ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೌದಿ ಅರೇಬಿಯಾ ಸಾಮ್ರಾಜ್ಯದ ಯುವರಾಜ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರೊಂದಿಗೆ ಮಾತುಕತೆ ನಡೆಸಿದರು.

|

ಭಾರತ ಮತ್ತು ಸೌದಿ ಅರೇಬಿಯಾ ನಡುವೆ ಏರ್ಪಟ್ಟಿರುವ ದ್ವಿಪಕ್ಷೀಯ ಒಪ್ಪಂದದ ಅಡಿ ಅದರಲ್ಲೂ ವಿಶೇಷವಾಗಿ ಕಾರ್ಯತಂತ್ರ ಪಾಲುದಾರಿಕೆ ಮಂಡಳಿ ರಕ್ಷಣೆ ಅಥವಾ ಬೆಂಬಲದಲ್ಲಿ ನಡೆಯುತ್ತಿರುವ ನಾನಾ ಉಪಕ್ರಮಗಳ ಪ್ರಗತಿ ಕುರಿತು ಇಬ್ಬರೂ ನಾಯಕರು ಪರಾಮರ್ಶೆ ನಡೆಸಿದರು.

ಸೌದಿ ಅರೇಬಿಯಾವು ಭಾರತದಲ್ಲಿ ಹೆಚ್ಚಿನ ಹೂಡಿಕೆ ಮಾಡುವುದನ್ನು ಭಾರತ ಬಯಸುತ್ತಿದೆ. ಅದರಲ್ಲೂ ವಿಶೇಷವಾಗಿ ಇಂಧನ, ಮಾಹಿತಿ ತಂತ್ರಜ್ಞಾನ ಮತ್ತು ರಕ್ಷಣಾ ಉತ್ಪನ್ನಗಳ ಉತ್ಪಾದನಾ ಕ್ಷೇತ್ರದಲ್ಲಿ ಸೌದಿಯ ಅಪಾರ ಹೂಡಿಕೆ ಬಗ್ಗೆ ಭಾರತ ಉತ್ಸುಕತೆ ಹೊಂದಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫರ್ಹಾನ್ ಅವರ ಗಮನಕ್ಕೆ ತಂದರು.

|

ಆಫ್ಘಾನಿಸ್ತಾನದ ಸಮಕಾಲೀನ ಪರಿಸ್ಥಿತಿ ಸೇರಿದಂತೆ ಪ್ರಾದೇಶಿಕ ಬೆಳವಣಿಗೆಗಳ ಕುರಿತು ಉಭಯ ನಾಯಕರು ಪರಸ್ಪರ ತಮ್ಮ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡರು.

ಕೋವಿಡ್-19 ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಸಂಕಷ್ಟ ಸಮಯದಲ್ಲಿ ಸೌದಿ ಅರೇಬಿಯಾ ಸಾಮ್ರಾಜ್ಯವು ಅಲ್ಲಿರುವ ಭಾರತೀಯ ಆರೋಗ್ಯ ಮತ್ತು ಸುರಕ್ಷತೆಗೆ ತೋರಿದ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸೌದಿ ಆಡಳಿತಕ್ಕೆ ವಿಶೇಷ ಧನ್ಯವಾದಗಳನ್ನು ಸಲ್ಲಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಮಹಾರಾಜ  ಮತ್ತು ರಾಜಕುಮಾರರಿಗೆ ಇದೇ ಸಂದರ್ಭದಲ್ಲಿ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Indian startups raise $1.65 bn in February, median valuation at $83.2 mn

Media Coverage

Indian startups raise $1.65 bn in February, median valuation at $83.2 mn
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 4 ಮಾರ್ಚ್ 2025
March 04, 2025

Appreciation for PM Modi’s Leadership: Driving Self-Reliance and Resilience