ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಮಟೆಮೆಲಾ ಸಿರಿಲ್ ರಾಮಾಫೋಸಾ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು.
ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಎದುರಿಸುತ್ತಿರುವ ಸವಾಲುಗಳು ಹಾಗೂ ಆಯಾ ದೇಶಗಳಲ್ಲಿ ಕೈಗೊಂಡಿರುವ ಲಸಿಕಾ ಅಭಿಯಾನಗಳ ಬಗ್ಗೆ ಬಗ್ಗೆ ಉಭಯ ನಾಯಕರು ಚರ್ಚಿಸಿದರು.
ಔಷಧಗಳು ಮತ್ತು ಲಸಿಕೆಗಳಲ್ಲಿ ಭಾರತಕ್ಕಿರುವ ಗಣನೀಯ ಉತ್ಪಾದಕ ಸಾಮರ್ಥ್ಯವು ಆಫ್ರಿಕಾ ಸೇರಿದಂತೆ ಎಲ್ಲಾ ದೇಶಗಳ ಅಗತ್ಯತೆಗಳನ್ನು ಪೂರೈಸುತ್ತದೆ ಎಂದು ದಕ್ಷಿಣ ಆಫ್ರಿಕಾದ ಅಧ್ಯಕ್ಷರಿಗೆ ಪ್ರಧಾನಿ ಪುನರುಚ್ಚರಿಸಿದರು.
ಲಸಿಕೆಗಳು ಮತ್ತು ಔಷಧಿಗಳ ಲಭ್ಯತೆ ಮತ್ತು ಕೈಗೆಟುಕುವಿಕೆಯನ್ನು ಸುಲಭಗೊಳಿಸಲು ವಿವಿಧ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸಹಯೋಗದ ಸಾಧ್ಯತೆಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದರು.
ಪರಸ್ಪರರ ಅನುಭವಗಳನ್ನು ಹಂಚಿಕೊಳ್ಳಲು ಮತ್ತು ಸಾಂಕ್ರಾಮಿಕ ರೋಗದ ವಿರುದ್ಧ ಸಹಯೋಗದ ಸಾಮರ್ಥ್ಯವನ್ನು ಅನ್ವೇಷಿಸಲು ಮುಂಬರುವ ದಿನಗಳಲ್ಲಿ ಎರಡೂ ದೇಶಗಳ ಅಧಿಕಾರಿಗಳು ಸಂಪರ್ಕದಲ್ಲಿರುವ ಬಗ್ಗೆ ಇಬದ್ಬರೂ ನಾಯಕರು ಸಮ್ಮತಿ ಸೂಚಿಸಿದರು.