ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ನವೆಂಬರ್ 2ರಂದು ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆಯ ಸಂದರ್ಭದಲ್ಲಿ ಉಕ್ರೇನ್ ನ ಅಧ್ಯಕ್ಷರಾದ ಗೌರವಾನ್ವಿತ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿ ಮಾಡಿದರು.
ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಗತಿಯನ್ನು ಅವಲೋಕಿಸಿದರು ಮತ್ತು ಪ್ರದೇಶಗಳ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯ ವಿನಿಮಯ ಮಾಡಿಕೊಂಡರು.
ಎರಡೂ ದೇಶಗಳಿಂದ ಕೋವಿಡ್ ಲಸಿಕೆ ಪ್ರಮಾಣಪತ್ರಗಳ ಪರಸ್ಪರ ಗುರುತಿಸುವಿಕೆ ಸೇರಿದಂತೆ ಸಾಂಕ್ರಾಮಿಕ ಸಮಯದಲ್ಲಿ ಸಹಕಾರದ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು.
ಈ ವರ್ಷದ ಆರಂಭದಲ್ಲಿ ಕೋವಿಡ್ ಸಾಂಕ್ರಾಮಿಕದ ಎರಡನೇ ಹಂತದಲ್ಲಿ ಭಾರತಕ್ಕೆ ಮಾನವೀಯ ನೆಲೆಯಲ್ಲಿ ಆಮ್ಲಜನಕದ ಸಾಂದ್ರಕಗಳನ್ನು ಪೂರೈಸಿದ ನೆರವು ನೀಡಿದ್ದಕ್ಕಾಗಿ ಅಧ್ಯಕ್ಷ ಝೆಲೆನ್ಸ್ಕಿ ಅವರಿಗೆ ಪ್ರಧಾನಮಂತ್ರಿ ಧನ್ಯವಾದಗಳನ್ನು ಹೇಳಿದರು.
ಉಭಯ ದೇಶಗಳ ನಡುವೆ ಸಂಪರ್ಕ ಹೊಂದಿರುವ ಜನರಿಗೆ, ವಿಶೇಷವಾಗಿ ಉಕ್ರೇನ್ ನ ನಾನಾ ವಿಶ್ವವಿದ್ಯಾಲಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಸ್ಥಿತಿಗತಿ ಕುರಿತು ಧನಾತ್ಮಕವಾಗಿ ಪರಾಮರ್ಶಿಸಲಾಯಿತು.
ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕಾರ್ಯನಿರ್ವಹಿಸಲು ತಮ್ಮ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು.
Провів чудову зустріч з Президентом Зеленським @ZelenskyyUa. Наші перемовини нададуть новий поштовх у розвитку дружби між Індією та Україною. pic.twitter.com/7dPQVyXXAn
— Narendra Modi (@narendramodi) November 2, 2021
Had a wonderful meeting with President @ZelenskyyUa. Our talks will give new vigour to the friendship between India and Ukraine. pic.twitter.com/toyT6ewEQA
— Narendra Modi (@narendramodi) November 2, 2021