ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2020 ಜನವರಿ 2 ಮತ್ತು 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ತುಮಕೂರಿನಲ್ಲಿ ಅವರು ಶ್ರೀ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ, ಅಲ್ಲಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸ್ಮಾರಕ ವಸ್ತುಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸುವ ಸಲುವಾಗಿ ಫಲಕ ಅನಾವರಣ ಮಾಡಲಿದ್ದಾರೆ
ಮಠದಲ್ಲಿ ಪ್ರಾರ್ಥನೆ ಸಲ್ಲಿಸಲಿರುವ ಪ್ರಧಾನಮಂತ್ರಿಯವರು ಸಸಿಯನ್ನೂ ನೆಡಲಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಮತ್ತು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಸೇರಿದಂತೆ ಇತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ.
ಪ್ರಧಾನಮಂತ್ರಿಯವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.