ಹಿರಿಯ ನಾಯಕ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗುವುದು.  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯ ಮೂಲಕ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ.

ಶ್ರೀ ಎಲ್ ಕೆ ಅಡ್ವಾಣಿಯವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಮಾತನಾಡಿದ್ದಾರೆ ಹಾಗೂ ಅವರಿಗೆ  ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕಾಗಿ ಅವರನ್ನು ಅಭಿನಂದಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿ ಮಾಡಿದ್ದಾರೆ;

 "ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಎಂಬ ಮಾಹಿತಿಯನ್ನು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ.  ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ.  ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದರೆ. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ ಹಾಗೂ ಸ್ಮರಣೀಯವಾಗಿದೆ.  ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ದೇಶದ ಉಪಪ್ರಧಾನಮಂತ್ರಿಯಾಗಿ ರಾಷ್ಟ್ರಸೇವೆ ಮಾಡುವವರೆಗಿನ ಅವರ ಜೀವನ ಅತಿ ಮಹತ್ತರದ್ದಾಗಿದೆ.  ಅವರು ನಮ್ಮ ರಾಜಕೀಯ ಅವಧಿಯಲ್ಲಿ ದೇಶದ ಗೃಹ ಸಚಿವರಾಗಿ ಮತ್ತು ವಾರ್ತಾ & ಪ್ರಸಾರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.  ಅವರ ಸಂಸದೀಯ ವ್ಯವಹಾರಗಳು, ಕಾರ್ಯಚಟುವಟಿಕೆಗಳು ಹಾಗೂ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ ಮತ್ತು ಅನುಭವಗಳ ಶ್ರೀಮಂತ ಒಳನೋಟಗಳಿಂದ ತುಂಬಿವೆ."

 "ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ಜಿಯವರ ಹಲವು ದಶಕಗಳ ಸುದೀರ್ಘ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ರಾಜಕೀಯ ನೀತಿಶಾಸ್ತ್ರದಲ್ಲಿ ಒಂದು ಅನುಕರಣೀಯ ಮಾನದಂಡವನ್ನು ಅವರು ಹೊಂದಿದ್ದಾರೆ.  ಅವರು ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕಡೆಗೆ ಅಪ್ರತಿಮ ಪ್ರಯತ್ನಗಳನ್ನು ಮಾಡಿದ್ದಾರೆ.  ಅವರಿಗೆ ಭಾರತರತ್ನ ಪ್ರಶಸ್ತಿ ಪ್ರದಾನ ಮಾಡಿದ್ದು ನನ್ನ ಪಾಲಿಗೆ ಅತ್ಯಂತ ಭಾವನಾತ್ಮಕ ಕ್ಷಣ ಎಂದು ಭಾವಿಸಿದ್ದೇನೆ.  ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರಿಂದ ಕಲಿಯಲು ನನಗೆ  ಅವಕಾಶಗಳು ಸಿಕ್ಕಿರುವುದು ನನ್ನ ಪಾಲಿಗೆ ವಿಶೇಷವೆಂದು ನಾನು ಯಾವಾಗಲೂ ಪರಿಗಣಿಸುತ್ತೇನೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Mutual fund industry on a high, asset surges Rs 17 trillion in 2024

Media Coverage

Mutual fund industry on a high, asset surges Rs 17 trillion in 2024
NM on the go

Nm on the go

Always be the first to hear from the PM. Get the App Now!
...
Chief Minister of Andhra Pradesh meets Prime Minister
December 25, 2024

Chief Minister of Andhra Pradesh, Shri N Chandrababu Naidu met Prime Minister, Shri Narendra Modi today in New Delhi.

The Prime Minister's Office posted on X:

"Chief Minister of Andhra Pradesh, Shri @ncbn, met Prime Minister @narendramodi

@AndhraPradeshCM"