ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಎಚ್.ಇ. ಚಾರ್ಲ್ಸ್ ಮೈಕೆಲ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
ಉಕ್ರೇನ್ನಲ್ಲಿ ಹದಗೆಡುತ್ತಿರುವ ಪರಿಸ್ಥಿತಿ ಮತ್ತು ಮಾನವೀಯ ಬಿಕ್ಕಟ್ಟಿನ ಬಗ್ಗೆ ಪ್ರಧಾನಮಂತ್ರಿ ತಮ್ಮ ವೇದನೆಯನ್ನು ವ್ಯಕ್ತಪಡಿಸಿದರು. ಯುದ್ಧವನ್ನು ನಿಲ್ಲಿಸಲು ಮತ್ತು ಮಾತುಕತೆಗೆ ಮರಳಲು ಭಾರತದ ಮನವಿಯನ್ನು ಅವರು ಪುನರುಚ್ಚರಿಸಿದರು.
ಸಮಕಾಲೀನ ಜಾಗತಿಕ ಕ್ರಮವು ಅಂತಾರಾಷ್ಟ್ರೀಯ ಕಾನೂನು, ವಿಶ್ವ ಸಂಸ್ಥೆಯ ಚಾರ್ಟರ್ ಮತ್ತು ಎಲ್ಲಾ ರಾಜ್ಯಗಳ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವದ ಗೌರವದ ಮೇಲೆ ಆಧಾರವಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.
ಪ್ರಧಾನಮಂತ್ರಿ ಅವರು ಉಭಯ ಪಕ್ಷಗಳ ನಡುವಿನ ಮಾತುಕತೆಯನ್ನು ಸ್ವಾಗತಿಸಿದರು ಮತ್ತು ಎಲ್ಲಾ ಜನರ ಉಚಿತ ಮತ್ತು ತಡೆರಹಿತ ಮಾನವೀಯ ಪ್ರವೇಶ ಮತ್ತು ಸುಗಮ ಸಂಚಾರವನ್ನು ಖಾತ್ರಿಪಡಿಸುವ ಮಹತ್ವವನ್ನು ಈ ವೇಳೆ ಒತ್ತಿ ಹೇಳಿದರು.
ಯುದ್ದ ಪೀಡಿತ ಪ್ರದೇಶಗಳಿಗೆ ಔಷಧಗಳು ಸೇರಿದಂತೆ ತುರ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಭಾರತವು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಪ್ರಧಾನಮಂತ್ರಿ ವಿವರಿದರು.