PM Modi describes India’s democratic system of governance as a great teacher, which inspires over 125 crore people
The teachings of the Vedas, which describe the entire world as one nest, or one home, are reflected in the values of Visva Bharati University: PM
India and Bangladesh are two nations, whose interests are linked to mutual cooperation and coordination among each other: PM Modi
Gurudev Rabindranath Tagore is respected widely across the world; he is a global citizen: PM Modi
Institutions such as Visva Bharati University have a key role to play in the creation of a New India by 2022: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಪಶ್ಚಿಮಬಂಗಾಳದ ಶಾಂತಿನಿಕೇತನಕ್ಕೆ ಭೇಟಿ ನೀಡಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಾಂತಿಕೇತನದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸ್ವಾಗತಿಸಿದರು. ಇಬ್ಬರೂ ಗುರುದೇವ ರವೀಂದ್ರನಾಥ ಠಾಗೂರ್ ಗೆ ನಮನ ಸಲ್ಲಿಸಿ, ನಂತರ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದರು. ಬಳಿಕ ಉಭಯ ನಾಯಕರು ವಿಶ್ವ ಭಾರತಿ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದರು. 

ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತ ಒಂದು ಶ್ರೇಷ್ಠ ಗುರುವಾಗಿದೆ, ಅದು 125 ಕೋಟಿ ಜನರಿಗೆ ಸ್ಪೂರ್ತಿ ತುಂಬುತ್ತಿದೆ ಎಂದು ಬಣ್ಣಿಸಿದರು. ಗುರುದೇವ ರವೀಂದ್ರನಾಥ ಠಾಗೂರ್ ಅವರಂತಹ ಶ್ರೇಷ್ಠ ವ್ಯಕ್ತಿ ಇಂತಹ ಪವಿತ್ರ ಭೂಮಿಯಲ್ಲಿ ನೆಲೆಸಿದ್ದರು ಎನ್ನುವುದು ಒಳ್ಳೆಯ ಸೌಭಾಗ್ಯ ಎಂದರು. 

 

ಪ್ರಧಾನಿ ಇಂದು ಪದವಿಗಳನ್ನು ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಅವರು ಈ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದವರು ಕೇವಲ ಪದವಿಗಳನ್ನು ಗಳಿಸುವುದಿಲ್ಲ, ಶ್ರೇಷ್ಠ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವವರಾಗಿದ್ದಾರೆ ಎಂದರು. 

 

ವೇದಗಳ ಅಧ್ಯಯನದಿಂದ ಇಡೀ ವಿಶ್ವವೇ ಒಂದು ಗೂಡು ಅಥವಾ ಒಂದು ಮನೆ ಎಂಬುದು ತಿಳಿಯುತ್ತದೆ, ಅಂತಹ ಮೌಲ್ಯಗಳನ್ನು ವಿಶ್ವ ಭಾರತಿ ವಿಶ್ವವಿದ್ಯಾಲಯ ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಹೇಳಿದರು. 

 

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ ಭಾರತ ಮತ್ತು ಬಾಂಗ್ಲಾದೇಶ ಎರಡು ರಾಷ್ಟ್ರಗಳಾಗಿದ್ದು, ಉಭಯ ದೇಶಗಳ ಜನರ ನಡುವೆ ಪರಸ್ಪರ ಸಹಕಾರ ಮತ್ತು ಸಮನ್ವಯತೆ ಇದೆ. ಎರಡೂ ದೇಶಗಳ ಹಿತಾಸಕ್ತಿ ಒಂದೇ ಆಗಿದೆ ಎಂದರು. 

ಗುರುದೇವ ರವೀಂದ್ರನಾಥ ಠಾಗೂರ್ ಅವರನ್ನು ಇಡೀ ವಿಶ್ವವೇ ಗೌರವಿಸುತ್ತದೆ ಎಂದು ಪ್ರಧಾನಿ ಹೇಳಿದರು. ಮೂರು ವರ್ಷಗಳ ಹಿಂದೆ ತಜಕೀಸ್ತಾನದಲ್ಲಿ ಗುರುದೇವ ರವೀಂದ್ರನಾಥ ಠಾಗೂರ್ ಅವರ ಪ್ರತಿಮೆ ಅನಾವರಣಕ್ಕೆ ಅವಕಾಶ ಸಿಕ್ಕಿತ್ತು ಎಂದು ನೆನಪು ಮಾಡಿಕೊಂಡ ಪ್ರಧಾನಿ, ಠಾಗೂರ್ ಎನ್ನುವ ವಿಷಯ ವಿಶ್ವದಾದ್ಯಂತ ಇಂದು ಅಧ್ಯಯನದ ವಿಷಯವಾಗಿದೆ. ಗುರುದೇವ ಅವರು ಜಾಗತಿಕ ಪ್ರಜೆಯಾಗಿದ್ದಾರೆ ಎಂದು ಬಣ್ಣಿಸಿದರು. 

 

ಗುರುದೇವ ರವೀಂದ್ರನಾಥ ಠಾಗೂರ್ ಅವರು ಸದಾ ಭಾರತೀಯ ವಿದ್ಯಾರ್ಥಿಗಳು ವಿಶ್ವದಾದ್ಯಂತ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ನಿಗಾವಹಿಸಬೇಕು ಜತೆಗೆ ಭಾರತೀಯತೆಯನ್ನು ಹಾಗೆಯೇ ಉಳಿಸಿಕೊಳ್ಳಬೇಕೆಂದು ಬಯಸಿದ್ದರು ಎಂದು ಪ್ರಧಾನಿ ಹೇಳಿದರು. ವಿಶ್ವಭಾರತಿ ವಿಶ್ವವಿದ್ಯಾಲಯ ಸಮೀಪದ ಹಳ್ಳಿಗಳಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೈಗೊಂಡಿರುವ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ, ವಿಶ್ವವಿದ್ಯಾಲಯ ಈ ಪ್ರಯತ್ನಗಳನ್ನು 2021ರ ಶತಮಾನೋತ್ಸವದ ವೇಳೆಗೆ ನೂರು ಗ್ರಾಮಗಳಿಗೆ ವಿಸ್ತರಿಸಬೇಕು. ಆ ನೂರು ಗ್ರಾಮಗಳ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಕಾರ್ಯೋನ್ಮುಖವಾಗಬೇಕು ಎಂದು ಪ್ರಧಾನಿ ಕರೆ ನೀಡಿದರು. 

 

2020ರ ವೇಳೆಗೆ ನವಭಾರತ ನಿರ್ಮಾಣ ನಿಟ್ಟಿನಲ್ಲಿ ವಿಶ್ವಭಾರತಿ ವಿಶ್ವವಿದ್ಯಾಲಯ ಅತ್ಯಂತ ಪ್ರಮುಖ ಪಾತ್ರವಹಿಸುಬೇಕು ಎಂದ ಪ್ರಧಾನಮಂತ್ರಿ, ಶಿಕ್ಷಣ ಕ್ಷೇತ್ರದಲ್ಲಿ ಭಾರತ ಸರ್ಕಾರ ಕೈಗೊಂಡಿರುವ ಹಲವು ಕಾರ್ಯಕ್ರಮಗಳನ್ನು ವಿವರಿಸಿದರು. 

 

ಬಾಂಗ್ಲಾದೇಶ ಭವನ ಉದ್ಘಾಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಭವನ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಾಂಸ್ಕೃತಿಕ ಸಂಬಂಧಗಳ ಸಂಕೇತವಾಗಿದೆ ಎಂದು ಬಣ್ಣಿಸಿದರು. ಅತ್ಯಂತ ಪವಿತ್ರ ನೆಲದಲ್ಲಿರುವ ಈ ವಿಶ್ವವಿದ್ಯಾಲಯಕ್ಕೆ ಭಾರತ ಮತ್ತು ಬಾಂಗ್ಲಾದೇಶಗಳ ಸ್ವಾತಂತ್ರ್ಯ ಹೋರಾಟದ ಇತಿಹಾಸವಿದೆ. ಉಭಯ ದೇಶಗಳ ಪರಂಪರೆಯ ಸಂಕೇತ ಇದಾಗಿದೆ ಎಂದು ಪ್ರಧಾನಿ ಹೇಳಿದರು. 

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಬಂಗಬಂಧು ಶೇಖ್ ಮುಜಿಬರ್ ರೆಹಮಾನ್ ಅವರನ್ನು ಸಮಾನವಾಗಿ ಗೌರವಿಸಲಾಗುತ್ತಿದೆ, ಅದೇ ರೀತಿ ನೇತಾಜಿ ಸುಭಾಷ್ ಚಂದ್ರ ಬೋಸ್, ಸ್ವಾಮಿ ವಿವೇಕಾನಂದ ಮತ್ತು ಮಹಾತ್ಮ ಗಾಂಧೀಜಿ ಅವರುಗಳನ್ನು ಭಾರತದಲ್ಲಿ ಎಷ್ಟು ಗೌರವಿಸಲಾಗುತ್ತಿದೆಯೋ ಬಾಂಗ್ಲಾದೇಶದಲ್ಲಿ ಕೂಡ ಅಷ್ಟೇ ಗೌರವದಿಂದ ಕಾಣಲಾಗುತ್ತಿದೆ ಎಂದರು. 

ಅದೇ ರೀತಿ ಗುರುದೇವ ರವೀಂದ್ರನಾಥ ಠಾಗೂರ್ ಅವರು ಭಾರತಕ್ಕಿಂತ ಹೆಚ್ಚಾಗಿ ಬಾಂಗ್ಲಾದೇಶಕ್ಕೆ ಸೇರಿದವರು ಎಂಬ ನಂಬಿಕೆ ಇದೆ. ಗುರುದೇವ ರವೀಂದ್ರನಾಥ ಠಾಗೂರ್ ಅವರ ವಿಶ್ವ ಮಾನವ ಸಿದ್ಧಾಂತ ಕೇಂದ್ರ ಸರ್ಕಾರದ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಸಿದ್ಧಾಂತದಲ್ಲಿ ಪ್ರತಿಫಲನಗೊಂಡಿದೆ. ಅದು ಮಾರ್ಗದರ್ಶಿ ಸೂತ್ರವನ್ನಾಗಿ ಪಾಲಿಸಲಾಗುತ್ತಿದೆ. ಭಾರತ ಮತ್ತು ಬಾಂಗ್ಲಾದೇಶ ಎರಡೂ ರಾಷ್ಟ್ರಗಳು ಹಿಂಸೆ ಮತ್ತು ಭಯೋತ್ಪಾದನೆ ವಿರುದ್ಧ ಹೋರಾಡುವ ಪಣ ತೊಟ್ಟಿವೆ, ಬಾಂಗ್ಲಾದೇಶ ಭವನ ಮೂಲಕ ಮುಂದಿನ ತಲೆಮಾರುಗಳಿಗೆ ಸ್ಫೂರ್ತಿ ದೊರಕಲಿದೆ ಎಂದರು. ಕಳೆದ ವರ್ಷ ನವದೆಹಲಿಯಲ್ಲಿ ಬಾಂಗ್ಲಾದೇಶದಿಂದ ಭಾರತೀಯ ಯೋಧರನ್ನು ಗೌರವಿಸಿದ್ದನ್ನು ಪ್ರಧಾನಿ ಸ್ಮರಿಸಿದರು. 

ಕಳೆದ ಕೆಲವು ವರ್ಷಗಳಿಂದೀಚೆಗೆ ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಸುವರ್ಣಯುಗ ಎಂದು ಬಣ್ಣಿಸಲಾಗುತ್ತದೆ. ಗಡಿ ವಿವಾದ ಮತ್ತು ಸಂಪರ್ಕ ಯೋಜನೆಗಳು ಸೇರಿದಂತೆ ಹಲವು ವಿಷಯಗಳ ಇತ್ಯರ್ಥಕ್ಕೆ ಕೈಗೊಂಡಿರುವ ಪರಿಹಾರಗಳನ್ನು ಪ್ರಧಾನಿ ಉಲ್ಲೇಖಿಸಿದರು. 

 

ಉಭಯ ದೇಶಗಳು ಒಂದೇ ಬಗೆಯ ಗುರಿಗಳನ್ನು ಹೊಂದಿವೆ ಎಂದು ಪ್ರತಿಪಾದಿಸಿದ ಅವರು, ಆ ಗುರಿಗಳನ್ನು ಸಾಧಿಸಲು ಒಂದೇ ರೀತಿಯ ಮಾರ್ಗವನ್ನು ಅನುಸರಿಸುತ್ತಿವೆ ಎಂದರು. 

 

 

 

 

 

 

 

 

 

 

 

 

 

 

 

 

 

Click here to read full text speech at Visva Bharti University

Click here to read full text speech at Bangladesh Bhavan

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India’s Biz Activity Surges To 3-month High In Nov: Report

Media Coverage

India’s Biz Activity Surges To 3-month High In Nov: Report
NM on the go

Nm on the go

Always be the first to hear from the PM. Get the App Now!
...
PM to participate in ‘Odisha Parba 2024’ on 24 November
November 24, 2024

Prime Minister Shri Narendra Modi will participate in the ‘Odisha Parba 2024’ programme on 24 November at around 5:30 PM at Jawaharlal Nehru Stadium, New Delhi. He will also address the gathering on the occasion.

Odisha Parba is a flagship event conducted by Odia Samaj, a trust in New Delhi. Through it, they have been engaged in providing valuable support towards preservation and promotion of Odia heritage. Continuing with the tradition, this year Odisha Parba is being organised from 22nd to 24th November. It will showcase the rich heritage of Odisha displaying colourful cultural forms and will exhibit the vibrant social, cultural and political ethos of the State. A National Seminar or Conclave led by prominent experts and distinguished professionals across various domains will also be conducted.