ಕರ್ನಾಟಕದ ಹುಬ್ಬಳ್ಳಿಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವ ಹಾನಿಯಾಗಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜೀವ ಹಾನಿಯಾಗಿರುವ ಕುಟುಂಬದ ನಿಕಟ ಸಂಬಂಧಿಗಳಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ತಾತ್ಕಾಲಿಕ ಪರಿಹಾರ ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ಪ್ರಧಾನ ಮಂತ್ರಿ ಅವರು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿ ಅವರ ಕಚೇರಿ ಈ ಬಗ್ಗೆ ಟ್ವೀಟ್ ಮಾಡಿದ್ದು ಅದರಲ್ಲಿ;
"ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ಅವಘಡದಲ್ಲಿ ಜೀವ ಹಾನಿಯಾಗಿರುವುದು ತೀವ್ರವಾದ ನೋವು ತಂದಿದೆ. ಸಂತ್ರಸ್ತರ ಕುಟುಂಬಕ್ಕೆ ನನ್ನ ಸಂತಾಪಗಳು.ಗಾಯಾಳುಗಳು ಬೇಗ ಗುಣಮುಖರಾಗುವಂತಾಗಲಿ:PM @narendramodi" ಎಂದು ಹೇಳಿದ್ದಾರೆ.
Pained by the loss of lives due to a mishap in Hubli, Karnataka. My thoughts are with the bereaved families. May the injured recover soon: PM @narendramodi
— PMO India (@PMOIndia) May 24, 2022
ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಜೀವ ಹಾನಿಯಾಗಿರುವುದು ನೋವುತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ: ಪ್ರಧಾನಮಂತ್ರಿ @narendramodi
— PMO India (@PMOIndia) May 24, 2022
ಹುಬ್ಬಳ್ಳಿಯಲ್ಲಿ ಸಂಭವಿಸಿದ ದುರ್ಘಟನೆಯಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಗಳಿಗೆ ಪಿಎಂಎನ್ಆರ್ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೂ ತಲಾ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi
— PMO India (@PMOIndia) May 24, 2022