ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಜ್ಮೇರ್ ಷರೀಫ್ ನ ಖ್ವಾಜಾ ಮೊಯಿನುದ್ದೀನ್ ಚಿಸ್ತಿಯಲ್ಲಿ ಸಮರ್ಪಿಸಲು ಛಾದರ್ ಅನ್ನು ಅಲ್ಪ ಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಶ್ರೀ ಮುಕ್ತಾರ್ ಅಬ್ಬಾಸ್ ನಖ್ವಿ ಅವರಿಗೆ ಇಂದು ಹಸ್ತಾಂತರಿಸಿದರು.
ವಾರ್ಷಿಕ ಉರುಸ್ ಸಂದರ್ಭದಲ್ಲಿ ಪ್ರಧಾನಿಯವರು ವಿಶ್ವದಾದ್ಯಂತ ಇರುವ ಖ್ವಾಜಾ ಮೊಯಿನುದ್ದೀನ್ ಚಿಸ್ತಿಯ ಅನುಯಾಯಿಗಳಿಗೆ ಶುಭಾಶಯಗಳನ್ನು ತಿಳಿಸಿದರು.