ಬೆಲೆ ಏರಿಕೆಗೆ ಪರಿಹಾರವಾಗಿ ಮೂಲ ವೇತನ/ಪಿಂಚಣಿ ಮೊತ್ತದ ಈಗಿರುವ ಶೇಕಡಾ 46ಕ್ಕೆ ಹೆಚ್ಚುವರಿಯಾಗಿ ಶೇಕಡಾ 4ರಷ್ಟು ತುಟ್ಟಿಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ(DR) ಹೆಚ್ಚುವರಿ ಕಂತನ್ನು 1.1.2024ರಿಂದ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ತುಟ್ಟಿಭತ್ಯೆ ಮತ್ತು ತುಟ್ಟಿ ಪರಿಹಾರ ಮೊತ್ತದಲ್ಲಿನ ಹೆಚ್ಚಳದಿಂದ ಸರ್ಕಾರದ ಬೊಕ್ಕಸದ ಮೇಲಿನ ಸಂಯೋಜಿತ ಮೊತ್ತದ ಹೊರೆಯು ವಾರ್ಷಿಕ 12,868.72 ಕೋಟಿ ರೂಪಾಯಿಗಳಾಗಿರುತ್ತದೆ. ಇದರಿಂದ ಸುಮಾರು 49.18 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 67.95 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ.
ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ.