ಪ್ರಧಾನಮಂತ್ರಿಗಳ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪರಿಹಾರ (ಪಿಎಂ-ಕೇರ್ಸ್ ) ನಿಧಿ ಟ್ರಸ್ಟ್, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಕಲ್ಯಾಣಿಯಲ್ಲಿ ಡಿಆರ್ ಡಿಒ ವತಿಯಿಂದ ತಲಾ 250 ಹಾಸಿಗೆಗಳ ಸಾಮರ್ಥ್ಯದ ಎರಡು ತಾತ್ಕಾಲಿಕ ಕೋವಿಡ್ ಆಸ್ಪತ್ರೆಗಳ ಸ್ಥಾಪನೆಗರ 41.62 ಕೋಟಿ ನೆರವು ಹಂಚಿಕೆ ಮಾಡಲು ನಿರ್ಧರಿಸಿದೆ. ಅವುಗಳಿಗೆ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಜ್ಯ ಸರ್ಕಾರ ಕೆಲವು ಮೂಲಸೌಕರ್ಯ ನೆರವನ್ನು ಒದಗಿಸಲಿವೆ.
ಈ ಪ್ರಸ್ತಾವದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಕೋವಿಡ್ ಸ್ಥಿತಿಗತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಮೂಲಸೌಕರ್ಯ ವೃದ್ಧಿಯಾಗಲಿದೆ.
ಪ್ರಧಾನಮಂತ್ರಿಗಳ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪರಿಹಾರ (ಪಿಎಂ-ಕೇರ್ಸ್ ) ನಿಧಿ ಟ್ರಸ್ಟ್, ಆರೋಗ್ಯ ಮೂಲಸೌಕರ್ಯಗಳ ವೃದ್ಧಿಗೆ ಬೆಂಬಲ ನೀಡುವ ಪ್ರಯತ್ನದಲ್ಲಿ ಬಿಹಾರ, ದೆಹಲಿ, ಜಮ್ಮು ಮತ್ತು ಶ್ರೀನಗರದಲ್ಲಿ ಸಹ ಕೋವಿಡ್ ಆಸ್ಪತ್ರೆಗಳನ್ನು ಸ್ಥಾಪಿಸಲು ನೆರವು ನೀಡಿತು.