ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಾಣಸಿಯ ಬಿ.ಎಚ್.ಯು.ಗೆ ಭೇಟಿ ನೀಡಿದ್ದರು. ಅವರು ಪಂಡಿತ್ ಮದನ್ ಮೋಹನ ಮಾಳವೀಯ ಅವರ ಪುತ್ಥಳಿ ಮತ್ತು ವಾರಾಣಸಿ ಘಾಟ್ ಗಳ ಭಿತ್ತಿ ಚಿತ್ರಗಳನ್ನು ಅನಾವರಣ ಮಾಡಿದರು. ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.
ಉತ್ತರ ಪ್ರದೇಶದ ರಾಜ್ಯಪಾಲ ಶ್ರೀ ರಾಮ್ ನಾಯಕ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಮತ್ತು ಇತರ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಪಂಡಿತ್ ಮದನ್ ಮೋಹನ್ ಮಾಳವೀಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಲಹರ್ ತಾರಾದ ಭಾಬಾ ಕ್ಯಾನ್ಸರ್ ಆಸ್ಪತ್ರೆಯನ್ನು ಅವರು ಉದ್ಘಾಟಿಸಿದರು. ಈ ಆಸ್ಪತ್ರೆಗಳು ಉತ್ತರ ಪ್ರದೇಶ ಮತ್ತು ನೆರೆಯ ರಾಜ್ಯಗಳಾದ ಮಧ್ಯಪ್ರದೇಶ, ಛತ್ತೀಸ್ ಗಢ, ಜಾರ್ಖಂಡ್ ಮತ್ತು ಬಿಹಾರದ ರೋಗಿಗಳಿಗೆ ಸಮಗ್ರ ಚಿಕಿತ್ಸೆ ಒದಗಿಸಲಿವೆ.