ಜಾರ್ಖಂಡ್ನ ಪಾಕುರ್ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಸಾವು-ನೋವುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು, ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.
ಪ್ರಧಾನ ಮಂತ್ರಿ ಕಾರ್ಯಾಲಯ ಸರಣಿ ಟ್ವೀಟ್ ಗಳಲ್ಲಿ ಹೀಗೆ ಹೇಳಿದೆ:
"ಜಾರ್ಖಂಡ್ನ ಪಾಕುರ್ನಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ನಾನು ದುಃಖಿತನಾಗಿದ್ದೇನೆ. ಈ ನೋವಿನ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುವೆ: ಪ್ರಧಾನಿ ನರೇಂದ್ರ ಮೋದಿ@narendramodi"
"ಪಾಕುರ್ನಲ್ಲಿಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ʻಪಿಎಂಎನ್ಆರ್ಎಫ್ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು."
An ex-gratia of Rs. 2 lakh each from PMNRF would be given to the next of kin of those who lost their lives in an accident in Pakur. The injured would be given Rs. 50,000: PM @narendramodi
— PMO India (@PMOIndia) January 5, 2022