ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫಿಲಿಪೈನ್ಸ್ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಫರ್ಡಿನಾಂಡ್ ಮಾರ್ಕೋಸ್ ಜೂನಿಯರ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು.
ಫಿಲಿಪೈನ್ಸ್‌ನ 17 ನೇ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಮಾರ್ಕೋಸ್ ಜೂನಿಯರ್ ಅವರನ್ನು ಪ್ರಧಾನಿಯವರು ಅಭಿನಂದಿಸಿದರು.
ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಕ್ಷೇತ್ರಗಳ ಬಗ್ಗೆ ಮಾತನಾಡಿದರು ಮತ್ತು ಇತ್ತೀಚಿನ ವರ್ಷಗಳಲ್ಲಿ ಉಭಯ ದೇಶಗಳ ನಡುವಿನ ಸಹಕಾರದಲ್ಲಿ ಆಗಿರುವ ತ್ವರಿತ ಬೆಳವಣಿಗೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ಭಾರತದ ʼಆಕ್ಟ್ ಈಸ್ಟ್ ಪಾಲಿಸಿʼ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಕೋನದಲ್ಲಿ ಫಿಲಿಪೈನ್ಸ್ನ ಪ್ರಮುಖ ಪಾತ್ರವನ್ನು ಪುನರುಚ್ಚರಿಸಿದ ಪ್ರಧಾನಿಯವರು, ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸುವ ಬಯಕೆಯನ್ನು ವ್ಯಕ್ತಪಡಿಸಿದರು.
ಫಿಲಿಪೈನ್ಸ್‌ನ ಅಭಿವೃದ್ಧಿಗಾಗಿ ಅವರ ಯೋಜನೆಗಳಿಗೆ ಭಾರತದ ಸಂಪೂರ್ಣ ಬೆಂಬಲ ನೀಡುವುದಾಗಿ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಜೂನಿಯರ್ ಅವರಿಗೆ ಪ್ರಧಾನಿಯವರು ಭರವಸೆ ನೀಡಿದರು.