ಸಂಘಟನೆಯಲ್ಲಿ ನಾವೀನ್ಯತೆ: 1980ರ ಗುಜರಾತ್ನ ಉದಾಹರಣೆ

ಗುಜರಾತ್ ಮುಖ್ಯಮಂತ್ರಿ ಹಾಗೂ ಪ್ರಧಾನಿ ಸ್ಥಾನ ಅಲಂಕರಿಸುವ ಮುನ್ನ ಮೋದಿ ಅವರು ತಮ್ಮ ಸಂಘಟನಾ ಸಾಮಥ್ರ್ಯಕ್ಕೆ ಹೆಸರಾಗಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವಂತದ್ದೇ. ಪಂಚಾಯಿತಿ ಚುನಾವಣೆಯಿಂದ ಲೋಕಸಭೆ ಚುನಾವಣೆವರೆಗೆ ಸಾಂಸ್ಥಿಕ ಕೆಲಸಗಳಲ್ಲಿ ಅವರು ತೊಡಗಿಸಿಕೊಂಡಿದ್ದರು.

ಗುಜರಾತ್ನ ಬಿಜೆಪಿ ಘಟಕದ ಪ್ರಮುಖ ಮುಖಂಡರಲ್ಲಿ ಒಬ್ಬರಾಗಿದ್ದ ಅವರು, 1980ರ ಅಹಮದಾಬಾದ್ ಮುನ್ಸಿಪಾಲಿಟಿ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ರೂಪಿಸಿದ ತಂತ್ರಗಳ ಮೂಲಕ ಅವರ ಸಂಘಟನಾ ಕೌಶಲವನ್ನು ಅರ್ಥ ಮಾಡಿಕೊಳ್ಳಬಹುದು.

ಸಾಂಸ್ಥಿಕ ಸಂಘಟನೆಯಲ್ಲಿನ ನವೀನತೆಯು ಎರಡು ಅಂಶಗಳನ್ನು ಆಧರಿಸಿತ್ತು. ಮೊದಲಿಗೆ-ಪ್ರತಿಯೊಬ್ಬ ಕಾರ್ಯಕರ್ತನಿಗೂ ನಿದರ್ಿಷ್ಟ ಗುರಿಯುಳ್ಳ ಕೆಲಸವನ್ನು ಕೊಡುವುದು ಹಾಗೂ ಆತ ನಿಗದಿತ ಗುರಿಯನ್ನು ಹೇಗೆ ತಲುಪುತ್ತಾನೆ ಎಂಬುದನ್ನು ಮೇಲುಸ್ತುವಾರಿ ಮಾಡುವುದು. ಎರಡನೆಯದಾಗಿ, ಕೆಲಸದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವಂತೆ ನೋಡಿಕೊಳ್ಳುವುದು. ನಗರ ಹಾಗೂ ಅದರ ಆಡಳಿತದಲ್ಲಿ ಎಲ್ಲರಿಗೂ ಪಾಲಿದೆ ಎಂಬ ಭಾವನಾತ್ಮಕ ಅಂಶವನ್ನು ಮನವರಿಕೆ ಮಾಡಿಕೊಡುವಲ್ಲಿ ಅವರು ಯಶಸ್ವಿಯಾದರು.

ಅಹಮದಾಬಾದ್ನ ಚುನಾವಣೆ ಪ್ರಚಾರದಲ್ಲಿ ಸಾಮುದಾಯಿಕ ಸಂಘಟನೆಯಲ್ಲಿ ಕಾರ್ಯಕರ್ತರನ್ನು ಸೂಕ್ತವಾಗಿ ಬಳಕೆ ಮಾಡಿಕೊಂಡು, 1000ಕ್ಕೂ ಅಧಿಕ ಸಮುದಾಯ ಮಟ್ಟದ ಗುಂಪು ಸಭೆಗಳನ್ನು ನಡೆಸಲಾಯಿತು. ಈ 1000 ಸಮುದಾಯ ಸಭೆಗಳನ್ನು ಆಯೋಜಿಸಲು 100 ಸ್ವಯಂ ಸೇವಕರಿಗೆ ತರಬೇತಿ ನೀಡಲಾಯಿತು. ಸಮುದಾಯ ಹಂತದ ಸಭೆಯಲ್ಲಿ ಕಾರ್ಯಕರ್ತರು ಏನು ಮಾಡಬೇಕು ಎಂಬ ಕುರಿತು ತಿಳಿಸಿ ಹೇಳುವುದು ತರಬೇತಿಯ ಉದ್ದೇಶ ವಾಗಿತ್ತು. ಯಾವ ವಿಷಯದ ಮೇಲೆ ಒತ್ತು ಕೊಡಬೇಕು ಹಾಗೂ ಯಾವ ರೀತಿ ಚಚರ್ೆ ನಡೆಸಬೇಕು ಎಂದು ತಿಳಿಸಿ ಕೊಡಲಾಯಿತು. ಚುನಾವಣೆ ಪ್ರಚಾರ  ತಂತ್ರದಲ್ಲಿ ಇದೊಂದು ನವೀನ ಹಾಗೂ ಕಂಡುಕೇಳರಿಯದ ನಡೆ ಎನ್ನಬಹುದು.

ಸಮುದಾಯ ಹಂತದ ಸಭೆಗಳಲ್ಲಿ 25-30 ನಾಗರಿಕರ ಗುಂಪುಗಳು ಪಾಲ್ಗೊಂಡು, ಉತ್ತಮವಾಗಿ ಮಾತನ್ನಾಡಬಲ್ಲವರಿಗೆ ನಗರವನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿಸಲು ಉತ್ತೇಜನ ನೀಡಲಾಗುತ್ತಿತ್ತು. ಮಹಿಳೆಯರು ಈ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳುವಂತೆ ಮಾಡಲು ಮಧ್ಯಾಹ್ನ 2 ಗಂಟೆ ಬಳಿಕ ಪ್ರತ್ಯೇಕ ಸಭೆಗಳನ್ನು ಆಯೋಜಿಸಲಾಗುತ್ತಿತ್ತು. ಮುನಿಸಿಪಾಲಿಟಿ ಚುನಾವಣೆ ಪ್ರಚಾರಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರು ಬರುವಂತೆ ಮಾಡುವಲ್ಲಿ ಮೋದಿ ಯಶಸ್ವಿಯಾದರು.

ಸಂಘಟನೆಗೆ ಸಂಬಂಧಿಸಿದಂತೆ ಮೋದಿ ಅವರ ವೈಶಿಷ್ಟ್ಯದ ಬಗ್ಗೆ ಹೇಳಬೇಕಿದೆ. ಕಾರ್ಯಕರ್ತರಿಗೆ ಸೂಕ್ತ ತರಬೇತಿ, ಭಾವನಾತ್ಮಕ-ಸ್ಥಳೀಯ ಅಂಶಗಳನ್ನು ಒಳಗೊಂಡು ರೂಪಿಸಿದ ಈ ಕಾರ್ಯತಂತ್ರವು ಅಹಮದಾಬಾದ್ನ ಮುನಿಸಿಪಾಲಿಟಿಯಲ್ಲಿ ಬಿಜೆಪಿಯ ಗೆಲುವಿಗೆ ಅಗತ್ಯವಾದ ಬುನಾದಿಯನ್ನು ಹಾಕಿ ಕೊಟ್ಟಿತು. ಬಳಿಕ ಇದೇ ಕಾರ್ಯತಂತ್ರವನ್ನು ರಾಜ್ಯದೆಲ್ಲೆಡೆ ವಿಸ್ತರಿಸಲಾಯಿತು.

ಇದೇ ತಂತ್ರವನ್ನು ನಂತರದ ಎಲ್ಲ ಚುನಾವಣೆಗಳಲ್ಲಿ ನಿಷ್ಕೃಷ್ಟವಾಗಿ ಬಳಸಲಾಯಿತು. ಗುಜರಾತ್ನಲ್ಲಿ, ಮಹಾ ಕಾರ್ಯದಶರ್ಿಯಾಗಿ ಲೋಕಸಭೆ ಚುನಾವಣೆಯಲ್ಲಿ ಹಾಗೂ 2001ರಲ್ಲಿ ರಾಜಕೀಯಕ್ಕೆ  ಸೇರ್ಪಡೆ ಗೊಂಡ ಬಳಿಕವೂ ಇದು ಮುಂದುವರಿಯಿತು. ಜನರೊಡನೆ ಸಂಪರ್ಕ ಸಾಧಿಸುವ ಹಾಗೂ ಅವರ ಅಗತ್ಯಗಳನ್ನು ಅರ್ಥ ಮಾಡಿಕೊಳ್ಳುವ ಅವರ ಸಾಮಥ್ರ್ಯವು ನಿಜಕ್ಕೂ ಪ್ರಯೋಜನಕಾರಿಯಾಗಿ ಪರಿಣಮಿಸಿತು.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Annual malaria cases at 2 mn in 2023, down 97% since 1947: Health ministry

Media Coverage

Annual malaria cases at 2 mn in 2023, down 97% since 1947: Health ministry
NM on the go

Nm on the go

Always be the first to hear from the PM. Get the App Now!
...
ಪ್ರಧಾನಿ ಮೋದಿಯವರಿಂದ ಹೃದಯ ಸ್ಪರ್ಶಿ ಪತ್ರ
December 03, 2024

ದಿವ್ಯಾಂಗ್ ಕಲಾವಿದೆ ದಿಯಾ ಗೋಸಾಯಿ ಅವರಿಗೆ, ಸೃಜನಶೀಲತೆಯ ಒಂದು ಕ್ಷಣವು ಜೀವನವನ್ನು ಬದಲಾಯಿಸುವ ಅನುಭವವಾಗಿ ಮಾರ್ಪಟ್ಟಿತು. ಅಕ್ಟೋಬರ್ 29 ರಂದು ಪ್ರಧಾನಿ ಮೋದಿಯವರ ವಡೋದರಾ ರೋಡ್‌ಶೋ ಸಮಯದಲ್ಲಿ, ಅವರು ತಮ್ಮ ರೇಖಾಚಿತ್ರಗಳನ್ನು ಪ್ರಸ್ತುತಪಡಿಸಿದರು ಮತ್ತು ಎಚ್.ಇ. ಶ್ರೀ ಪೆಡ್ರೊ ಸ್ಯಾಂಚೆಜ್, ಸ್ಪೇನ್ ಸರ್ಕಾರದ ಅಧ್ಯಕ್ಷ. ಇಬ್ಬರೂ ನಾಯಕರು ಅವಳ ಹೃತ್ಪೂರ್ವಕ ಉಡುಗೊರೆಯನ್ನು ವೈಯಕ್ತಿಕವಾಗಿ ಸ್ವೀಕರಿಸಲು ಮುಂದಾದರು, ಅವಳನ್ನು ಸಂತೋಷಪಡಿಸಿದರು.

ವಾರಗಳ ನಂತರ, ನವೆಂಬರ್ 6 ರಂದು, ದಿಯಾ ಅವರ ಕಲಾಕೃತಿಯನ್ನು ಶ್ಲಾಘಿಸಿ ಮತ್ತು ಶ್ರೀ ಸ್ಯಾಂಚೆಜ್ ಅದನ್ನು ಮೆಚ್ಚಿದರು. "ವಿಕಸಿತ್ ಭಾರತ್" ನಿರ್ಮಾಣದಲ್ಲಿ ಯುವಕರ ಪಾತ್ರದಲ್ಲಿ ನಂಬಿಕೆಯನ್ನು ವ್ಯಕ್ತಪಡಿಸುವ ಮೂಲಕ ಸಮರ್ಪಣಾ ಭಾವದಿಂದ ಲಲಿತಕಲೆಗಳನ್ನು ಮುಂದುವರಿಸಲು ಪ್ರಧಾನಿ ಮೋದಿ ಅವರನ್ನು ಪ್ರೋತ್ಸಾಹಿಸಿದರು. ಅವರು ತಮ್ಮ ವೈಯಕ್ತಿಕ ಸ್ಪರ್ಶವನ್ನು ಪ್ರದರ್ಶಿಸುವ ಮೂಲಕ ಅವರ ಕುಟುಂಬಕ್ಕೆ ಬೆಚ್ಚಗಿನ ದೀಪಾವಳಿ ಮತ್ತು ಹೊಸ ವರ್ಷದ ಶುಭಾಶಯಗಳನ್ನು ನೀಡಿದರು.

ಸಂತೋಷದಿಂದ ಮುಳುಗಿದ ದಿಯಾ ತನ್ನ ಹೆತ್ತವರಿಗೆ ಪತ್ರವನ್ನು ಓದಿದರು, ಅವರು ಕುಟುಂಬಕ್ಕೆ ಅಪಾರ ಗೌರವವನ್ನು ತಂದರು ಎಂದು ಹರ್ಷ ವ್ಯಕ್ತಪಡಿಸಿದರು. "ನಮ್ಮ ದೇಶದ ಚಿಕ್ಕ ಭಾಗವಾಗಿರುವುದಕ್ಕೆ ನಾನು ಹೆಮ್ಮೆ ಪಡುತ್ತೇನೆ. ಮೋದಿ ಜೀ, ನನಗೆ ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನೀಡಿದ್ದಕ್ಕಾಗಿ ಧನ್ಯವಾದಗಳು" ಎಂದು ದಿಯಾ ಹೇಳಿದರು, ಪ್ರಧಾನಿಯವರ ಪತ್ರವನ್ನು ಸ್ವೀಕರಿಸುವುದು ಜೀವನದಲ್ಲಿ ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತು ಸಬಲೀಕರಣಗೊಳ್ಳಲು ಆಳವಾಗಿ ಪ್ರೇರೇಪಿಸಿತು. ಇತರರು ಅದೇ ರೀತಿ ಮಾಡಲು.

ದಿವ್ಯಾಂಗರನ್ನು ಸಬಲೀಕರಣಗೊಳಿಸುವ ಮತ್ತು ಅವರ ಕೊಡುಗೆಗಳನ್ನು ಗುರುತಿಸುವ ಅವರ ಬದ್ಧತೆಯನ್ನು ಪಿಎಂ ಮೋದಿಯವರ ಇಂಗಿತ ಪ್ರತಿಬಿಂಬಿಸುತ್ತದೆ. ಸುಗಮ್ಯ ಭಾರತ್ ಅಭಿಯಾನದಂತಹ ಹಲವಾರು ಉಪಕ್ರಮಗಳಿಂದ ದಿಯಾ ಅವರಂತಹ ವೈಯಕ್ತಿಕ ಸಂಪರ್ಕಗಳವರೆಗೆ, ಅವರು ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಪ್ರತಿಯೊಂದು ಪ್ರಯತ್ನವೂ ಮುಖ್ಯವೆಂದು ಸಾಬೀತುಪಡಿಸುವ ಮೂಲಕ ಸ್ಫೂರ್ತಿ ಮತ್ತು ಉನ್ನತಿಯನ್ನು ಮುಂದುವರೆಸಿದ್ದಾರೆ.