೆಜಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ದೀಪಕ್ ಪುನಿಯಾ ಅವರನ್ನು ಪ್ರಧಾನಿ ಅಭಿನಂದಿಸಿದರು

October 07th, 06:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಕುಸ್ತಿ 86 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ದೀಪಕ್ ಪೂನಿಯಾ ಅವರನ್ನು ಅಭಿನಂದಿಸಿದ್ದಾರೆ.

76 ಕೆಜಿ ಫ್ರೀಸ್ಟೈಲ್ ಮಹಿಳೆಯರ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಕಿರಣ್ ಬಿಷ್ಣೋಯ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

October 06th, 06:59 pm

ಏಷ್ಯನ್ ಕ್ರೀಡಾಕೂಟದಲ್ಲಿ 76 ಕೆಜಿ ಫ್ರೀಸ್ಟೈಲ್ ಮಹಿಳೆಯರ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಕಿರಣ್ ಬಿಷ್ಣೋಯ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

​​​​​​​ಮಹಿಳೆಯರ ಕುಸ್ತಿ 62 ಕೆ.ಜಿ. ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸೋನಂ ಮಲ್ಲಿಕ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ

October 06th, 06:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಕ್ರೀಡಾಕೂಟದ ಮಹಿಳೆಯರ ಕುಸ್ತಿ 62 ಕೆ.ಜಿ. ಫ್ರೀಸ್ಟೈಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸೋನಂ ಮಲ್ಲಿಕ್ ಗ ಅವರನ್ನು ಅಭಿನಂದನೆ ಸಲ್ಲಿಸಿದ್ದಾರೆ.

​​​​​​​ಫ್ರೀಸ್ಟೈಲ್‌ 53 ಕೆಜಿ ಮಹಿಳಾ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಆಂಟಿಮ್‌ ಪಂಗಲ್‌ ಅವರನ್ನು ಅಭಿನಂದಿಸಿದ ಪ್ರಧಾನ ಮಂತ್ರಿಗಳು

October 05th, 10:47 pm

ಏಷ್ಯನ್‌ ಕ್ರೀಡಾಕೂಟದಲ್ಲಿ ಫ್ರೀಸ್ಟೈಲ್‌ 53 ಕೆಜಿ ಮಹಿಳಾ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಆಂಟಿಮ್‌ ಪಂಗಲ್‌ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಅಂಡರ್ 20 ವಿಶ್ವ ಚಾಂಪಿಯನ್ ಶಿಪ್ ನಲ್ಲಿ 16 ಪದಕಗಳನ್ನು ಗೆದ್ದ ಭಾರತೀಯ ಕುಸ್ತಿ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ

August 22nd, 10:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಂಡರ್ 20 ವರ್ಲ್ಡ್ ಚಾಂಪಿಯನ್ ಶಿಪ್ ನಲ್ಲಿ 16 ಪದಕಗಳನ್ನು (ಪುರುಷರ ಮತ್ತು ಮಹಿಳೆಯರ ಫ್ರೀಸ್ಟೈಲ್ ನಲ್ಲಿ ತಲಾ 7 ಮತ್ತು ಗ್ರೀಕೋ-ರೋಮನ್ ನಲ್ಲಿ 2) ಗೆದ್ದ ಭಾರತೀಯ ಕುಸ್ತಿ ತಂಡವನ್ನು ಅಭಿನಂದಿಸಿದ್ದಾರೆ.

ಮಣಿಪುರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 04th, 09:45 am

ಕಾರ್ಯಕ್ರಮದಲ್ಲಿ ಹಾಜರಿರುವ ಮಣಿಪುರ ರಾಜ್ಯಪಾಲ ಗಣೇಶನ್ ಜೀ, ಮುಖ್ಯಮಂತ್ರಿ ಶ್ರೀ ಎನ್. ಬಿರೇನ್ ಸಿಂಗ್ ಜೀ, ಉಪ ಮುಖ್ಯಮಂತ್ರಿ ವೈ. ಜೋಯ್ ಕುಮಾರ್ ಸಿಂಗ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಭುಪೇಂದ್ರ ಯಾದವ್ ಜೀ, ಮತ್ತು ರಾಜಕುಮಾರ್ ರಂಜನ್ ಸಿಂಗ್ ಜೀ, ಮಣಿಪುರ ಸರಕಾರದಲ್ಲಿ ಸಚಿವರಾಗಿರುವ ಬಿಶ್ವಜಿತ್ ಸಿಂಗ್ ಜೀ, ಲೋಸೀ ದಿಕೋ ಜೀ, ಲೆಟ್ಪಾವೋ ಹಾವೋಕಿಪ್ ಜೀ, ಅವಾಂಗ್ಬೋ ನೆವ್ಮಾಯಿ ಜೀ, ಎಸ್. ರಾಜೆನ್ ಸಿಂಗ್ ಜೀ, ವುಂಗ್ಜಗೀನ್ ವಾಲ್ಟೇ ಜೀ, ಸತ್ಯಬ್ರತ್ ಸಿಂಗ್ ಜೀ, ಮತ್ತು ಒ.ಲುಕಿಯೋ ಸಿಂಗ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿಗಳೇ, ಶಾಸಕರೇ, ಜನ ಪ್ರತಿನಿಧಿಗಳೇ, ಮತ್ತು ಮಣಿಪುರದ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ! ಖುರುಂಜರಿ

ಮಣಿಪುರದ ಇಂಫಾಲದಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಿದ ಪ್ರಧಾನಮಂತ್ರಿ

January 04th, 09:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಮಣಿಪುರದ ಇಂಫಾಲದಲ್ಲಿ ಸುಮಾರು 1850 ಕೋಟಿ ರೂ. ಮೌಲ್ಯದ 13 ಹೊಸ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು 2950 ಕೋಟಿ ರೂ. ಮೊತ್ತದ 9 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ರಸ್ತೆ ಮೂಲಸೌಕರ್ಯ, ಕುಡಿಯುವ ನೀರು ಪೂರೈಕೆ, ಆರೋಗ್ಯ, ನಗರಾಭಿವೃದ್ಧಿ, ವಸತಿ, ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ವಲಯಗಳಿಗೆ ಸಂಬಂಧಿಸಿದವುಗಳಾಗಿವೆ.

ಬೆಲ್‌ಗ್ರೇಡ್‌ನಲ್ಲಿ ನಡೆದ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಶಿವಾನಿ, ಅಂಜು, ದಿವ್ಯಾ, ರಾಧಿಕ ಮತ್ತು ನಿಶಾ ಅವರನ್ನು ಅಭಿನಂದಿಸಿದ ಪ್ರಧಾನಿ

November 10th, 02:50 pm

ಬೆಲ್‌ಗ್ರೇಡ್‌ನಲ್ಲಿ ನಡೆದ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಶಿವಾನಿ, ಅಂಜು, ದಿವ್ಯಾ, ರಾಧಿಕ ಮತ್ತು ನಿಶಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ 2021ನಲ್ಲಿ ಪದಕ ಗೆದ್ದ ಅನ್ಶು ಮಲ್ಲಿಕ್ ಮತ್ತು ಸರಿತಾ ಮೋರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

October 10th, 08:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಕುಸ್ತಿ ಚಾಂಪಿಯನ್ ಶಿಪ್ 2021ನಲ್ಲಿ ಬೆಳ್ಳಿ ಪದಕ ಗೆದ್ದ ಅನ್ಶು ಮಲ್ಲಿಕ್ ಮತ್ತು ಕಂಚಿನ ಪದಕ ಜಯಿಸಿರುವ ಸರಿತಾ ಮೋರ್ ಅವರನ್ನು ಅಭಿನಂದಿಸಿದ್ದಾರೆ.

ಹೊಸ ಭಾರತವು ತನ್ನ ಕ್ರೀಡಾಪಟುಗಳ ಮೇಲೆ ಪದಕಗಳಿಗಾಗಿ ಒತ್ತಡ ಹೇರುವುದಿಲ್ಲ ಆದರೆ ಅವರು ತಮ್ಮ ಅತ್ಯುತ್ತಮವಾದದ್ದನ್ನು ನೀಡುವ ನಿರೀಕ್ಷೆಯಲ್ಲಿದ್ದಾರೆ: ಪ್ರಧಾನಿ ಮೋದಿ

August 17th, 11:01 am

ಟೋಕಿಯೊ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ಪ್ಯಾರಾ-ಅಥ್ಲೀಟ್ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ಯಾರಾ ಅಥ್ಲೀಟ್‌ಗಳ ಕುಟುಂಬಗಳು, ಪೋಷಕರು ಮತ್ತು ತರಬೇತುದಾರರೊಂದಿಗೆ ಸಂವಾದ ನಡೆಸಿದರು. ಪ್ಯಾರಾ ಅಥ್ಲೀಟ್ ಗಳ ಆತ್ಮವಿಶ್ವಾಸ ಮತ್ತು ಇಚ್ಛಾ ಶಕ್ತಿಗಾಗಿ ಪ್ರಧಾನಮಂತ್ರಿ ಅವರನ್ನು ಶ್ಲಾಘಿಸಿದರು. ಅವರು ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕೆ ಇದುವರೆಗಿನ ಅತಿದೊಡ್ಡ ತಂಡಕ್ಕಾಗಿ ಅವರ ಶ್ರಮವನ್ನು ಸಲ್ಲಿಸಿದರು.

ಟೋಕಿಯೋ 2020 ಪ್ಯಾರಾಲಿಂಪಿಕ್ಸ್ ನಲ್ಲಿ ಭಾಗಿಯಾಗುತ್ತಿರುವ ಭಾರತೀಯ ಪ್ಯಾರಾ – ಅಥ್ಲೀಟ್ ತಂಡದೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

August 17th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟೋಕಿಯೋ 2020 ಪ್ಯಾರಾಲಿಂಪಿಕ್ಸ್ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತೀಯ ಪ್ಯಾರಾ ಅಥ್ಲೀಟ್ ತಂಡ ಹಾಗೂ ಅವರ ಕುಟುಂಬ, ಪಾಲಕರು ಮತ್ತು ತರಬೇತುದಾರರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡೆ; ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಶೇಷ ಚಿತ್ರಗಳು! ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ ಒಲಿಂಪಿಯನ್‌ಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ!

August 16th, 10:56 am

ಕೆಂಪು ಕೋಟೆಯ ಕೋಟೆಯಿಂದ ಅವರನ್ನು ಹೊಗಳಿದ ಮತ್ತು ಇಡೀ ರಾಷ್ಟ್ರವು ಅವರನ್ನು ಶ್ಲಾಘಿಸುವಂತೆ ಮಾಡಿದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಮತ್ತು ಭಾರತವನ್ನು ಹೆಮ್ಮೆಪಡುವ ಭಾರತೀಯ ಕ್ರೀಡಾಪಟುಗಳನ್ನು ಭೇಟಿಯಾದರು. ಈ ಘಟನೆಯ ಕೆಲವು ವಿಶೇಷ ಚಿತ್ರಗಳು ಇಲ್ಲಿವೆ!

ಟೋಕಿಯೋ ಒಲಿಂಪಿಕ್ಸ್ 2020 ರ ಕುಸ್ತಿಯಲ್ಲಿ ಕಂಚು ಗೆದ್ದ ಭಜರಂಗ್ ಪುನಿಯಾ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ.

August 07th, 05:49 pm

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಜರಂಗ್ ಪುನಿಯಾ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಕೂದಲೆಳೆಯ ಅಂತರದಲ್ಲಿ ದೀಪಕ್ ಪುನಿಯ ಕಂಚು ಕಳೆದುಕೊಂಡರೂ, ಅವರು ನಮ್ಮ ಹೃದಯಗಳನ್ನು ಗೆದ್ದಿದ್ದಾರೆ: ಪ್ರಧಾನಮಂತ್ರಿ

August 05th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೀಪಕ್ ಪುನಿಯ ಕೂದಲೆಳೆಯ ಅಂತರದಲ್ಲಿ ಕಂಚಿನ ಪದಕದಿಂದ ವಂಚಿತರಾದರೂ, ಅವರು ನಮ್ಮ ಹೃದಯಗಳನ್ನು ಗೆದ್ದಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ಅವರು ಪ್ರತಿಭೆ ಮತ್ತು ಬಲದ ಶಕ್ರಿ ಕೇಂದ್ರ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.