ನವದೆಹಲಿಯ ನಡೆದ ʻಭಾರತ್ ಟೆಕ್ಸ್-2024ʼ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣದ ಕನ್ನಡ ಪಠ್ಯಾಂತರ
February 26th, 11:10 am
ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಾದ ಪಿಯೂಷ್ ಗೋಯಲ್ ಅವರೇ ಮತ್ತು ದರ್ಶನ ಜರ್ದೋಶ್ ಅವರೇ, ವಿವಿಧ ದೇಶಗಳ ರಾಯಭಾರಿಗಳೇ, ಹಿರಿಯ ರಾಜತಾಂತ್ರಿಕರೇ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳೇ, ಫ್ಯಾಷನ್ ಮತ್ತು ಜವಳಿ ಪ್ರಪಂಚದ ಎಲ್ಲಾ ಸಹವರ್ತಿಗಳೇ, ಯುವ ಉದ್ಯಮಿಗಳೇ, ವಿದ್ಯಾರ್ಥಿಗಳೇ, ನಮ್ಮ ನೇಕಾರರು ಮತ್ತು ಕುಶಲಕರ್ಮಿಗಳೇ ಹಾಗೂ ಮಹಿಳೆಯರೇ ಮತ್ತು ಮಹನೀಯರೇ! ಭಾರತ್ ಮಂಟಪದಲ್ಲಿ ʻಭಾರತ್ ಟೆಕ್ಸ್ʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು! ಇಂದಿನ ಕಾರ್ಯಕ್ರಮವು ಖುದ್ದು ಬಹಳ ವಿಶೇಷವಾಗಿದೆ. ಇದು ಏಕೆ ವಿಶೇಷವೆಂದರೆ ಇದು ಭಾರತದ ಎರಡು ಅತಿದೊಡ್ಡ ಪ್ರದರ್ಶನ ಕೇಂದ್ರಗಳಾದ ʻಭಾರತ್ ಮಂಟಪʼ ಮತ್ತು ʻಯಶೋಭೂಮಿʼಯಲ್ಲಿ ಏಕಕಾಲದಲ್ಲಿ ನಡೆಯುತ್ತಿದೆ. ಇಂದು, 3,000ಕ್ಕೂ ಹೆಚ್ಚು ಪ್ರದರ್ಶಕರು... 100 ದೇಶಗಳಿಂದ ಸುಮಾರು 3,000 ಖರೀದಿದಾರರು... 40,000ಕ್ಕೂ ಹೆಚ್ಚು ವ್ಯಾಪಾರ ಸಂದರ್ಶಕರು... ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇವೆ. ಈ ಕಾರ್ಯಕ್ರಮವು ಜವಳಿ ಪರಿಸರ ವ್ಯವಸ್ಥೆಯ ಎಲ್ಲಾ ಪಾಲುದಾರರನ್ನು ಮತ್ತು ಇಡೀ ಮೌಲ್ಯ ಸರಪಳಿಯನ್ನು ಒಗ್ಗೂಡಿಸಲು ವೇದಿಕೆಯನ್ನು ಒದಗಿಸುತ್ತಿದೆ.ನವದೆಹಲಿಯಲ್ಲಿ ಭಾರತ್ ಟೆಕ್ಸ್ 2024 ಉದ್ಘಾಟಿಸಿದ ಪ್ರಧಾನಿ
February 26th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ದೇಶದಲ್ಲಿ ಆಯೋಜಿಸಿರುವ ಅತಿದೊಡ್ಡ ಜಾಗತಿಕ ಜವಳಿ ಮೇಳ ಎಂದು ಹೆಸರಾಗಿರುವ ಭಾರತ್ ಟೆಕ್ಸ್ 2024 ಅನ್ನು ಉದ್ಘಾಟಿಸಿದರು. ಮೇಳದಲ್ಲಿ ಪ್ರದರ್ಶಿಸಿರುವ ಮಳಿಗೆಗಳಲ್ಲಿ ಓಡಾಡಿದ ಪ್ರಧಾನಿ ಅವರು ಅಲ್ಲಿನ ವಸ್ತುಗಳನ್ನು ವೀಕ್ಷಿಸಿದರು.Armed forces have taken India’s pride to new heights: PM Modi in Lepcha
November 12th, 03:00 pm
PM Modi addressed brave jawans at Lepcha, Himachal Pradesh on the occasion of Diwali. Addressing the jawans he said, Country is grateful and indebted to you for this. That is why one ‘Diya’ is lit for your safety in every household”, he said. “The place where jawans are posted is not less than any temple for me. Wherever you are, my festival is there. This is going on for perhaps 30-35 years”, he added.ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ವೀರ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಿದ ಪ್ರಧಾನಮಂತ್ರಿ
November 12th, 02:31 pm
ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೀಪಾವಳಿ ಹಬ್ಬ ಮತ್ತು ಯೋಧರ ಧೈರ್ಯದ ಪ್ರತಿಧ್ವನಿಯ ಸಮ್ಮಿಲನ ದೇಶದ ಪ್ರತಿಯೊಬ್ಬ ಪ್ರಜೆಗೂ ಜ್ಞಾನೋದಯದ ಕ್ಷಣವಾಗಿದೆ ಎಂದು ಅವರು ಹೇಳಿದರು. ಈಗ ಮೊದಲ ಗ್ರಾಮವೆಂದು ಪರಿಗಣಿಸಲ್ಪಟ್ಟಿರುವ ದೇಶದ ಕೊನೆಯ ಗ್ರಾಮದಿಂದ ಭಾರತದ ಗಡಿ ಪ್ರದೇಶಗಳ ಯೋಧರೊಂದಿಗೆ ಅವರು ದೀಪಾವಳಿಯ ಶುಭಾಶಯಗಳನ್ನು ತಿಳಿಸಿದರು.ನವದೆಹಲಿಯಲ್ಲಿ ನಡೆದ 9ನೇ ʻಜಿ-20 ಸಂಸದೀಯ ಸಭಾಪತಿಗಳ ಶೃಂಗಸಭೆʼಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
October 13th, 11:22 am
140 ಕೋಟಿ ಭಾರತೀಯರ ಪರವಾಗಿ, ʻಜಿ-20 ಸಂಸದೀಯ ಸಭಾಪತಿಗಳ ಶೃಂಗಸಭೆʼಯಲ್ಲಿ ಭಾಗಿಯಾಗಿರುವ ನಿಮ್ಮೆಲ್ಲರಿಗೂ ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. ಈ ಶೃಂಗಸಭೆಯು ಒಂದು ರೀತಿಯಲ್ಲಿ 'ಮಹಾಕುಂಭ' ಅಥವಾ ಪ್ರಪಂಚದಾದ್ಯಂತದ ವಿವಿಧ ಸಂಸದೀಯ ಕಾರ್ಯವಿಧಾನಗಳ ಬೃಹತ್ ಸಮಾಗಮವಾಗಿದೆ. ನಿಮ್ಮಂತಹ ಎಲ್ಲಾ ಪ್ರತಿನಿಧಿಗಳು ವಿವಿಧ ಸಂಸತ್ತುಗಳ ಕಾರ್ಯಶೈಲಿಯಲ್ಲಿ ಅನುಭವ ಹೊಂದಿದ್ದಾರೆ. ಅಂತಹ ಶ್ರೀಮಂತ ಪ್ರಜಾಪ್ರಭುತ್ವದ ಅನುಭವಗಳನ್ನು ಹೊಂದಿರುವ ನಿಮ್ಮ ಭಾರತ ಭೇಟಿ ನಮ್ಮೆಲ್ಲರಿಗೂ ಬಹಳ ಸಂತೋಷದಾಯಕವಾಗಿದೆ.9ನೇ ಜಿ-20 ಸಂಸದೀಯ ಅಧ್ಯಕ್ಷರ ಶೃಂಗಸಭೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
October 13th, 11:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ 9ನೇ ಜಿ-20 ಸಂಸದೀಯ ಅಧ್ಯಕ್ಷರ ಶೃಂಗಸಭೆಯನ್ನು (ಪಿ20) ಉದ್ಘಾಟಿಸಿದರು. 'ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯಕ್ಕಾಗಿ ಸಂಸತ್ತು' ಎಂಬ ವಿಷಯದೊಂದಿಗೆ ಭಾರತದ ಜಿ20 ಅಧ್ಯಕ್ಷತೆಯ ವಿಶಾಲ ಚೌಕಟ್ಟಿನ ಅಡಿಯಲ್ಲಿ ಶೃಂಗಸಭೆಯನ್ನು ಭಾರತದ ಸಂಸತ್ತು ಆಯೋಜಿಸಿದೆ.ಅಕ್ಟೋಬರ್ 13 ರಂದು 9 ನೇ ಜಿ 20 ಸಂಸದೀಯ ಭಾಷಣಕಾರರ ಶೃಂಗಸಭೆ (ಪಿ 20) ಉದ್ಘಾಟಿಸಲಿರುವ ಪ್ರಧಾನಿ
October 12th, 11:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023 ರ ಅಕ್ಟೋಬರ್ 13 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಯಶೋಭೂಮಿಯಲ್ಲಿ 9 ನೇ ಜಿ 20 ಸಂಸದೀಯ ಭಾಷಣಕಾರರ ಶೃಂಗಸಭೆಯನ್ನು (ಪಿ 20) ಉದ್ಘಾಟಿಸಲಿದ್ದಾರೆ.ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
September 26th, 04:12 pm
ದೇಶದ ವಿವಿಧ ವಿಶ್ವವಿದ್ಯಾಲಯಗಳೇ, ಉಪಕುಲಪತಿಗಳೇ, ಪ್ರಾಧ್ಯಾಪಕರೇ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೇ ಮತ್ತು ನನ್ನ ಯುವ ಸ್ನೇಹಿತರೇ! ʻಭಾರತ್ ಮಂಟಪಂʼನಲ್ಲಿ ಇದ್ದುದ್ದಕ್ಕಿಂತ ಹೆಚ್ಚಿನ ಜನರು ಇಂದು ಆನ್ಲೈನ್ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು 'ಜಿ -20 ಯೂನಿವರ್ಸಿಟಿ ಕನೆಕ್ಟ್' ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇನೆ ಮತ್ತು ಎಲ್ಲಾ ಯುವಕರನ್ನು ಅಭಿನಂದಿಸುತ್ತೇನೆ.ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 26th, 04:11 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿಂದು ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ಅಂತಿಮ(ಯುನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಜಿ-20 ವಿಶ್ವವಿದ್ಯಾಲಯ ಸಂಪರ್ಕ ಉಪಕ್ರಮವನ್ನು ಭಾರತದ ಯುವಜನರಲ್ಲಿ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆಯ ಬಗ್ಗೆ ತಿಳುವಳಿಕೆ ಮೂಡಿಸಲು ಮತ್ತು ವಿವಿಧ ಜಿ-20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಅವರು ಈ ಸಂದರ್ಭದಲ್ಲಿ 4 ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಅವುಗಳೆಂದರೆ ದಿ ಗ್ರ್ಯಾಂಡ್ ಸಕ್ಸಸ್ ಆಫ್ ಜಿ-20 ಭಾರತ್ ಪ್ರೆಸಿಡೆನ್ಸಿ: ದೂರದೃಷ್ಟಿಯ ನಾಯಕತ್ವ, ಅಂತರ್ಗತ ಕಾರ್ಯವಿಧಾನ; ಭಾರತದ ಜಿ-20 ಪ್ರೆಸಿಡೆನ್ಸಿ: ವಸುಧೈವ ಕುಟುಂಬಕಂ; ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಾರ್ಯಕ್ರಮದ ಸಂಕಲನ; ಮತ್ತು ಜಿ-20ರಲ್ಲಿ ಭಾರತೀಯ ಸಂಸ್ಕೃತಿಯ ಪ್ರದರ್ಶನ.ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
September 18th, 11:52 am
ನಮ್ಮ ದೇಶದ 75 ವರ್ಷಗಳ ಸಂಸದೀಯ ಪಯಣ ಮತ್ತು ಈ ಹಿನ್ನೆಲೆಯಲ್ಲಿ ಹೊಸ ಸದನವನ್ನು ಪ್ರವೇಶಿಸುವ ಮೊದಲು ಮತ್ತೊಮ್ಮೆ ಆ ಸ್ಪೂರ್ತಿದಾಯಕ ಕ್ಷಣಗಳನ್ನು ನೆನಪಿಸಿಕೊಳ್ಳಲು, ನಾವು ಒಟ್ಟಾಗಿ, ಈ ಐತಿಹಾಸಿಕ ಕಟ್ಟಡಕ್ಕೆ ವಿದಾಯ ಹೇಳುತ್ತಿದ್ದೇವೆ. ಸ್ವಾತಂತ್ರ್ಯದ ಮೊದಲು, ಈ ಸದನವನ್ನು ಇಂಪೀರಿಯಲ್ ಲೆಜಿಸ್ಲೇಟಿವ್ ಕೌನ್ಸಿಲ್ ಎಂದು ಕರೆಯಲಾಗುತ್ತಿತ್ತು. ಸ್ವಾತಂತ್ರ್ಯದ ನಂತರ ಇದನ್ನು ಸಂಸತ್ ಭವನ ಎಂದು ಕರೆಯಲಾಯಿತು. ಈ ಕಟ್ಟಡವನ್ನು ಕಟ್ಟುವ ನಿರ್ಧಾರವನ್ನು ವಿದೇಶಿ ಸಂಸದರು ಮಾಡಿರುವುದು ನಿಜ, ಆದರೆ ಈ ಕಟ್ಟಡದ ನಿರ್ಮಾಣಕ್ಕೆ ನನ್ನ ಸಹವರ್ತಿಗಳ ಬೆವರು ಸುರಿಸಲ್ಪಟ್ಟಿದೆ ಎಂದು ಹೆಮ್ಮೆಯಿಂದ ಹೇಳಲು ನಾವು ಎಂದಿಗೂ ಹಿಂಜರಿಯಲು ಸಾಧ್ಯವಿಲ್ಲ, ಇದರಲ್ಲಿ ನನ್ನ ಸಹೋದ್ಯೋಗಿಗಳ ಶ್ರಮವಿದೆ ಮತ್ತು ಹಣವನ್ನು ಕೂಡಾ ನನ್ನ ದೇಶದ ಜನರು ನೀಡಿದ್ದಾರೆ.ಸಂಸತ್ತಿನ ವಿಶೇಷ ಅಧಿವೇಶನ ಉದ್ದೇಶಿಸಿ ಲೋಕಸಭೆಯಲ್ಲಿ ಪ್ರಧಾನಿ ಭಾಷಣ
September 18th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿಂದು ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದರು, ಈ ವಿಶೇಷ ಅಧಿವೇಶನ 2023ರ ಸೆಪ್ಟಂಬರ್ 18ರಿಂದ 22ರವರೆಗೆ ನಡೆಯಲಿದೆ.ಸಂಸತ್ತಿನ ವಿಶೇಷ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿಯವರ ಭಾಷಣದ ಅನುವಾದ
September 18th, 10:15 am
ಚಂದ್ರಯಾನ-3 ಯಶಸ್ಸು ನಮ್ಮ ತ್ರಿವರ್ಣ ಧ್ವಜವನ್ನು ಮುಗಿಲೆತ್ತರಕ್ಕೆ ಹಾರಿಸಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ ಮತ್ತು ತಿರಂಗಾ ಪಾಯಿಂಟ್ ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತದೆ. ಈ ರೀತಿಯ ಸಾಧನೆಗಳು ಜಗತ್ತಿನಲ್ಲಿ ಸಂಭವಿಸಿದಾಗ, ಅವುಗಳನ್ನು ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನದ ಜೊತೆಯಲ್ಲಿ ತಾಳೆ ಹಾಕಿ ನೋಡಲಾಗುತ್ತದೆ. ಮತ್ತು ಈ ಸಾಮರ್ಥ್ಯವನ್ನು ಜಗತ್ತಿಗೆ ಪ್ರದರ್ಶಿಸಿದಾಗ, ಅದು ಭಾರತದ ಮನೆ ಬಾಗಿಲಿಗೆ ಹಲವಾರು ಸಾಧ್ಯತೆಗಳು ಮತ್ತು ಅವಕಾಶಗಳನ್ನು ತರುತ್ತದೆ. G20ನ ಅಭೂತಪೂರ್ವ ಯಶಸ್ಸು, 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರಪಂಚದಾದ್ಯಂತದ ನಾಯಕರನ್ನು ಸ್ವಾಗತಿಸುವುದು, ಬುದ್ದಿಮತ್ತೆ ಸೆಷನ್ ಗಳು, ನಿಜವಾದ ಉತ್ಸಾಹದಲ್ಲಿ ಒಕ್ಕೂಟ ರಚನೆಯ ಜೀವಂತ ಅನುಭವ, G20 ಸ್ವತಃ ನಮ್ಮ ವೈವಿಧ್ಯತೆ ಮತ್ತು ಅನನ್ಯತೆಯ ಆಚರಣೆಯಾಗಿದೆ. ಜಿ20 ರೊಳಗೆ ಜಾಗತಿಕ ದಕ್ಷಿಣದ ಧ್ವನಿಯಾಗಿ ಭಾರತವು ಸದಾ ಹೆಮ್ಮೆಪಡುತ್ತದೆ. ಆಫ್ರಿಕನ್ ಯೂನಿಯನ್ ಗೆ ಶಾಶ್ವತ ಸದಸ್ಯತ್ವ ಮತ್ತು ಸರ್ವಾನುಮತದ G20 ಘೋಷಣೆಯಂತಹ ಬೆಳವಣಿಗೆಗಳು ಭಾರತಕ್ಕೆ ಉಜ್ವಲ ಭವಿಷ್ಯದ ಅವಕಾಶ ಒದಗಿಸುತ್ತದೆ.ರಾಷ್ಟ್ರಕ್ಕೆ ಯಶೋಭೂಮಿ ಸಮರ್ಪಣೆ ಮತ್ತು ವಿಶ್ವಕರ್ಮ ಯೋಜನೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 17th, 06:08 pm
ಕೇಂದ್ರ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ದೇಶದ ಮೂಲೆ ಮೂಲೆಗಳಿಂದ ಆಗಮಿಸಿ, ಈ ಭವ್ಯ ಕಟ್ಟಡದಲ್ಲಿ ಸೇರಿರುವ ಆತ್ಮೀಯ ಸಹೋದರ ಸಹೋದರಿಯರೆ, 70ಕ್ಕಿಂತ ಹೆಚ್ಚಿನ ನಗರಗಳಿಂದ ಈ ಕಾರ್ಯಕ್ರಮಕ್ಕೆ ಸೇರಿರುವ ನನ್ನ ಸಹನಾಗರಿಕರೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಕುಟುಂಬ ಸದಸ್ಯರೆ!ದ್ವಾರಕಾ ಸೆಕ್ಟರ್ 21ರಿಂದ ಯಶೋಭೂಮಿ ದ್ವಾರಕಾ ಸೆಕ್ಟರ್ 25 ರವರೆಗೆ ಏರ್ ಪೋರ್ಟ್ ಮೆಟ್ರೊ ಎಕ್ಸ್ ಪ್ರೆಸ್ ಮಾರ್ಗದ ವಿಸ್ತರಣೆ ಉದ್ಘಾಟಿಸಿದ ಪ್ರಧಾನಮಂತ್ರಿ
September 17th, 05:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಯಶೋಭೂಮಿ ದ್ವಾರಕ ಸೆಕ್ಟರ್ 25ನಲ್ಲಿ ದ್ವಾರಕ ಸೆಕ್ಟರ್ 21 ರಿಂದ ಯಶೋಭೂಮಿ ದ್ವಾರಕ ಸೆಕ್ಟರ್ 25ವರೆಗಿನ ಏರ್ ಪೋರ್ಟ್ ಮೆಟ್ರೋ ಎಕ್ಸ್ ಪ್ರೆಸ್ ರೈಲು ಮಾರ್ಗದ ವಿಸ್ತರಣಾ ಯೋಜನೆಯನ್ನು ಉದ್ಘಾಟಿಸಿದರು. ಈ ಹೊಸ ಮೆಟ್ರೋ ನಿಲ್ದಾಣ ಮೂರು ಸಬ್ ವೇಗಳನ್ನು ಹೊಂದಿದೆ – 735 ಅಡಿ ಎತ್ತರದ ಸಬ್ ವೇ ನಿಲ್ದಾಣ ಮತ್ತು ವಸ್ತುಪ್ರದರ್ಶನ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುತ್ತದೆ, ಸಮಾವೇಶ ಕೇಂದ್ರ ಮತ್ತು ಕೇಂದ್ರೀಯ ಪ್ರದೇಶ ಒಳಗೊಂಡಿದೆ. ಮತ್ತೊಂದು ದ್ವಾರಕ ಎಕ್ಸ್ ಪ್ರೆಸ್ ವೇನ ಪ್ರವೇಶ ಮತ್ತು ನಿರ್ಗಮನವನ್ನು ಸಂಪರ್ಕಿಸುತ್ತದೆ. ಮೂರನೆಯದು ಮೆಟ್ರೋ ನಿಲ್ದಾಣದ ಮೇಲು ಸೇತುವೆಯಿಂದ ಭವಿಷ್ಯದ ಪ್ರದರ್ಶನ ಸಭಾಂಗಣ ಯಶೋಭೂಮಿಯನ್ನು ಸಂಪರ್ಕಿಸುತ್ತದೆ.ನವದೆಹಲಿಯಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ - ‘ಯಶೋಭೂಮಿ’ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
September 17th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ದ್ವಾರಕಾದಲ್ಲಿ ಭಾರತ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರ (ಇಂಡಿಯಾ ಇಂಟರ್ನ್ಯಾಶನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್) - ‘ಯಶೋಭೂಮಿ’ಯ ಮೊದಲನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. 'ಯಶೋಭೂಮಿ' ಭವ್ಯವಾದ ಸಮಾವೇಶ ಕೇಂದ್ರ, ಬಹು ಪ್ರದರ್ಶನ ಸಭಾಂಗಣಗಳು ಮತ್ತು ಇತರ ಸೌಲಭ್ಯಗಳನ್ನು ಹೊಂದಿದೆ. ಪ್ರಧಾನಿಯವರು ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಿಗಳಿಗಾಗಿ ‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ’ಗೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ಪಿಎಂ ವಿಶ್ವಕರ್ಮ ಲೋಗೋ, ಘೋಷವಾಕ್ಯ ಮತ್ತು ಪೋರ್ಟಲ್ ಅನ್ನು ಸಹ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ನಿರ್ದಿಷ್ಟವಾಗಿ ರೂಪಿಸಿದ ಸ್ಟಾಂಪ್ ಶೀಟ್, ಟೂಲ್ ಕಿಟ್ ಇ-ಪುಸ್ತಕ ಮತ್ತು ವಿಡಿಯೋವನ್ನು ಬಿಡುಗಡೆ ಮಾಡಿದರು. ಪ್ರಧಾನಮಂತ್ರಿಯವರು 18 ಫಲಾನುಭವಿಗಳಿಗೆ ವಿಶ್ವಕರ್ಮ ಪ್ರಮಾಣಪತ್ರಗಳನ್ನು ವಿತರಿಸಿದರು.ಸೆಪ್ಟೆಂಬರ್ 17 ರಂದು ಪ್ರಧಾನಮಂತ್ರಿಯವರಿಂದ ರಾಷ್ಟ್ರಕ್ಕೆ ನವದೆಹಲಿಯ ದ್ವಾರಕಾದಲ್ಲಿ 'ಯಶೋಭೂಮಿ' ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ ನ 1 ನೇ ಹಂತದ ಸಮರ್ಪಣೆ
September 15th, 04:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 17ನೇ ಸೆಪ್ಟೆಂಬರ್ 2023 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ದ್ವಾರಕಾದಲ್ಲಿ ‘ಯಶೋಭೂಮಿʼ ಎಂದು ಹೆಸರಿಡಲ್ಪಟ್ಟ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ (ಐಐಸಿಸಿ) 1 ನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ದ್ವಾರಕಾ ಸೆಕ್ಟರ್ 21 ರಿಂದ ಹೊಸ ಮೆಟ್ರೋ ನಿಲ್ದಾಣ 'ಯಶೋಭೂಮಿ ದ್ವಾರಕಾ ಸೆಕ್ಟರ್ 25' ವರೆಗೆ ದೆಹಲಿ ಏರ್ಪೋರ್ಟ್ ಮೆಟ್ರೋ ಎಕ್ಸ್ಪ್ರೆಸ್ ಲೈನ್ನ ವಿಸ್ತರಣೆಯನ್ನು ಸಹ ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ.