ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಇತ್ತೀಚೆಗೆ ಭಾರತ ಸರಕಾರದಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ 170 ಮಂದಿ ಯುವ ಐ.ಎ.ಎಸ್. ಅಧಿಕಾರಿಗಳ ಜೊತೆ ಸಂವಾದ ನಡೆಸಿದರು.
ಅವರ ತರಬೇತಿ ಕ್ಷೇತ್ರದ ಬಗ್ಗೆ ಮಾಹಿತಿ , ಅನುಭವ ಹಂಚಿಕೊಳ್ಳುವಂತೆ ಪ್ರಧಾನ ಮಂತ್ರಿಯವರು ಅವರಿಗೆ ಪ್ರೋತ್ಸಾಹ ನೀಡಿದರು. ಉತ್ತಮ ಆಡಳಿತ, ಜನ ಭಾಗೀದಾರಿ, ಮಾಹಿತಿ ಪ್ರಸಾರ, ಸಂಪನ್ಮೂಲಗಳ ಅತ್ಯುತ್ತಮ ಬಳಕೆ ಮತ್ತು ಸರಕಾರದಲ್ಲಿ ಜನರ ವಿಶ್ವಾಸ ಕುರಿತಂತೆ ಕೆಲವು ಸಂಗತಿಗಳ ಬಗ್ಗೆ ಪ್ರಧಾನಿಯವರು ಚರ್ಚಿಸಿದರು.
ಗ್ರಾಮ ಸ್ವರಾಜ್ ಅಭಿಯಾನ ಮತ್ತು ಆಯುಷ್ಮಾನ ಭಾರತವೂ ಸೇರಿದಂತೆ ಸರಕಾರದ ಇತ್ತೀಚಿನ ಉಪಕ್ರಮಗಳ ಬಗ್ಗೆಯೂ ಚರ್ಚೆಯಲ್ಲಿ ಪ್ರಸ್ತಾಪಿಸಲಾಯಿತು.
ಪ್ರಧಾನ ಮಂತ್ರಿಗಳ ಕಚೇರಿಯ ಸಹಾಯಕ ಸಚಿವರಾದ ಡಾ. ಜಿತೇಂದ್ರ ಸಿಂಗ್ ಮತ್ತು ಸಿಬ್ಬಂದಿ ಹಾಗು ತರಬೇತಿ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಈ ಸಂಧರ್ಭದಲ್ಲಿ ಹಾಜರಿದ್ದರು.