ಯೋಜನೆಗಳ ಒಟ್ಟು ಅಂದಾಜು ವೆಚ್ಚ 6,456 ಕೋಟಿ ರೂ. ಆಗಲಿದ್ದು, 2028-29ರ ವೇಳೆಗೆ ಇದು ಪೂರ್ಣಗೊಳ್ಳುವ ನಿರೀಕ್ಷೆ
ಈ ಯೋಜನೆಗಳ ನಿರ್ಮಾಣದ ಸಮಯದಲ್ಲಿ ಸುಮಾರು 114 (ನೂರಾ ಹದಿನಾಲ್ಕು) ಲಕ್ಷ ಮಾನವ ದಿನ ಉದ್ಯೋಗ ಸೃಷ್ಟಿಯಾಗಲಿದೆ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (CCEA), ಒಟ್ಟು ಅಂದಾಜು ವೆಚ್ಚ 6,456 ಕೋಟಿ ರೂಪಾಯಿ ಮೌಲ್ಯದ ರೈಲ್ವೆ ಸಚಿವಾಲಯದ 3 (ಮೂರು) ಯೋಜನೆಗಳಿಗೆ ಅನುಮೋದನೆ ನೀಡಿದೆ.

ಅನುಮೋದಿತ ಯೋಜನೆಗಳು ಸಂಪರ್ಕವಿಲ್ಲದ ಪ್ರದೇಶಗಳನ್ನು ಸಂಪರ್ಕಿಸುವ ಮೂಲಕ ಲಾಜಿಸ್ಟಿಕ್ಸ್‌ ದಕ್ಷತೆಯನ್ನು ಸುಧಾರಿಸುತ್ತದೆ, ಅಸ್ತಿತ್ವದಲ್ಲಿರುವ ಲೈನ್ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಸಾರಿಗೆ ಜಾಲವನ್ನು ವರ್ಧಿಸುತ್ತದೆ, ಇದರ ಪರಿಣಾಮವಾಗಿ ಸುವ್ಯವಸ್ಥಿತ ಸರಪಳಿಗಳು ಮತ್ತು ವೇಗವರ್ಧಿತ ಆರ್ಥಿಕ ಬೆಳವಣಿಗೆಯಾಗುತ್ತದೆ.

ಹೊಸ ಮಾರ್ಗದ ಪ್ರಸ್ತಾವನೆಗಳು ನೇರ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಚಲನಶೀಲತೆಯನ್ನು ಸುಧಾರಿಸುತ್ತದೆ, ಭಾರತೀಯ ರೈಲ್ವೆಗಳಿಗೆ ವರ್ಧಿತ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆಯನ್ನು ಒದಗಿಸುತ್ತದೆ. ಬಹು-ಟ್ರ್ಯಾಕಿಂಗ್ ಪ್ರಸ್ತಾವನೆಯು ಕಾರ್ಯಾಚರಣೆಗಳನ್ನು ಸರಾಗಗೊಳಿಸುತ್ತದೆ ಮತ್ತು ದಟ್ಟಣೆಯನ್ನು ಕಡಿಮೆ ಮಾಡುತ್ತದೆ, ಭಾರತೀಯ ರೈಲ್ವೆಯಾದ್ಯಂತ ಅತ್ಯಂತ ಜನನಿಬಿಡ ವಿಭಾಗಗಳಲ್ಲಿ ಹೆಚ್ಚು ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ.

ಈ ಯೋಜನೆಗಳು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀಯವರ ನವಭಾರತದ ಪರಿಕಲ್ಪನೆಯ ದೃಷ್ಟಿಗೆ ಅನುಗುಣವಾಗಿರುತ್ತವೆ, ಇದು "ಆತ್ಮನಿರ್ಭರ್" ಅಭಿಯಾನದಡಿ ಸಮಗ್ರ ಅಭಿವೃದ್ಧಿಯ ಮೂಲಕ ಉದ್ಯೋಗ/ಸ್ವಯಂ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುತ್ತದೆ.

ಪ್ರಧಾನಮಂತ್ರಿ-ಗತಿ ಶಕ್ತಿ, ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಬಹು-ಮಾದರಿ ಸಂಪರ್ಕದ ಯೋಜನೆಗೆ ಪೂರಕವಾಗಿದೆ. ಇದು ಸಮಗ್ರ ಯೋಜನೆಯ ಮೂಲಕ ಸಾಧ್ಯವಾಗಿದೆ ಮತ್ತು ಜನರು, ಸರಕು ಮತ್ತು ಸೇವೆಗಳ ಚಲನೆಗೆ ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ.

4 ರಾಜ್ಯಗಳಾದ ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಛತ್ತೀಸ್‌ಗಢದ 7 ಜಿಲ್ಲೆಗಳನ್ನು ಒಳಗೊಂಡಂತೆ 3 (ಮೂರು) ಯೋಜನೆಗಳು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ನೆಟ್‌ವರ್ಕ್ ಅನ್ನು ಸುಮಾರು 300 ಕಿಮೀಗಳಷ್ಟು ಹೆಚ್ಚಿಸುತ್ತವೆ.

ಈ ಯೋಜನೆಗಳೊಂದಿಗೆ 14 ಹೊಸ ನಿಲ್ದಾಣಗಳನ್ನು ನಿರ್ಮಿಸಲಾಗುವುದು, ಇದು 2 (ಎರಡು) ಮಹತ್ವಾಕಾಂಕ್ಷೆಯ ಜಿಲ್ಲೆಗಳಿಗೆ (ನುವಾಪಾದ ಮತ್ತು ಪೂರ್ವ ಸಿಂಗ್‌ಬಮ್) ಸಂಪರ್ಕವನ್ನು ಹೆಚ್ಚಿಸುತ್ತದೆ. ಹೊಸ ಲೈನ್ ಯೋಜನೆಗಳು 1,300 ಹಳ್ಳಿಗಳು ಮತ್ತು ಸುಮಾರು 11 ಲಕ್ಷ ಜನಸಂಖ್ಯೆಗೆ ಸಂಪರ್ಕ ಒದಗಿಸುತ್ತವೆ. ಬಹು-ಟ್ರ್ಯಾಕಿಂಗ್ ಯೋಜನೆಯು 1,300 ಹಳ್ಳಿಗಳು ಮತ್ತು ಸುಮಾರು 19 ಲಕ್ಷ ಜನಸಂಖ್ಯೆಗೆ ಸಂಪರ್ಕವನ್ನು ಹೆಚ್ಚಿಸುತ್ತದೆ.

ಕೃಷಿ ಉತ್ಪನ್ನಗಳು, ರಸಗೊಬ್ಬರ, ಕಲ್ಲಿದ್ದಲು, ಕಬ್ಬಿಣದ ಅದಿರು, ಉಕ್ಕು, ಸಿಮೆಂಟ್, ಸುಣ್ಣದ ಕಲ್ಲು ಮುಂತಾದ ಸರಕುಗಳ ಸಾಗಣೆಗೆ ಇವುಗಳು ಅತ್ಯಗತ್ಯ ಮಾರ್ಗಗಳಾಗಿವೆ. ಸಾಮರ್ಥ್ಯ ವರ್ಧನೆಯ ಕಾರ್ಯಗಳು 45 MTPA (ವರ್ಷಕ್ಕೆ ಮಿಲಿಯನ್ ಟನ್) ಪ್ರಮಾಣದ ಹೆಚ್ಚುವರಿ ಸರಕು ಸಾಗಣೆಗೆ ಅವಕಾಶ ಕಲ್ಪಿಸಲಿದೆ. ರೈಲ್ವೆಯು ಪರಿಸರ ಸ್ನೇಹಿ ಮತ್ತು ಇಂಧನ ದಕ್ಷ ಸಾರಿಗೆ ವಿಧಾನವಾಗಿದ್ದು, ಹವಾಮಾನ ಗುರಿಗಳನ್ನು ಸಾಧಿಸಲು ಮತ್ತು ದೇಶದ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ತೈಲ ಆಮದು (10 ಕೋಟಿ ಲೀಟರ್) ಮತ್ತು ಇಂಗಾಲ ಹೊರಸೂಸುವಿಕೆಯನ್ನು (240 ಕೋಟಿ ಕೆಜಿ) ಕಡಿಮೆ ಮಾಡುತ್ತದೆ. ಇದು 9.7 ಕೋಟಿ ಗಿಡಗಳ ನೆಡುವಿಕೆಗೆ ಸಮನಾಗಿರುತ್ತದೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
PM Modi hails diaspora in Kuwait, says India has potential to become skill capital of world

Media Coverage

PM Modi hails diaspora in Kuwait, says India has potential to become skill capital of world
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಡಿಸೆಂಬರ್ 2024
December 21, 2024

Inclusive Progress: Bridging Development, Infrastructure, and Opportunity under the leadership of PM Modi