ಭುವನೇಶ್ವರದಲ್ಲಿ ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
November 29th, 09:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಲೋಕಸೇವಾ ಭವನದ ರಾಜ್ಯ ಕನ್ವೆನ್ಷನ್ ಸೆಂಟರ್ ನಲ್ಲಿ ಅಖಿಲ ಭಾರತ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ 2024ರ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ಡೊಮಿನಿಕಾ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 21st, 09:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೊಮಿನಿಕಾದ ಪ್ರಧಾನಮಂತ್ರಿ ಶ್ರೀ ರೂಸ್‌ವೆಲ್ಟ್ ಸ್ಕೆರಿಟ್ ಅವರನ್ನು ಗಯಾನಾದ ಜಾರ್ಜ್‌ಟೌನ್‌ನಲ್ಲಿ 2 ನೇ ಭಾರತ-ಕಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.ಸೇಂಟ್ ಲೂಸಿಯಾ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 21st, 10:13 am
ಎರಡನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 20 ರಂದು ಸೇಂಟ್ ಲೂಸಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ. ಫಿಲಿಪ್ ಜೆ. ಪಿಯರ್ ಅವರನ್ನು ಭೇಟಿ ಮಾಡಿ ಫಲಪ್ರದ ಮಾತುಕತೆ ನಡೆಸಿದರು.Be it COVID, disasters, or development, India has stood by you as a reliable partner: PM in Guyana
November 21st, 02:15 am
PM Modi and Grenada PM Dickon Mitchell co-chaired the 2nd India-CARICOM Summit in Georgetown. PM Modi expressed solidarity with CARICOM nations for Hurricane Beryl's impact and reaffirmed India's commitment as a reliable partner, focusing on development cooperation aligned with CARICOM's priorities.ಎರಡನೇ ಭಾರತ-ಕಾರಿಕಾಮ್ ಶೃಂಗಸಭೆ
November 21st, 02:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಪ್ರಸ್ತುತ ಕಾರಿಕಾಮ್ ಒಕ್ಕೂಟದ ಅಧ್ಯಕ್ಷರಾದ ಗ್ರೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕಾನ್ ಮಿಚೆಲ್ ಅವರು 20 ನವೆಂಬರ್ 2024 ರಂದು ಜಾರ್ಜ್‌ಟೌನ್ ನಲ್ಲಿ ನಡೆದ 2ನೇ ಭಾರತ-ಕಾರಿಕಾಮ್ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಶೃಂಗಸಭೆಯನ್ನು ಸೌಜನ್ಯದಿಂದ ಆಯೋಜಿಸಿದ್ದಕ್ಕಾಗಿ ಗಯಾನಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇರ್ಫಾನ್ ಅಲಿ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.ನೈಜೀರಿಯಾದಲ್ಲಿ ನಡೆದ ಭಾರತೀಯ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 17th, 07:20 pm
ಇಂದು, ನೀವು ನಿಜವಾಗಿಯೂ ಅಬುಜಾದಲ್ಲಿ ಅದ್ಭುತ ವಾತಾವರಣವನ್ನು ಸೃಷ್ಟಿಸಿದ್ದೀರಿ. ನಿನ್ನೆ ಸಂಜೆಯಿಂದ ಎಲ್ಲವನ್ನೂ ನೋಡಿದಾಗ, ನಾನು ಅಬುಜಾದಲ್ಲಿಲ್ಲ ಆದರೆ ಭಾರತದ ನಗರದಲ್ಲಿ ಇದ್ದೇನೆ ಎಂದು ಅನಿಸುತ್ತದೆ. ನಿಮ್ಮಲ್ಲಿ ಅನೇಕರು ಲಾಗೋಸ್, ಕಾನೊ, ಕಡುನಾ ಮತ್ತು ಪೋರ್ಟ್ ಹಾರ್ಕೋರ್ಟ್ ನಿಂದ ಅಬುಜಾಗೆ ಪ್ರಯಾಣಿಸಿದ್ದೀರಿ, ವಿವಿಧ ಸ್ಥಳಗಳಿಂದ ಬಂದಿದ್ದೀರಿ ಮತ್ತು ನಿಮ್ಮ ಮುಖದ ಮೇಲಿನ ಹೊಳಪು, ನೀವು ಹೊರಸೂಸುವ ಶಕ್ತಿ ಮತ್ತು ಉತ್ಸಾಹವು ಇಲ್ಲಿರಲು ನಿಮ್ಮ ಉತ್ಸುಕತೆಯನ್ನು ಪ್ರತಿಬಿಂಬಿಸುತ್ತದೆ. ನಾನು ಕೂಡ ನಿಮ್ಮನ್ನು ಭೇಟಿಯಾಗುವ ಈ ಅವಕಾಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದೆ. ನಿಮ್ಮ ಪ್ರೀತಿ ಮತ್ತು ವಾತ್ಸಲ್ಯ ನನಗೆ ಅಪಾರ ನಿಧಿಯಾಗಿದೆ. ನಿಮ್ಮ ನಡುವೆ ಇದ್ದು, ನಿಮ್ಮೊಂದಿಗೆ ಸಮಯ ಕಳೆಯುವುದರಿಂದ, ಈ ಕ್ಷಣಗಳು ನನ್ನ ಜೀವಮಾನವಿಡೀ ನೆನಪಿನಲ್ಲಿ ಉಳಿಯುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನೈಜೀರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ
November 17th, 07:15 pm
ಪ್ರಧಾನಮಂತ್ರಿಯಾಗಿ ನೈಜೀರಿಯಾಕ್ಕೆ ಇದು ಅವರ ಮೊದಲ ಭೇಟಿ ಎಂದು ಹೇಳಿದ ಶ್ರೀ ಮೋದಿ, ತಮ್ಮೊಂದಿಗೆ ಕೋಟ್ಯಂತರ ಭಾರತೀಯರ ಶುಭ ಹಾರೈಕೆಗಳನ್ನು ತಂದಿರುವೆನು ಎಂದು ಹೇಳಿದರು. ನೈಜೀರಿಯಾದಲ್ಲಿರುವ ಭಾರತೀಯರ ಪ್ರಗತಿಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಅವರು ಹೇಳಿದರು. ಅಧ್ಯಕ್ಷ ಟಿನುಬು ಮತ್ತು ನೈಜೀರಿಯಾದ ಜನರಿಗೆ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಶ್ರೀ ಮೋದಿ ಅವರು ಎಲ್ಲಾ ವಿನಮ್ರತೆಯೊಂದಿಗೆ ಪ್ರಶಸ್ತಿಯನ್ನು ಕೋಟಿಗಟ್ಟಲೆ ಭಾರತೀಯರಿಗೆ ಅರ್ಪಿಸಿದರು.ಸಿ -295 ವಿಮಾನ ಕಾರ್ಖಾನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 28th, 10:45 am
ಗೌರವಾನ್ವಿತ ಪೆಡ್ರೊ ಸ್ಯಾಂಚೆಜ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ, ಭಾರತದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜೀ, ವಿದೇಶಾಂಗ ಸಚಿವರಾದ ಶ್ರೀ ಎಸ್. ಜೈಶಂಕರ್ ಜೀ, ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಸ್ಪೇನ್ ಮತ್ತು ರಾಜ್ಯ ಸರ್ಕಾರದ ಸಚಿವರು, ಏರ್ ಬಸ್ ಮತ್ತು ಟಾಟಾ ತಂಡಗಳ ಎಲ್ಲಾ ಸದಸ್ಯರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ದೇಶದ ಪ್ರಧಾನಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಗುಜರಾತ್ ನ ವಡೋದರಾದಲ್ಲಿ ಸಿ-295 ವಿಮಾನಗಳನ್ನು ತಯಾರಿಸಲು ಟಾಟಾ ವಿಮಾನ ತಯಾರಿಕಾ ಸಂಕೀರ್ಣವನ್ನು ಜಂಟಿಯಾಗಿ ಉದ್ಘಾಟಿಸಿದರು
October 28th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ಪ್ರಧಾನಮಂತ್ರಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಇಂದು ಗುಜರಾತ್ ನ ವಡೋದರದಲ್ಲಿರುವ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ-295 ವಿಮಾನಗಳನ್ನು ತಯಾರಿಸುವ ಟಾಟಾ ವಿಮಾನ ತಯಾರಿಕಾ ಸಂಕೀರ್ಣ (ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್) ವನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನು ಇಬ್ಬರು ಪ್ರಧಾನಿಗಳೂ ವೀಕ್ಷಿಸಿದರು.ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
October 27th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
August 25th, 11:30 am
ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮ
June 21st, 02:26 pm
ಪ್ರಧಾನಮಂತ್ರಿ ಕಾರ್ಯಾಲಯ (ಪಿಎಂಒ)ದಲ್ಲಿ ಇಂದು ಬೆಳಗ್ಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಪಿಎಂಒದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ, ಹಿರಿಯ ಅಧಿಕಾರಿಗಳು ಮತ್ತು ಇತರರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಶ್ರೀನಗರದ ದಾಲ್ ಸರೋವರವು ಈ ವರ್ಷದ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಅದ್ಭುತವಾದ ವೇದಿಕೆಯನ್ನು ಸೃಷ್ಟಿಸಿದೆ: ಪ್ರಧಾನಮಂತ್ರಿ
June 21st, 02:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಈ ವರ್ಷ ಆಚರಿಸಲಾದ ಯೋಗ ದಿನದ ಕಾರ್ಯಕ್ರಮದ ಇಣುಕುನೋಟಗಳನ್ನು Xನಲ್ಲಿ ಹಂಚಿಕೊಂಡಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯೋಗಾಭ್ಯಾಸ ಮಾಡಿದವರನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 21st, 12:58 pm
ಇಂದು ಇಲ್ಲಿ ನಡೆದ ಈ ಯೋಗಾಭ್ಯಾಸದ ದೃಶ್ಯವು ಇಡೀ ಪ್ರಪಂಚದ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದೆ. ಮಳೆ ಬಾರದೇ ಇದ್ದಿದ್ದರೂ, ಅಥವಾ ಇನ್ನೂ ಅಧಿಕ ಮಳೆ ಬಂದರೂ ಕೂಡಾ, ಏನೂ ವ್ಯತ್ಯಾಸವಾಗದೆ ನೀವೆಲ್ಲ ಪ್ರದರ್ಶನ ನೀಡುತ್ತಿದ್ದೀರಿ, ಆದರೆ ಬಹುಶಃ ಇಷ್ಟು ಗಮನ ಸೆಳೆಯುತ್ತಿರಲಿಲ್ಲವೇನೋ. ಹಾಗೂ ಶ್ರೀನಗರದಲ್ಲಿ ಮಳೆ ಬಂದರೆ ಸಹಜವಾಗಿಯೇ ಚಳಿಯೂ ಹೆಚ್ಚುತ್ತದೆ. ನಾನೇ ಸ್ವೆಟರ್ ಹಾಕಿಕೊಳ್ಳಬೇಕಿತ್ತು. ನೀವು ಇಲ್ಲಿನ ವಿವಿಧ ಪ್ರದೇಶಗಳಿಂದ ಇಲ್ಲಿಗೆ ಬಂದವರು, ನೀವು ಈ ವಾತಾವರಣಕ್ಕೆ ಒಗ್ಗಿಕೊಂಡಿರುವಿರಿ ಮತ್ತು ಇದು ನಿಮಗೆ ಅನಾನುಕೂಲತೆಯ ವಿಷಯವಲ್ಲ.2024 ರ ಅಂತಾರಾಷ್ಟ್ರೀಯ ಯೋಗ ದಿನದಂದು ಜಮ್ಮು ಮತ್ತು ಕಾಶ್ಮೀರಿನ ಶ್ರೀನಗರದ ದಾಲ್ ಸರೋವರದಲ್ಲಿ ಯೋಗ ಸಾಧಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾತನಾಡಿದರು
June 21st, 11:50 am
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಜಮ್ಮು ಮತ್ತು ಕಾಶ್ಮೀರದ ಜನರು ಯೋಗದ ಬಗ್ಗೆ ತೋರಿದ ಉತ್ಸಾಹ ಮತ್ತು ಬದ್ಧತೆಯ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಹೇಳಿದರು. ಮಳೆಯ ಮತ್ತು ತಾಪಮಾನದಲ್ಲಿನ ಕುಸಿತದಿಂದ ಉಂಟಾದ ಪ್ರತಿಕೂಲ ಹವಾಮಾನದ ಪರಿಣಾಮವಾಗಿ ಅಂತರ್‌ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ತಡವಾಗಿದ್ದರೂ ಅದು ಜನರ ಉತ್ಸಾಹವನ್ನು ಕುಗ್ಗಿಸುವಲ್ಲಿ ವಿಫಲವಾಗಿದೆ ಎಂದು ಅವರು ಒತ್ತಿ ಹೇಳಿದರು.ಶ್ರೀನಗರದ ದಾಲ್ ಸರೋವರದಲ್ಲಿ ಉತ್ಸಾಹಿ ಯೋಗ ಪಟುಗಳೊಂದಿಗೆ ಪ್ರಧಾನಮಂತ್ರಿ ಸೆಲ್ಫಿ
June 21st, 11:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ದಾಲ್ ಸರೋವರದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಉತ್ಸಾಹಿ ಯೋಗಪಟುಗಳೊಂದಿಗೆ ಸೆಲ್ಫಿ ಹಂಚಿಕೊಂಡರು.ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
June 21st, 06:31 am
ಅಂತಾರಾಷ್ಟ್ರೀಯ ಯೋಗ ದಿನದಂದು ಯೋಗ ಮತ್ತು ಧ್ಯಾನದ ತಪೋಭೂಮಿ ಕಾಶ್ಮೀರದಲ್ಲಿ ಇರುವುದು ನನ್ನ ಸುದೈವವಾಗಿದೆ. ಕಾಶ್ಮೀರ ಮತ್ತು ಶ್ರೀನಗರದ ಪರಿಸರ, ಶಕ್ತಿ ಮತ್ತು ಅನುಭವಗಳು ಯೋಗದಿಂದ ನಾವು ಪಡೆಯುವ ಶಕ್ತಿಯನ್ನು ಅನುಭವಿಸಲು ಅನುವು ಮಾಡಿಕೊಡುತ್ತವೆ. ವಿಶ್ವ ಯೋಗ ದಿನದಂದು ನನ್ನೆಲ್ಲಾ ದೇಶವಾಸಿಗಳಿಗೆ ಮತ್ತು ಪ್ರಪಂಚದ ಮೂಲೆ ಮೂಲೆಯಲ್ಲಿ ಯೋಗಾಭ್ಯಾಸ ಮಾಡುತ್ತಿರುವವರಿಗೆ ನಾನು ಕಾಶ್ಮೀರದ ನೆಲದಿಂದ ಶುಭಾಶಯಗಳನ್ನು ಕೋರುತ್ತೇನೆ.ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ʻಅಂತಾರಾಷ್ಟ್ರೀಯ ಯೋಗ ದಿನ-2024’ ಉದ್ದೇಶಿಸಿಪ್ರಧಾನಮಂತ್ರಿಯವರ ಭಾಷಣ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (ಐವೈಡಿ) ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯ ನೇತೃತ್ವ ವಹಿಸಿದ್ದರು ಮತ್ತು ಯೋಗ ಅಧಿವೇಶನದಲ್ಲಿ ಪಾಲ್ಗೊಂಡರು.ಜೂನ್ 20 ಮತ್ತು 21ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 04:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜೂನ್ 20 ಮತ್ತು 21ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.ಬಿಹಾರದ ರಾಜ್ಗಿರ್ನಲ್ಲಿ ನಳಂದಾ ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 19th, 10:31 am
ಬಿಹಾರದ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಈ ರಾಜ್ಯಕ್ಕಾಗಿ ಪರಿಶ್ರಮ ಪಡುವ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ನಮ್ಮ ವಿದೇಶಾಂಗ ಸಚಿವ, ಶ್ರೀ ಎಸ್. ಜೈಶಂಕರ್ ಜಿ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಪಬಿತ್ರಾ ಜಿ, ವಿವಿಧ ದೇಶಗಳ ಗಣ್ಯರು ಮತ್ತು ರಾಯಭಾರಿಗಳೆ, ನಳಂದ ವಿಶ್ವವಿದ್ಯಾಲಯದ ಉಪ -ಕುಲಪತಿಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮತ್ತು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ನನ್ನ ಎಲ್ಲಾ ಸ್ನೇಹಿತರೆ!