ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಎಚ್.ಇ. ಎಮ್ಯಾನುಯೆಲ್ ಮ್ಯಾಕ್ರನ್ ಜತೆ ದೂರವಾಣಿ ಮೂಲಕ ಮಾತನಾಡಿದರು.
ಉಕ್ರೇನ್‌ನಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಕುರಿತು ಉಭಯ ನಾಯಕರು ಚರ್ಚಿಸಿದರು. ಉಭಯ ನಾಯಕರು, ಮುಂದುವರಿದ ಹಗೆತನ ಮತ್ತು ಉಕ್ರೇನ್‌ನಲ್ಲಿ ಹದಗೆಡುತ್ತಿರುವ ಮಾನವೀಯ ಪರಿಸ್ಥಿತಿಯ ಬಗ್ಗೆ ತಮ್ಮ ಕಳವಳಗಳನ್ನು ಹಂಚಿಕೊಂಡರು.
ಯುದ್ಧವನ್ನು ನಿಲ್ಲಿಸಲು ಮತ್ತು ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಮರಳಲು ಭಾರತದ ನಿರಂತರ ಮನವಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಪುನರುಚ್ಚರಿಸಿದರು. ಅಂತಾರಾಷ್ಟ್ರೀಯ ಕಾನೂನು, ಯುಎನ್ ಚಾರ್ಟರ್(ಸನ್ನದು) ಮತ್ತು ಎಲ್ಲಾ ರಾಜ್ಯಗಳ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ಗೌರವಿಸುವುದು ಸಮಕಾಲೀನ ವಿಶ್ವ ಕ್ರಮಕ್ಕೆ ಆಧಾರವಾಗಿದೆ ಎಂಬ ಭಾರತದ ನಂಬಿಕೆಯನ್ನು ಅವರು ಒತ್ತಿ ಹೇಳಿದರು.
ಪ್ರಧಾನಮಂತ್ರಿ ಅವರು ಉಭಯ ಪಕ್ಷಗಳ ನಡುವಿನ ಮಾತುಕತೆಯನ್ನು ಸ್ವಾಗತಿಸಿದರು ಮತ್ತು ಎಲ್ಲಾ ಜನರ ಉಚಿತ ಮತ್ತು ತಡೆರಹಿತ ಮಾನವೀಯ ಪ್ರವೇಶ ಮತ್ತು ಸುಗಮ ಸಂಚಾರವನ್ನು ಖಾತ್ರಿಪಡಿಸುವ ಮಹತ್ವವನ್ನು ಒತ್ತಿ ಹೇಳಿದರು.
ಸಂಘರ್ಷದ ಪ್ರದೇಶಗಳಿಂದ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಮತ್ತು ಯುದ್ಧ ಪೀಡಿತ ಜನಸಂಖ್ಯೆಗೆ ಔಷಧಗಳು ಸೇರಿದಂತೆ ತುರ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಭಾರತದ ಪ್ರಯತ್ನಗಳ ಬಗ್ಗೆ ಪ್ರಧಾನ ಮಂತ್ರಿ ಅವರು ಅಧ್ಯಕ್ಷ ಮ್ಯಾಕ್ರನ್ ಅವರಿಗೆ ವಿವರಿಸಿದರು.