ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಂಗಳವಾರ ಹಿಮಾಚಲ ಪ್ರದೇಶದ ಬಿಲಾಸ್ಪುರ್ ಗೆ ಭೇಟಿ ನೀಡಲಿದ್ದಾರೆ.
ಪ್ರಧಾನಮಂತ್ರಿಯವರು ಬಿಲಾಸಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎ.ಐ.ಐ.ಎಂ.ಎಸ್.)ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 750 ಹಾಸಿಗೆಗಳ ಈ ಆಸ್ಪತ್ರೆಯನ್ನು ಅಂದಾಜು 1350 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಆರೋಗ್ಯ ರಕ್ಷಣೆಯ ಜೊತೆಗೆ, ಇದು ನರ್ಸಿಂಗ್ ಜೊತೆಗೆ ಸ್ನಾತಕ ಮತ್ತು ಸ್ನಾತಕೋತ್ತರ ಮಟ್ಟದಲ್ಲಿ ವೈದ್ಯಕೀಯ ಶಿಕ್ಷಣವನ್ನೂ ಒದಗಿಸುತ್ತದೆ.
ಉನಾದಲ್ಲಿ ಪ್ರಧಾನಮಂತ್ರಿಯವರು ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಶ್ರೀ ನರೇಂದ್ರ ಮೋದಿ ಅವರು ಕಂಗ್ರಾದ ಕಂಡ್ರೋರಿಯಲ್ಲಿ ಭಾರತೀಯ ಉಕ್ಕು ಪ್ರಾಧಿಕಾರ ನಿಯಮಿತ (ಎಸ್.ಎ.ಐ.ಎಲ್.)ದ ಉಕ್ಕು ಸಂಸ್ಕರಣ ಘಟಕವನ್ನೂ ಉದ್ಘಾಟಿಸಲಿದ್ದಾರೆ.
ನಂತರ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.