ಅಮೆರಿಕ ಅಧ್ಯಕ್ಷ ಘನತೆವೆತ್ತ ಶ್ರೀ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ಕೋರಿದರು.
ಪ್ರಧಾನಮಂತ್ರಿ ಅವರು ಅಧ್ಯಕ್ಷ ಶ್ರೀ ಟ್ರಂಪ್, ಅವರ ಕುಟುಂಬ ಮತ್ತು ಯು ಎಸ್ ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಮತ್ತು ಯಶಸ್ಸು ದೊರಕಲಿ ಎಂದು ಹಾರೈಸಿದರು
ಪರಸ್ಪರ ವಿಶ್ವಾಸ, ಪರಸ್ಪರ ಗೌರವ ಮತ್ತು ತಿಳುವಳಿಕೆಯ ಮೇಲೆ ನಿರ್ಮಿಸಲಾಗಿರುವ ಭಾರತ-ಯು ಎಸ್ ಸಂಬಂಧಗಳು ಬಲವರ್ಧನೆಯಿಂದ ಸದೃಢವಾಗಿ ಬೆಳೆದಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ. ಹಿಂದಿನ ವರ್ಷದಲ್ಲಿ ಉಭಯ ದೇಶಗಳ ನಡುವಿನ ವ್ಯೂಹಾತ್ಮಕ ಕಾರ್ಯತಂತ್ರದ ಸಹಭಾಗಿತ್ವಗಳಲ್ಲಿ ಮಹತ್ವದ ಪ್ರಗತಿ ಸಾಧನೆಯನ್ನು ಪ್ರಧಾನಮಂತ್ರಿ ಈ ಸಂದರ್ಭದಲ್ಲಿ ನೆನಪಿಸಿದರು ಮತ್ತು ಪರಸ್ಪರ ಹಿತಾಸಕ್ತಿಯ ಎಲ್ಲ ಕ್ಷೇತ್ರಗಳಲ್ಲಿ ಸಹಕಾರಗಳನ್ನು ಹೆಚ್ಚಿಸಲು ಅಧ್ಯಕ್ಷ ಶ್ರೀ ಟ್ರಂಪ್ ಅವರೊಂದಿಗೆ ಕೆಲಸ ಮುಂದುವರಿಸುವ ಆಶಯ ವ್ಯಕ್ತಪಡಿಸಿದರು.
ಹೊಸ ವರ್ಷದ ಸಂದರ್ಭದಲ್ಲಿ ಅಧ್ಯಕ್ಷ ಶ್ರೀ ಟ್ರಂಪ್ ಅವರು ಭಾರತದ ಜನರಿಗೆ ಸಮೃದ್ಧಿ ಮತ್ತು ಪ್ರಗತಿಯ ಶುಭ ಹಾರೈಸಿದರು. ಕಳೆದ ಕೆಲವು ವರ್ಷಗಳಲ್ಲಿ ಈ ಎರಡೂ ದೇಶಗಳ ಪರಸ್ಪರ ಸಂಬಂಧಗಳಲ್ಲಿ ಅಭಿವೃದ್ಧಿ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದ ಅವರು ದ್ವಿಪಕ್ಷೀಯ ಸಹಕಾರವನ್ನು ಮುಂದಿನ ದಿನಗಳಲ್ಲಿ ಇನ್ನಷ್ಟೂ ಸದೃಢವಾಗಿಸಲು ಸಿದ್ಧ ಎಂದು ಪುನರುಚ್ಚರಿಸಿದರು.