ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಳೆ 2020ರ ಜನವರಿ 3ರಂದು ಶುಕ್ರವಾರ ಬೆಂಗಳೂರಿನ, ಜಿಕೆವಿಕೆ, ಕೃಷಿ ವಿಶ್ವವಿದ್ಯಾಲಯದಲ್ಲಿ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ ಮತ್ತು ಐ ಸ್ಟೆಮ್ ಪೋರ್ಟಲ್ ಅನ್ನು ಇದೇ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಾ. ಹರ್ಷವರ್ಧನ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿರುತ್ತಾರೆ.
ಈ ಬಾರಿಯ ಭಾರತೀಯ ವಿಜ್ಞಾನ ಕಾಂಗ್ರೆಸ್ ನ (ಐ.ಎಸ್.ಸಿ.) ವಿಷಯ “ವಿಜ್ಞಾನ ಮತ್ತು ತಂತ್ರಜ್ಞಾನ: ಗ್ರಾಮೀಣಾಭಿವೃದ್ಧಿ’ ಎಂಬುದಾಗಿದೆ. ನೋಬೆಲ್ ಪ್ರಶಸ್ತಿ ಪುರಸ್ಕೃತರು, ವಿಜ್ಞಾನಿಗಳು, ವಿದ್ವಾಂಸರು, ಶಿಕ್ಷಣತಜ್ಞರು, ನೀತಿ ನಿರೂಪಕರು, ವಿದ್ಯಾರ್ಥಿಗಳು ಮತ್ತು ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಸೇರಿ 15 ಸಾವಿರಕ್ಕೂ ಹೆಚ್ಚು ಜನರು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದ ಸಂಪೂರ್ಣ ವಿವರ ಮೊಬೈಲ್ ಆಪ್ “ISC 2020 UASB” ನಲ್ಲಿ ಲಭ್ಯ.
ಈ ಆಪ್ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯ.
https://play.google.com/store/apps/details?id=com.indiansciencecongress&hl=en_IN.