ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 13th, 12:30 pm

ಮೊದಲನೆಯದಾಗಿ, ದೇಶದ ಮತ್ತು ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಅತ್ಯಂತ ಕಷ್ಟಕರ ಪರಿಸ್ಥಿತಿಗಳಲ್ಲಿ ಕೆಲಸ ಮಾಡಿದ, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಕಾರ್ಮಿಕರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಏಳು ಕಾರ್ಮಿಕ ಸ್ನೇಹಿತರು ಪ್ರಾಣ ಕಳೆದುಕೊಂಡರು, ಆದರೆ ಇದು ನಮ್ಮ ಸಂಕಲ್ಪದಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ, ನನ್ನ ಕಾರ್ಮಿಕ ಸ್ನೇಹಿತರು ಧೃತಿಗೆಡಲಿಲ್ಲ. ಯಾವ ಕಾರ್ಮಿಕರೂ ಮನೆಗೆ ಹಿಂತಿರುಗಲಿಲ್ಲ, ಈ ನನ್ನ ಕಾರ್ಮಿಕ ಸಹೋದರರು ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಈ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಮತ್ತು ಇಂದು, ಮೊದಲನೆಯದಾಗಿ, ನಾವು ಕಳೆದುಕೊಂಡಿರುವ ನಮ್ಮ ಏಳು ಕಾರ್ಮಿಕರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು

January 13th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು ನಿವಾರಿಸಿದ್ದಕ್ಕಾಗಿ ಅವರು ಶ್ಲಾಘಿಸಿದರು. 7 ಕಾರ್ಮಿಕರ ನಿಧನಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ಜನವರಿ 13, 2025 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಸೋನಾಮಾರ್ಗ್ ಸುರಂಗ ಯೋಜನೆಯನ್ನು ಉದ್ಘಾಟಿಸಲಿದ್ದಾರೆ

ಪ್ರಧಾನಮಂತ್ರಿ ಅವರು ಜನವರಿ 13, 2025 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಸೋನಾಮಾರ್ಗ್ ಸುರಂಗ ಯೋಜನೆಯನ್ನು ಉದ್ಘಾಟಿಸಲಿದ್ದಾರೆ

January 11th, 05:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 13, 2025 ರಂದು ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:45ರ ಸುಮಾರಿಗೆ, ಅವರು ಸೋನಾಮಾರ್ಗ್ ಸುರಂಗಕ್ಕೆ ಭೇಟಿ ನೀಡಲಿದ್ದು, ಆನಂತರ ಅದರ ಉದ್ಘಾಟನೆ ಕಾರ್ಯ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.