ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಳೆ 29-10-2017 ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಒಂದು ದಿನದ ಈ ಭೇಟಿಯ ವೇಳೆ ಅವರು ಮೂರು ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡಲಿದ್ದಾರೆ.
ನಾಳೆ ಅವರು ತಮ್ಮ ಭೇಟಿಯನ್ನು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಆರಂಭಿಸಲಿದ್ದಾರೆ. ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುವ ಅವರು, ಉಜಿರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ಫಲಾನುಭವಿಗಳಿಗೆ “ರೂಪೆ ಕಾರ್ಡ್” ವಿತರಿಸಲಿದ್ದಾರೆ. ಇದು ಸ್ವ ಸಹಾಯ ಗುಂಪುಗಳಿಗೆ ನಗದು ರಹಿತ ಡಿಜಿಟಲ್ ವಹಿವಾಟು ನಡೆಸಲು ಅವಕಾಶ ನೀಡುತ್ತದೆ.
ನಂತರ ಪ್ರಧಾನಿಯವರು ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ, ಅಲ್ಲಿ ಅವರು ಸೌಂದರ್ಯಲಹರಿ ಪಾರಾಯಣೋತ್ಸವ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ.
ಆದಿ ಶಂಕರಾಚಾರ್ಯರು ರಚಿಸಿದ ಶ್ಲೋಕಗಳೇ “ಸೌಂದರ್ಯ ಲಹರಿ”. ಏಕಸ್ಥಾಯಿಯಲ್ಲಿ ಈ ಶ್ಲೋಕಗಳನ್ನು ಸಾಮೂಹಿಕವಾಗಿ ಪಠಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಂತರ ಬೀದರ್ ಗೆ ತೆರಳುವ ಪ್ರಧಾನಮಂತ್ರಿಯವರು, ಬೀದರ್ – ಕಲ್ಬುರ್ಗಿ ನೂತನ ರೈಲು ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಅವರುಬೀದರ್ನಸಾರ್ವಜನಿಕ ಸಭೆಯಲ್ಲೂ ಮಾತನಾಡಲಿದ್ದಾರೆ.