ಆರೋಗ್ಯಕರ ಪ್ರಪಂಚವು ಉತ್ತಮವಾಗಿದೆ ಎಂಬುದನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ತಂತ್ರಜ್ಞಾನವನ್ನು ಸಂಯೋಜಿಸುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡುವ ಮೂಲಕ ಭಾರತವು ಆರೋಗ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸ್ಪಷ್ಟಪಡಿಸಿದರು. ಈ ನಿಟ್ಟಿನಲ್ಲಿ ಭಾರತವು ಜಾಗತಿಕ ಪ್ರಯತ್ನಗಳನ್ನು ಬಲಪಡಿಸುತ್ತದೆ ಎಂದು ಅವರು ಒತ್ತಿ ಹೇಳಿದರು.
ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕರಾದ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಶ್ರೀ ಮೋದಿಯವರು;
"ಪ್ರೀತಿಯ ತುಳಸಿ ಭಾಯ್,
ಆರೋಗ್ಯಕರ ಪ್ರಪಂಚವು ಉತ್ತಮ ಪ್ರಪಂಚವಾಗಿದೆ. ಭಾರತವು ಈ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ತಂತ್ರಜ್ಞಾನವನ್ನು ಸಂಯೋಜಿಸಲು ನಾವು ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ಅಂತೆಯೇ, ನಾವು ಈ ನಿಟ್ಟಿನಲ್ಲಿ ಜಾಗತಿಕ ಪ್ರಯತ್ನಗಳನ್ನು ಕೂಡಾ ಬಲಪಡಿಸುತ್ತೇವೆ." ಎಂದು ಹೇಳಿದ್ದಾರೆ.
@DrTedros
Dear Tulsi Bhai,
— Narendra Modi (@narendramodi) November 19, 2024
A healthy planet is a better planet. India is working actively in this sector. We are attaching great priority to integrating technology too. At the same time, we will strengthen global efforts in this regard. @DrTedros https://t.co/yipGKox1uV