ಮಣಿಪುರದ ನೋನಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಬಸ್ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ 2 ಲಕ್ಷರೂ. ಮತ್ತು ಗಾಯಗೊಂಡವರಿಗೆ 50,000 ರೂ.ಪರಿಹಾರವನ್ನು ಅವರು ಘೋಷಿಸಿದ್ದಾರೆ.
ಈ ಕುರಿತು ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ;
"ಮಣಿಪುರದ ನೋನಿ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ತೀವ್ರ ದುಃಖವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ. ಮಣಿಪುರ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಿ @narendramodi"
"ಬಸ್ ಅಪಘಾತದಲ್ಲಿ ಮೃತಪಟ್ಟವರ ನಿಕಟ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್ ನಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಿ @narendramodi"
Anguished by the loss of lives in Manipur's Noney district due to a tragic bus accident. My thoughts are with the bereaved families. I hope the injured recover soon. The Manipur government is providing all possible assistance to those affected: PM @narendramodi
— PMO India (@PMOIndia) December 21, 2022