ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಫೆಬ್ರವರಿ 18 ಮತ್ತು 19ರಂದು ಮಹಾರಾಷ್ಟ್ರ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಫೆಬ್ರವರಿ 18ರಂದು ಮಧ್ಯಾಹ್ನ ಪ್ರಧಾನಿಯವರು ಮುಂಬೈಗೆ ಆಗಮಿಸಲಿದ್ದಾರೆ. ಅಲ್ಲಿ ಅವರು ನವಿ ಮುಂಬಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗುದ್ದಲಿಪೂಜೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಇದೇ ಸಮಾರಂಭದಲ್ಲಿ ಅವರು ಜೆ.ಎನ್.ಪಿ.ಟಿ.ಯ ನಾಲ್ಕನೇ ಕಂಟೈನರ್ ಟರ್ಮಿನಲ್ ಅನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಜಾಗತಿಕ ಹೂಡಿಕೆದಾರರ ಸಮಾವೇಶ‘ಮ್ಯಾಗ್ನೆಟಿಕ್ ಮಹಾರಾಷ್ಟ್ರ:ಕನ್ವರ್ಜೆನ್ಸ್ 2018’ಅನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ. ಪ್ರಧಾನಿಯವರು ಮುಂಬೈ ವಿಶ್ವವಿದ್ಯಾನಿಲಯದಲ್ಲಿ ವಾದ್ವಾನಿ ಕೃತಕ ಬುದ್ಧಿಮತ್ತೆ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ.
ಪ್ರಧಾನಿಯವರು, ನಂತರ ಕರ್ನಾಟಕದ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಫೆಬ್ರವರಿ 19ರಂದು, ಹೈದ್ರಾಬಾದ್ ನಲ್ಲಿ ನಡೆಯುವ ಮಾಹಿತಿ ತಂತ್ರಜ್ಞಾನ ಕುರಿತ ವಿಶ್ವ ಸಮಾವೇಶ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಭಾಷಣ ಮಾಡಲಿದ್ದಾರೆ.
ಬಾಹುಬಲಿ ಮಹಾ ಮಸ್ತಕಾಭಿಷೇಕಕ್ಕಾಗಿ ಅವರು ಶ್ರವಣಬೆಳಗೊಳಕ್ಕೂ ಭೇಟಿ ನೀಡಲಿದ್ದಾರೆ. ಮೈಸೂರು ರೈಲು ನಿಲ್ದಾಣದಲ್ಲಿ ನಡೆವ ಸಮಾರಂಭದಲ್ಲಿ ಅವರು, ಮೈಸೂರು – ಬೆಂಗಳೂರು ವಿದ್ಯುದ್ದೀಕರಣಗೊಂಡ ರೈಲು ಮಾರ್ಗವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಮೈಸೂರು ಮತ್ತು ಉದಯಪುರ ನಡುವಿನ ಪ್ಯಾಲೇಸ್ ಕ್ವೀನ್ ಹಮ್ ಸಫರ್ ಎಕ್ಸ್ ಪ್ರೆಸ್ ಗೂ ಅವರು ಹಸಿರು ನಿಶಾನೆ ತೋರಲಿದ್ದಾರೆ. ಪ್ರಧಾನಮಂತ್ರಿಯವರು ಮೈಸೂರಿನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.