ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ತ್ರಿವೇಂದ್ರ ಸಿಂಗ್ ರಾವತ್ ಅವರೊಂದಿಗೆ ಮಾತಕತೆ ನಡೆಸಿ, ಉತ್ತರಾಖಂಡದ ಪರಿಸ್ಥಿತಿಯ ಬಗ್ಗೆ ಪರಾಮರ್ಶಿಸಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್ ನಲ್ಲಿ “ಉತ್ತರಾಖಂಡದ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಸ್ಸಾಂನಲ್ಲಿದ್ದಾಗ ಪರಿಶೀಲನೆ ನಡೆಸಿದರು. ಅವರು ಮುಖ್ಯಮಂತ್ರಿ ಟಿಎಸ್ ರಾವತ್ ಅವರೊಂದಿಗೆ ಮತ್ತು ಇತರೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಪ್ರಗತಿಯಲ್ಲಿರುವ ಕುರಿತು ಅವರು ಮಾಹಿತಿಯನ್ನು ಪಡೆದುಕೊಂಡರು. ಸಂತ್ರಸ್ತರಿಗೆ ಎಲ್ಲ ರೀತಿಯ ಸಾಧ್ಯವಾದ ನೆರವು ನೀಡಲು ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ” ಎಂದು ತಿಳಿಸಿದೆ.
While in Assam, PM @narendramodi reviewed the situation in Uttarakhand. He spoke to CM @tsrawatbjp and other top officials. He took stock of the rescue and relief work underway. Authorities are working to provide all possible support to the affected.
— PMO India (@PMOIndia) February 7, 2021
ಮತ್ತೊಂದು ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು, “ಉತ್ತರಾಖಂಡದ ದುರದೃಷ್ಟಕರ ಸ್ಥಿತಿಯ ಬಗ್ಗೆ ನಿರಂತರವಾಗಿ ನಾನು ನಿಗಾವಹಿಸುತ್ತಿದ್ದೇನೆ. ಭಾರತ, ಉತ್ತರಾಖಂಡದ ಜೊತೆಗೆ ನಿಲ್ಲುತ್ತದೆ ಮತ್ತು ರಾಷ್ಟ್ರ ಪ್ರತಿಯೊಬ್ಬರ ಸುರಕ್ಷತೆಗೆ ಪ್ರಾರ್ಥಿಸುತ್ತದೆ. ನಾನು ನಿರಂತರವಾಗಿ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚಿಸುತ್ತಿದ್ದೇನೆ ಮತ್ತು ಎನ್ ಡಿಆರ್ ಎಫ್ ನಿಯೋಜನೆ, ರಕ್ಷಣಾ ಕಾರ್ಯ ಮತ್ತು ಪರಿಹಾರ ಕಾರ್ಯಾಚರಣೆಗಳ ಬಗ್ಗೆ ಪ್ರತಿಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೇನೆ.” ಎಂದು ಹೇಳಿದ್ದಾರೆ.
Am constantly monitoring the unfortunate situation in Uttarakhand. India stands with Uttarakhand and the nation prays for everyone’s safety there. Have been continuously speaking to senior authorities and getting updates on NDRF deployment, rescue work and relief operations.
— Narendra Modi (@narendramodi) February 7, 2021