ಭಾರತದ ಸಂವಿಧಾನ ಅಂಗೀಕರಿಸಿ 75 ವರ್ಷಗಳು ಪೂರ್ಣಗೊಂಡಿರುವ ಮಹತ್ವದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 26ರಂದು ಸುಪ್ರೀಂ ಕೋರ್ಟ್‌ನ ಆಡಳಿತಾತ್ಮಕ ಕಟ್ಟಡ ಸಂಕೀರ್ಣ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಆಯೋಜಿಸಿರುವ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಭಾರತೀಯ ನ್ಯಾಯಾಂಗದ(2023-24) ವಾರ್ಷಿಕ ವರದಿ ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.
ಭಾರತದ ಸುಪ್ರೀಂ ಕೋರ್ಟ್ ಕಾರ್ಯಕ್ರಮ ಆಯೋಜಿಸುತ್ತಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳು ಮತ್ತು ಸುಪ್ರೀಂ ಕೋರ್ಟ್‌ನ ಇತರೆ ನ್ಯಾಯಾಧೀಶರು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.